Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 29:20 - ಕನ್ನಡ ಸತ್ಯವೇದವು J.V. (BSI)

20 ದುಡುಕಿ ಮಾತಾಡುವವನನ್ನು ನೋಡು; ಅಂಥವನಿಗಿಂತಲೂ ಮೂಢನ ವಿಷಯದಲ್ಲಿ ಹೆಚ್ಚು ನಿರೀಕ್ಷೆಯನ್ನಿಡಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ದುಡುಕಿ ಮಾತನಾಡುವವನನ್ನು ನೋಡು, ಅಂಥವನಿಗಿಂತಲೂ ಮೂಢನ ವಿಷಯದಲ್ಲಿ ಹೆಚ್ಚು ನಿರೀಕ್ಷೆಯನ್ನು ಇಡಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ದುಡುಕಿ ಮಾತಾಡುವವನನ್ನು ನೋಡು; ಅಂಥವನಿಗಿಂತಲು ಮೂಢನ ಸುಧಾರಣೆ ಹೆಚ್ಚು ಸಾಧ್ಯ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ವಿವೇಚಿಸದೆ ಮಾತಾಡುವವನನ್ನು ನೀನು ಕಂಡಿರುವಿಯೋ? ಅವನಿಗಿಂತಲೂ ಮೂಢನಿಗೇ ಹೆಚ್ಚು ನಿರೀಕ್ಷೆಯಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ದುಡುಕಿ ಮಾತನಾಡುವ ವ್ಯಕ್ತಿಯನ್ನು ನೀನು ನೋಡಿದ್ದೀಯೋ? ಅಂಥವನಿಗಿಂತಲೂ ಬುದ್ಧಿಹೀನನ ವಿಷಯದಲ್ಲಿ ಹೆಚ್ಚು ನಿರೀಕ್ಷೆ ಇದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 29:20
9 ತಿಳಿವುಗಳ ಹೋಲಿಕೆ  

ನನ್ನ ಪ್ರಿಯ ಸಹೋದರರೇ, ನೀವು ಬಲ್ಲವರು. ಆದರೆ ಪ್ರತಿಯೊಬ್ಬನು ಕಿವಿಗೊಡುವದರಲ್ಲಿ ತೀವ್ರವಾಗಿಯೂ ಮಾತಾಡುವದರಲ್ಲಿ ನಿಧಾನವಾಗಿಯೂ ಇರಲಿ. ಕೋಪಿಸುವದರಲ್ಲಿಯೂ ನಿಧಾನವಾಗಿರಲಿ;


ತಾನೇ ಜ್ಞಾನಿಯೆಂದೆಣಿಸಿಕೊಳ್ಳುವವನನ್ನು ನೋಡು; ಅಂಥವನಿಗಿಂತಲೂ ಮೂಢನ ವಿಷಯದಲ್ಲಿ ಹೆಚ್ಚು ನಿರೀಕ್ಷೆಯನ್ನಿಡಬಹುದು.


ದೀರ್ಘಶಾಂತನು ಕೇವಲ ಬುದ್ಧಿವಂತನು; ಮುಂಗೋಪಿಯು ಮೂರ್ಖತನವನ್ನು [ಧ್ವಜವಾಗಿ] ಎತ್ತುವನು.


ಬಾಯಿದುಡುಕಬೇಡ, ದೇವರ ಮುಂದೆ ಮಾತಾಡಲು ನಿನ್ನ ಹೃದಯದಲ್ಲಿ ಆತುರಪಡದಿರು; ದೇವರು ಆಕಾಶದಲ್ಲಿದ್ದಾನಲ್ಲವೆ, ನೀನು ಭೂವಿುಯಲ್ಲಿದ್ದೀ; ಆದಕಾರಣ ನಿನ್ನ ಮಾತುಗಳು ಕೊಂಚವಾಗಿರಲಿ.


ಶ್ರಮಶೀಲರಿಗೆ ತಮ್ಮ ಯತ್ನಗಳಿಂದ ಸಮೃದ್ಧಿ; ಆತುರಪಡುವವರಿಗೆಲ್ಲಾ ಕೊರತೆಯೇ.


ಮೂಢನು ತನ್ನ ಕೋಪವನ್ನೆಲ್ಲಾ ತೋರಿಸುವನು; ಜ್ಞಾನಿಯು ತನ್ನ ಕೋಪವನ್ನು ತಡೆದು ಶಮನಪಡಿಸಿಕೊಳ್ಳುವನು.


ತಿಳುವಳಿಕೆಯಿಲ್ಲದೆ ಕೋರುವದು ಅಯುಕ್ತ; ದುಡುಕುವ ಕಾಲು ದಾರಿ ತಪ್ಪುವದು.


ಆಳು ಮಾತಿನಿಂದ ಮಾತ್ರ ಶಿಕ್ಷಿತನಾಗಲಾರನು; ಅವನು ತಿಳಿದುಕೊಂಡರೂ ಗಮನಿಸನು.


ಆಳನ್ನು ಚಿಕ್ಕತನದಿಂದ ಕೋಮಲವಾಗಿ ಸಾಕಿದರೆ ತರುವಾಯು ಅವನು ಎದುರುಬೀಳುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು