Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 29:3 - ಕನ್ನಡ ಸತ್ಯವೇದವು J.V. (BSI)

3 ಜ್ಞಾನಾಸಕ್ತನು ತಂದೆಯನ್ನು ಹರ್ಷಗೊಳಿಸುವನು; ವೇಶ್ಯಾಸಂಗಿಯು ಆಸ್ತಿಯನ್ನು ಹಾಳುಮಾಡಿಕೊಳ್ಳುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಜ್ಞಾನವನ್ನು ಪ್ರೀತಿಸುವವನು ತಂದೆಯನ್ನು ಹರ್ಷಗೊಳಿಸುವನು, ವೇಶ್ಯೆಯ ಸಂಗಡಿಗನು ಆಸ್ತಿಯನ್ನು ಹಾಳುಮಾಡಿಕೊಳ್ಳುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಜ್ಞಾನಪ್ರಿಯ ಮಗನಿಂದ ತಂದೆಗೆ ಸಂತೋಷ; ವೇಶ್ಯೆಯರ ಸಂಗದಿಂದ ಆಸ್ತಿ ವಿನಾಶ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಜ್ಞಾನವನ್ನು ಪ್ರೀತಿಸುವವನ ತಂದೆ ಬಹು ಸಂತೋಷವಾಗಿರುವನು. ಆದರೆ ಸೂಳೆಯರ ಸಹವಾಸ ಮಾಡುವವನು ತನ್ನ ಐಶ್ವರ್ಯವನ್ನು ಕಳೆದುಕೊಳ್ಳುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಜ್ಞಾನಪ್ರಿಯನು ತಂದೆಗೆ ಆನಂದ ಆದರೆ ವೇಶ್ಯೆಯರ ಸಹವಾಸದಿಂದ ಆಸ್ತಿಯ ವಿನಾಶ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 29:3
14 ತಿಳಿವುಗಳ ಹೋಲಿಕೆ  

ಮಗನೇ, ಜ್ಞಾನವನ್ನು ಪಡೆದುಕೊಂಡು ನನ್ನ ಮನಸ್ಸನ್ನು ಸಂತೋಷಪಡಿಸು; ಹಾಗಾದರೆ, ನನ್ನನ್ನು ದೂರುವವನಿಗೆ ನಾನು ಉತ್ತರ ಕೊಡಲಾಗುವದು.


ಆದರೆ ಸೂಳೆಯರನ್ನು ಕಟ್ಟಿಕೊಂಡು ನಿನ್ನ ಬದುಕನ್ನು ನುಂಗಿಬಿಟ್ಟ ಈ ನಿನ್ನ ಮಗನು ಬಂದಾಗ ಕೊಬ್ಬಿಸಿದ ಕರುವನ್ನು ಅವನಿಗೆ ಕೊಯ್ಸಿದಿ ಎಂದು ಉತ್ತರಕೊಟ್ಟನು.


ಜ್ಞಾನವಂತನಾದ ಮಗನು ತಂದೆಯನ್ನು ಉಲ್ಲಾಸಗೊಳಿಸುವನು; ಜ್ಞಾನಹೀನನು ತಾಯಿಯನ್ನು ತಿರಸ್ಕರಿಸುವನು.


ಸೊಲೊಮೋನನ ಜ್ಞಾನೋಕ್ತಿಗಳು. ಮಗನು ಜ್ಞಾನಿಯಾದರೆ ತಂದೆಗೆ ಸುಖ; ಅಜ್ಞಾನಿಯಾದರೆ ತಾಯಿಗೆ ದುಃಖ.


ಸ್ವಲ್ಪ ದಿವಸದ ಮೇಲೆ ಆ ಕಿರೀಮಗನು ಎಲ್ಲಾ ಕೂಡಿಸಿಕೊಂಡು ದೂರದೇಶಕ್ಕೆ ಹೊರಟು ಹೋಗಿ ಅಲ್ಲಿ ಪಟಿಂಗನಾಗಿ ಬದುಕಿ ತನ್ನ ಆಸ್ತಿಯನ್ನು ಸೂರೆಮಾಡಿಬಿಟ್ಟನು.


ಧರ್ಮೋಪದೇಶವನ್ನು ಕೈಕೊಳ್ಳುವವನು ವಿವೇಕಿಯಾದ ಮಗನು; ಹೊಟ್ಟೆಬಾಕರ ಗೆಳೆಯನು ತಂದೆಯ ಮಾನವನ್ನು ಕಳೆಯುವನು.


ವೇಶ್ಯೆಯಿಂದ ಯಾವನಿಗಾದರೂ ಒಂದು ರೊಟ್ಟಿ ಮಾತ್ರ ಗತಿಯಾಗುವದು, ಪರಸ್ತ್ರೀಯೋ ಅಮೂಲ್ಯವಾದ ಜೀವವನ್ನು ಬೇಟೆಯಾಡುವಳು.


ಭೋಗಾಸಕ್ತನು ಕೊರತೆಪಡುವನು; ದ್ರಾಕ್ಷಾರಸವನ್ನೂ [ಸುಗಂಧ] ತೈಲವನ್ನೂ ಆಶಿಸುವವನು ನಿರ್ಭಾಗ್ಯನಾಗುವನು.


ದುಡಿದು ಹೊಲಗೇಯುವವನಿಗೆ ಹೊಟ್ಟೆ ತುಂಬಾ ಅನ್ನ; ವ್ಯರ್ಥಕಾರ್ಯಾಸಕ್ತನಿಗೆ ಹೊಟ್ಟೆ ತುಂಬಾ ಬಡತನ.


ಕಂದಾ, ನಿನ್ನ ಮನಸ್ಸಿಗೆ ಜ್ಞಾನವುಂಟಾದರೆ ನನ್ನ ಮನಸ್ಸಿಗೂ ಉಲ್ಲಾಸವಾಗುವದು.


ಜ್ಞಾನಿಯ ನಿವಾಸದಲ್ಲಿ ಎಣ್ಣೆಯೂ ಶ್ರೇಷ್ಠ ಸಂಪತ್ತೂ ಇರುವವು, ಜ್ಞಾನಹೀನನು ಇದ್ದದ್ದನ್ನೆಲ್ಲಾ ನುಂಗಿಬಿಡುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು