Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 29:2 - ಕನ್ನಡ ಸತ್ಯವೇದವು J.V. (BSI)

2 ಶಿಷ್ಟರ ವೃದ್ಧಿ ಜನರಿಗೆ ಉಲ್ಲಾಸ; ದುಷ್ಟನ ಆಳಿಕೆ ಜನರಿಗೆ ನರಳಾಟ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಶಿಷ್ಟರ ವೃದ್ಧಿ ಜನರಿಗೆ ಉಲ್ಲಾಸ, ದುಷ್ಟನ ಆಳ್ವಿಕೆ ಜನರಿಗೆ ನರಳಾಟ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಸಜ್ಜನರ ಅಧಿಕಾರದಿಂದ ಜನರಿಗೆ ನಲಿದಾಟ; ದುರ್ಜನರ ಆಳ್ವಿಕೆಯಿಂದ ಜನರಿಗೆ ನರಳಾಟ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಅಧಿಪತಿಯು ಒಳ್ಳೆಯವನಾಗಿರುವಾಗ ಜನರೆಲ್ಲರೂ ಸಂತೋಷವಾಗಿರುವರು. ಕೆಡುಕನು ಆಳುವಾಗ ಜನರೆಲ್ಲರೂ ಸಂಕಟಪಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಶಿಷ್ಟರು ಅಧಿಕಾರಕ್ಕೆ ಬಂದರೆ ಜನರು ಹರ್ಷಿಸುತ್ತಾರೆ. ಆದರೆ ದುಷ್ಟರು ಆಳಿದರೆ, ಜನರಿಗೆ ನರಳಾಟ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 29:2
16 ತಿಳಿವುಗಳ ಹೋಲಿಕೆ  

ಶಿಷ್ಟರಿಗೆ ಉಲ್ಲಾಸವಾದರೆ ದೊಡ್ಡ ಸಂಭ್ರಮವಾಗುವದು; ದುಷ್ಟರಿಗೆ ಏಳಿಗೆಯಾದರೆ ಜನರು ಅಡಗಿಕೊಳ್ಳುವರು.


ಸಜ್ಜನರು ಸುಖಿಗಳಾದರೆ ಪಟ್ಟಣಕ್ಕೆ ಉಲ್ಲಾಸ; ದುರ್ಜನರು ಹಾಳಾದರೆ ಜಯಘೋಷ.


ದುಷ್ಟರು ಎದ್ದರೆ ಜನರು ಅಡಗಿಕೊಳ್ಳುವರು; ನಾಶನವಾದರೆ ಶಿಷ್ಟರು ವೃದ್ಧಿಯಾಗುವರು.


ಮೊರ್ದೆಕೈಯಾದರೋ ನೀಲ ಶುಭ್ರವರ್ಣಗಳುಳ್ಳ ರಾಜವಸ್ತ್ರಗಳನ್ನು ಧರಿಸಿ ಬಂಗಾರದ ದೊಡ್ಡ ಪಟ್ಟಿಯನ್ನು ಹಣೆಗೆ ಕಟ್ಟಿಕೊಂಡು ರಕ್ತವರ್ಣದ ನಾರಿನ ಶಾಲನ್ನು ಹೊದ್ದು ರಾಜಸನ್ನಿಧಿಯಿಂದ ಹೊರಟನು. ಶೂಷನ್ ಪಟ್ಟಣದಲ್ಲಿ ಸಂತೋಷದ ಆರ್ಭಟವು ಕೇಳಿಸಿತು.


ಲೋಕದಲ್ಲಿ ಒಂದು ಸಂಕಟವನ್ನು ಕಂಡಿದ್ದೇನೆ. ಅದು ದೊರೆಯ ಪ್ರಮಾದದಿಂದಾದದ್ದೆಂದು ತೋರುತ್ತದೆ;


ಏಳನೆಯ ದೇವದೂತನು ತುತೂರಿಯನ್ನೂದಿದನು. ಆಗ ಪರಲೋಕದಲ್ಲಿ ಮಹಾ ಶಬ್ದಗಳುಂಟಾಗಿ - ಲೋಕದ ರಾಜ್ಯಾಧಿಕಾರವು ನಮ್ಮ ಕರ್ತನಿಗೂ ಆತನು ಅಭಿಷೇಕಿಸಿದವನಿಗೂ ಉಂಟಾಯಿತು; ಆತನು ಯುಗಯುಗಾಂತರಗಳಲ್ಲಿಯೂ ರಾಜ್ಯವನ್ನಾಳುವನು ಎಂದು ಹೇಳಿದವು.


ಈ ನಿರ್ಣಯವು ಶೂಷನ್ ಕೋಟೆಯಲ್ಲಿ ಪ್ರಕಟವಾದಾಗಲೇ ಅಂಚೆಯವರು ರಾಜಾಜ್ಞೆಯ ಮೇರೆಗೆ ಶೀಘ್ರವಾಗಿ ಹೊರಟರು. ಅರಸನಾದರೋ ಹಾಮಾನನೊಡನೆ ಸುರಾಪಾನ ಮಾಡುವದಕ್ಕೆ ಕೂತುಕೊಂಡನು. ಅತ್ತ ಶೂಷನ್ ಪಟ್ಟಣದಲ್ಲಿ ತಳಮಳ ಉಂಟಾಯಿತು.


ಆಗ ಹೆರೋದನು ತನಗೆ ಜೋಯಿಸರು ಮೋಸ ಮಾಡಿದರೆಂದು ತಿಳಿದು ಬಹಳ ಸಿಟ್ಟಾಗಿ ಆಳುಗಳನ್ನು ಕಳುಹಿಸಿ ತಾನು ಜೋಯಿಸರಿಂದ ತಿಳುಕೊಂಡ ಕಾಲಕ್ಕೆ ಸರಿಯಾಗಿ, ಬೇತ್ಲೆಹೇವಿುನಲ್ಲಿಯೂ ಅದರ ಎಲ್ಲಾ ನೆರೆಹೊರೆ ಹಳ್ಳಿಗಳಲ್ಲಿಯೂ ಎರಡು ವರುಷದೊಳಗಿನ ಗಂಡುಕೂಸುಗಳನ್ನೆಲ್ಲಾ ಕೊಲ್ಲಿಸಿದನು.


ಇದನ್ನು ಕೇಳಿ ಅರಸನಾದ ಹೆರೋದನೂ ಅವನ ಕೂಡ ಯೆರೂಸಲೇವಿುನವರೆಲ್ಲರೂ ಕಳವಳಪಟ್ಟರು.


ಭ್ರಷ್ಟನು ಆಳಬಾರದು, ಯಾರೂ ಜನರಿಗೆ ಉರುಲಾಗಕೂಡದು ಎಂಬದೇ ಆತನ ಉದ್ದೇಶ.


ಬಡವರಾದ ಪ್ರಜೆಗಳನ್ನು ಆಳುವ ದುಷ್ಟರಾಜನು ಗರ್ಜಿಸುವ ಸಿಂಹ, ಹುಡುಕಾಡುವ ಕರಡಿ.


ಮೂಢರಿಗೆ ಮಹಾಪದವಿ ದೊರೆತಿರುವದು, ಘನವಂತರು ಹೀನ ಸ್ಥಿತಿಯಲ್ಲಿರುವರು.


ಆಮೇಲೆ ತಿರಿಗಿ ದೃಷ್ಟಿಸಿ ಲೋಕದಲ್ಲಿನ ಹಿಂಸೆಗಳನ್ನೆಲ್ಲಾ ನೋಡಿದೆನು; ಆಹಾ, ಹಿಂಸೆಗೊಂಡವರ ಕಣ್ಣೀರು ಏನೆಂದು ಹೇಳಲಿ! ಸಂತಯಿಸುವವರು ಯಾರೂ ಇರಲಿಲ್ಲ; ಹಿಂಸಕರಿಗೆ ಬಹು ಬಲ; ಸಂತಯಿಸುವವರೋ ಒಬ್ಬರೂ ಇರಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು