Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 29:15 - ಕನ್ನಡ ಸತ್ಯವೇದವು J.V. (BSI)

15 ಬೆತ್ತಬೆದರಿಕೆಗಳಿಂದ ಜ್ಞಾನವುಂಟಾಗುವದು; ಶಿಕ್ಷಿಸದೆ ಬಿಟ್ಟ ಹುಡುಗನು ತಾಯಿಯ ಮಾನವನ್ನು ಕಳೆಯುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಬೆತ್ತ ಮತ್ತು ಬೆದರಿಕೆಗಳಿಂದ ಜ್ಞಾನವುಂಟಾಗುವುದು, ಶಿಕ್ಷಿಸದೆ ಬಿಟ್ಟ ಹುಡುಗನು ತಾಯಿಯ ಮಾನವನ್ನು ಕಳೆಯುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಬೆತ್ತ ಬೆದರಿಕೆಗಳು ಜ್ಞಾನ ತರುತ್ತವೆ; ಶಿಕ್ಷಿಸದೆ ಬಿಟ್ಟ ಮಗನು ತಾಯಿಗೆ ತರುತ್ತಾನೆ ಅಪಕೀರ್ತಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಶಿಕ್ಷೆಯು ಮತ್ತು ತಿದ್ದುಪಡಿಯು ಮಕ್ಕಳನ್ನು ಜ್ಞಾನಿಗಳನ್ನಾಗಿ ಮಾಡುತ್ತವೆ. ಶಿಸ್ತುಪಡಿಸಿಲ್ಲದ ಯೌವನಸ್ಥನು ತನ್ನ ತಾಯಿಯನ್ನು ನಾಚಿಕೆಗೆ ಗುರಿಪಡಿಸುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಬೆತ್ತ ಮತ್ತು ಬೆದರಿಕೆಗಳು ಜ್ಞಾನವನ್ನುಂಟುಮಾಡುತ್ತವೆ; ಆದರೆ ಶಿಕ್ಷಿಸದೆ ಬಿಟ್ಟ ಹುಡುಗನು ತನ್ನ ತಾಯಿಗೆ ಅವಮಾನವನ್ನು ತರುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 29:15
13 ತಿಳಿವುಗಳ ಹೋಲಿಕೆ  

ಜ್ಞಾನಹೀನನಾದ ಮಗನು ತಂದೆಗೆ ಕಿರಿಕಿರಿ, ತಾಯಿಗೆ ಕರಕರೆ.


ಮಗನನ್ನು ಶಿಕ್ಷಿಸು; ನಿನ್ನನ್ನು ಸುಧಾರಿಸುವನು; ಅವನೇ ನಿನ್ನ ಆತ್ಮಕ್ಕೆ ಮೃಷ್ಟಾನ್ನವಾಗುವನು.


ಬೆತ್ತ ಹಿಡಿಯದ ಪಿತ ಪುತ್ರನಿಗೆ ಶತ್ರು; ಚೆನ್ನಾಗಿ ಶಿಕ್ಷಿಸುವ ಪಿತ ಪುತ್ರನಿಗೆ ವಿುತ್ರ.


ಸೊಲೊಮೋನನ ಜ್ಞಾನೋಕ್ತಿಗಳು. ಮಗನು ಜ್ಞಾನಿಯಾದರೆ ತಂದೆಗೆ ಸುಖ; ಅಜ್ಞಾನಿಯಾದರೆ ತಾಯಿಗೆ ದುಃಖ.


ನಡೆಯಬೇಕಾದ ಮಾರ್ಗಕ್ಕೆ ತಕ್ಕಂತೆ ಹುಡುಗನನ್ನು ಶಿಕ್ಷಿಸು; ಮುಪ್ಪಿನಲ್ಲಿಯೂ ಓರೆಯಾಗನು.


ಮೂರ್ಖತನವು ಹುಡುಗನ ಮನಸ್ಸಿಗೆ ಸಹಜ, ಆದರೆ ಶಿಕ್ಷಕನ ಬೆತ್ತವು ಅದನ್ನು ತೊಲಗಿಸುವದು.


ಹೆಡ್ಡನನ್ನು ಹೆತ್ತವನಿಗೆ ವ್ಯಥೆ, ಮೂರ್ಖನ ತಂದೆಗೆ ವ್ಯಸನ.


ಸುಗ್ಗಿಯಲ್ಲಿ ಕೂಡಿಸುವವನು ಬುದ್ಧಿವಂತನು; ಕೊಯ್ಲಿನಲ್ಲಿ ತೂಕಡಿಸುವವನು ನಾಚಿಕೆಗೆಟ್ಟವನು.


ಅವನ ತಂದೆಯು - ನೀನು ಹಾಗೆ ಹೀಗೆ ಮಾಡಿದ್ದೇಕೆ ಎಂದು ಅವನನ್ನು ಒಂದು ಸಾರಿಯಾದರೂ ಗದರಿಸಿದ್ದು ಇರಲಿಲ್ಲ. ಅವನು ಬಹುಸುಂದರನು. ಅಬ್ಷಾಲೋಮನ ತರುವಾಯ ಅವನೇ ಹಿರಿಯನು.


ಆಳನ್ನು ಚಿಕ್ಕತನದಿಂದ ಕೋಮಲವಾಗಿ ಸಾಕಿದರೆ ತರುವಾಯು ಅವನು ಎದುರುಬೀಳುವನು.


ಬುದ್ಧಿ ಬರುವದೆಂದು ಮಗನನ್ನು ಶಿಕ್ಷಿಸು; ಹಾಳುಮಾಡಲು ಮನಸ್ಸುಮಾಡಬೇಡ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು