Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 29:10 - ಕನ್ನಡ ಸತ್ಯವೇದವು J.V. (BSI)

10 ಕೊಲೆಪಾತಕರು ನಿರ್ದೋಷಿಯನ್ನು ದ್ವೇಷಿಸುವರು; ಯಥಾರ್ಥವಂತರ ಪ್ರಾಣಕ್ಕೂ ಹೊಂಚುಹಾಕುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಕೊಲೆಪಾತಕರು ನಿರ್ದೋಷಿಯನ್ನು ದ್ವೇಷಿಸುವರು, ಯಥಾರ್ಥವಂತನ ಪ್ರಾಣಕ್ಕೂ ಹೊಂಚುಹಾಕುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಕೊಲೆಪಾತಕರು ನೀತಿವಂತನನ್ನು ದ್ವೇಷಿಸುವರು; ಅಂಥವನ ಪ್ರಾಣಕ್ಕೂ ಹೊಂಚುಹಾಕುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಕೊಲೆಗಾರರು ಯಥಾರ್ಥವಂತರನ್ನು ಯಾವಾಗಲೂ ದ್ವೇಷಿಸುವರು. ಆ ಕೆಡುಕರು ಅವರನ್ನು ಕೊಲ್ಲಬಯಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಕೊಲೆಪಾತಕರು ಪ್ರಾಮಾಣಿಕರನ್ನು ದ್ವೇಷಿಸುತ್ತಾರೆ. ಆದರೆ ಯಥಾರ್ಥವಂತರನ್ನು ನಾಶಮಾಡಲು ಯತ್ನಿಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 29:10
24 ತಿಳಿವುಗಳ ಹೋಲಿಕೆ  

ಸಹೋದರರೇ, ಇಸ್ರಾಯೇಲ್ಯರು ರಕ್ಷಣೆಹೊಂದಬೇಕೆಂಬದೇ ನನ್ನ ಮನೋಭಿಲಾಷೆಯೂ ದೇವರಿಗೆ ನಾನು ಮಾಡುವ ವಿಜ್ಞಾಪನೆಯೂ ಆಗಿದೆ.


ಯೇಸುಸ್ವಾವಿುಯೇ, ನನ್ನಾತ್ಮವನ್ನು ಸೇರಿಸಿಕೋ ಎಂದು ಪ್ರಾರ್ಥಿಸಿ ಮೊಣಕಾಲೂರಿ - ಕರ್ತನೇ, ಈ ಪಾಪವನ್ನು ಅವರ ಮೇಲೆ ಹೊರಿಸಬೇಡವೆಂದು ಮಹಾಶಬ್ದದಿಂದ ಕೂಗಿದನು.


ನಾನಂತೂ ನನಗೆ ಬೇಕಾದ ಸಾಕ್ಷಿಯನ್ನು ಮನುಷ್ಯರಿಂದ ತಕ್ಕೊಳ್ಳುವದಿಲ್ಲ; ಆದರೂ ನಿಮಗೆ ರಕ್ಷಣೆ ಆಗಬೇಕೆಂದು ಇದನ್ನು ಹೇಳಿದ್ದೇನೆ.


ಆಗ ಯೇಸು - ತಂದೆಯೇ, ಅವರಿಗೆ ಕ್ಷವಿುಸು; ತಾವು ಏನು ಮಾಡುತ್ತೇವೆಂಬದನ್ನು ಅರಿಯರು ಅಂದನು. ಆಮೇಲೆ ಆತನ ಬಟ್ಟೆಗಳನ್ನು ಪಾಲುಮಾಡಿ ಚೀಟು ಹಾಕಿದರು.


ನಮಗೋಸ್ಕರ ಯೆಹೋವನ ಸನ್ನಿಧಿಯಲ್ಲಿ ವಿಚಾರಿಸಬಲ್ಲವನಾದ ಇನ್ನೊಬ್ಬ ಪ್ರವಾದಿಯಿರುತ್ತಾನೆ; ಅವನು ಇಮ್ಲನ ಮಗನಾದ ಮೀಕಾಯೆಹು ಎಂಬವನು. ಆದರೆ ನಾನು ಅವನನ್ನು ಹಗೆಮಾಡುತ್ತೇನೆ; ಅವನು ನನ್ನನ್ನು ಕುರಿತು ಯಾವಾಗಲೂ ಶುಭವನ್ನಲ್ಲ, ಅಶುಭವನ್ನೇ ಮುಂತಿಳಿಸುತ್ತಾನೆ ಎಂದು ಉತ್ತರಕೊಟ್ಟನು. ಅದಕ್ಕೆ ಯೆಹೋಷಾಫಾಟನು - ಅರಸನು ಹಾಗೆ ಹೇಳಬಾರದು ಅಂದನು.


ನಮಗೋಸ್ಕರ ಯೆಹೋವನ ಸನ್ನಿಧಿಯಲ್ಲಿ ವಿಚಾರಿಸಬಲ್ಲವನಾದ ಇನ್ನೊಬ್ಬ ಪ್ರವಾದಿಯಿರುತ್ತಾನೆ; ಅವನು ಇಮ್ಲನ ಮಗನಾದ ಮೀಕಾಯೆಹು ಎಂಬವನು. ಆದರೆ ನಾನು ಅವನನ್ನು ಹಗೆಮಾಡುತ್ತೇನೆ; ಅವನು ನನ್ನನ್ನು ಕುರಿತು ಯಾವಾಗಲೂ ಶುಭವನ್ನಲ್ಲ, ಅಶುಭವನ್ನೇ ಮುಂತಿಳಿಸುತ್ತಾನೆ ಎಂದು ಉತ್ತರಕೊಟ್ಟನು. ಅದಕ್ಕೆ ಯೆಹೋಷಾಫಾಟನು - ಅರಸನು ಹಾಗನ್ನದಿರಲಿ ಅಂದನು.


ಅಹಾಬನು ಎಲೀಯನನ್ನು ಕಂಡು ಅವನನ್ನು - ನನ್ನ ವೈರಿಯೇ, ನೀನು ನನ್ನನ್ನು ಕಂಡುಕೊಂಡಿಯಾ ಎಂದು ಕೇಳಲು ಅವನು - ಹೌದು, ಕಂಡುಕೊಂಡೆನು; ನೀನು ನಿನ್ನನ್ನು ಪಾಪಕ್ಕೆ ಮಾರಿಬಿಟ್ಟು ಯೆಹೋವನ ದೃಷ್ಟಿಯಲ್ಲಿ ದ್ರೋಹಿಯಾದಿಯಲ್ಲಾ.


ಮೇಲಿಗೆ ಮುಯ್ಯಾಗಿ ಕೇಡು ಆಗ ತಕ್ಕದ್ದೋ? ನನ್ನ ಪ್ರಾಣವನ್ನು ಹಿಡಿಯಬೇಕೆಂದು ಗುಂಡಿಯನ್ನು ತೋಡಿದ್ದಾರಲ್ಲಾ. ಅವರ ಮೇಲಣ ನಿನ್ನ ರೋಷವನ್ನು ತಪ್ಪಿಸಲು ನಾನು ನಿನ್ನ ಮುಂದೆ ನಿಂತುಕೊಂಡು ಅವರ ಹಿತಕ್ಕಾಗಿ ವಿಜ್ಞಾಪಿಸಿಕೊಂಡದ್ದನ್ನು ಚಿತ್ತವಿಸು.


ಕೆಡುಕರಿಂದ ಬಿಡಿಸು; ಕೊಲೆಪಾತಕರಿಂದ ನನ್ನನ್ನು ರಕ್ಷಿಸು.


ಮೂರ್ಖನ ಸಂಗಡ ಜ್ಞಾನಿಯು ವ್ಯಾಜ್ಯವಾಡುವಾಗ ರೇಗಿದರೂ ನಕ್ಕರೂ ಜಗಳವು ತೀರುವದಿಲ್ಲ.


ಶಿಷ್ಟರಿಗೆ ದುರ್ಮಾರ್ಗಿಯು ಅಸಹ್ಯನು; ದುಷ್ಟರಿಗೆ ಸರಳಮಾರ್ಗಿಯು ಅಸಹ್ಯನು.


ಇಷ್ಟಸಿದ್ಧಿ ಮನಸ್ಸಿಗೆ ಸಿಹಿ; ಕೆಟ್ಟದ್ದನ್ನು ಬಿಡುವದು ಮೂಢರಿಗೆ ಕಹಿ.


ಅರಮನೆಯ ಕಂಚುಕಿಯಾದ ಎಬೆದ್ಮೆಲೆಕನೆಂಬ ಕೂಷ್ಯನು ಯೆರೆಮೀಯನನ್ನು ಬಾವಿಯಲ್ಲಿ ಹಾಕಿದ್ದಾರೆಂದು ಕೇಳಿದಾಗ


ಈ ಪ್ರಕಾರ ಅವರು ಯೆರೆಮೀಯನನ್ನು ಹಗ್ಗಗಳ ಮೂಲಕ ಸೇದಿಕೊಂಡು ಬಾವಿಯಿಂದ ಮೇಲಕ್ಕೆ ಎತ್ತಿದರು; ಆಮೇಲೆ ಯೆರೆಮೀಯನು [ಹಿಂದಿನಂತೆ] ಕಾರಾಗೃಹದ ಅಂಗಳದಲ್ಲಿ ವಾಸಿಸುತ್ತಿದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು