Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 3:18 - ಕನ್ನಡ ಸತ್ಯವೇದವು J.V. (BSI)

18 ಜ್ಞಾನವು ತನ್ನನ್ನು ಹಿಡಿದುಕೊಳ್ಳುವವರಿಗೆ ಜೀವದ ಮರವಾಗಿದೆ; ಅದನ್ನು ಅವಲಂಬಿಸುವ ಪ್ರತಿಯೊಬ್ಬನೂ ಧನ್ಯನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಜ್ಞಾನವು ತನ್ನನ್ನು ಹಿಡಿದುಕೊಳ್ಳುವವರಿಗೆ ಜೀವವೃಕ್ಷವಾಗಿದೆ. ಅದನ್ನು ಅವಲಂಬಿಸುವ ಪ್ರತಿಯೊಬ್ಬನೂ ಧನ್ಯನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ತನ್ನನ್ನು ಅಪ್ಪಿಕೊಂಡವರಿಗೆ ಜ್ಞಾನವು ಜೀವವೃಕ್ಷ; ಅದನ್ನು ಅವಲಂಬಿಸುವ ಪ್ರತಿಯೊಬ್ಬನಿಗೆ ಸೌಭಾಗ್ಯ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಜ್ಞಾನವು ತನ್ನನ್ನು ಅವಲಂಬಿಸಿಕೊಳ್ಳುವವರಿಗೆ ಜೀವದಾಯಕ ಮರದಂತಿದೆ. ಅದನ್ನು ಹೊಂದಿರುವವರು ಧನ್ಯರಾಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಜ್ಞಾನವನ್ನು ಹಿಡಿದುಕೊಳ್ಳುವವರಿಗೆ ಜ್ಞಾನವು ಜೀವವೃಕ್ಷವಾಗಿದೆ; ಅದನ್ನು ಭದ್ರವಾಗಿ ಇಟ್ಟುಕೊಳ್ಳುವವರು ಧನ್ಯರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 3:18
11 ತಿಳಿವುಗಳ ಹೋಲಿಕೆ  

ಧರ್ಮಾತ್ಮನ ಫಲ ಜೀವವೃಕ್ಷ; ಜ್ಞಾನಿಯು ಆತ್ಮಗಳನ್ನು ಆಕರ್ಷಿಸುವನು.


ಸಂತೈಸುವ ನಾಲಿಗೆ ಜೀವವೃಕ್ಷವು; ಬಲಾತ್ಕರಿಸುವ ನಾಲಿಗೆ ಮನಮುರಿಯುವದು.


ದೇವರಾತ್ಮನು ಸಭೆಗಳಿಗೆ ಹೇಳುವದನ್ನು ಕಿವಿಯುಳ್ಳವನು ಕೇಳಲಿ. ಯಾವನು ಜಯಹೊಂದುತ್ತಾನೋ ಅವನಿಗೆ ದೇವರ ಪರದೈಸಿನಲ್ಲಿರುವ ಜೀವದಾಯಕ ವೃಕ್ಷದ ಹಣ್ಣನ್ನು ತಿನ್ನುವದಕ್ಕೆ ಕೊಡುವೆನು.


ಕೋರಿದ್ದಕ್ಕೆ ತಡವಾದರೆ ಮನಸ್ಸು ಬಳಲುವದು; ಕೈಗೂಡಿದ ಇಷ್ಟಾರ್ಥವು ಜೀವವೃಕ್ಷವು.


ಮತ್ತು ಯೆಹೋವದೇವರು - ಈ ಮನುಷ್ಯನು ಒಳ್ಳೇದರ ಕೆಟ್ಟದ್ದರ ಭೇದವನ್ನರಿತು ನಮ್ಮಲ್ಲಿ ಒಬ್ಬನಂತಾದನಲ್ಲಾ. ಇದರಿಂದ ಇವನು ಕೈಚಾಚಿ ಜೀವವೃಕ್ಷದ ಫಲವನ್ನು ಸಹ ತೆಗೆದು ತಿಂದು ಶಾಶ್ವತವಾಗಿ ಬದುಕುವವನಾಗಬಾರದು ಅಂದುಕೊಂಡು


ಮತ್ತು ಯೆಹೋವದೇವರು ನೋಟಕ್ಕೆ ರಮ್ಯವಾಗಿಯೂ ಊಟಕ್ಕೆ ಅನುಕೂಲವಾಗಿಯೂ ಇರುವ ಎಲ್ಲಾ ತರದ ಮರಗಳನ್ನು ಆ ಭೂವಿುಯಲ್ಲಿ ಬೆಳೆಯ ಮಾಡಿದನು. ಅದಲ್ಲದೆ ಆ ವನಮಧ್ಯದಲ್ಲಿ ಜೀವದಾಯಕ ವೃಕ್ಷವನ್ನೂ ಒಳ್ಳೇದರ ಕೆಟ್ಟದ್ದರ ಅರುಹನ್ನು ಹುಟ್ಟಿಸುವ ವೃಕ್ಷವನ್ನೂ ಬೆಳೆಯಿಸಿದನು.


ಆ ನದಿಯ ಉಭಯ ಪಾರ್ಶ್ವಗಳಲ್ಲಿ ಜೀವವೃಕ್ಷವಿತ್ತು; ಅದು ತಿಂಗಳು ತಿಂಗಳಿಗೆ ಫಲವನ್ನು ಫಲಿಸುತ್ತಾ ಹನ್ನೆರಡು ತರದ ಫಲಗಳನ್ನು ಕೊಡುತ್ತದೆ. ಆ ಮರದ ಎಲೆಗಳು ಜನಾಂಗದವರನ್ನು ವಾಸಿಮಾಡುವದಕ್ಕೆ ಪ್ರಯೋಜನವಾಗಿವೆ.


ಸದುಪದೇಶವನ್ನು ಹಿಡಿ, ಸಡಿಲಬಿಡಬೇಡ; ಅದನ್ನು ಕಾಪಾಡಿಕೋ, ಅದೇ ನಿನ್ನ ಜೀವವು.


ನನ್ನ ದ್ವಾರಗಳ ಬಳಿಯಲ್ಲಿ ಪ್ರತಿದಿನವೂ ಕಾಯುತ್ತಾ ಬಾಗಲಿನ ನಿಲವುಗಳ ಹತ್ತಿರ ಜಾಗರೂಕನಾಗಿ ನನ್ನ ಮಾತುಗಳನ್ನು ಕೇಳುವವನು ಭಾಗ್ಯವಂತನು.


ಧನವು ಹೇಗೋ ಹಾಗೆ ಜ್ಞಾನವೂ ಆಶ್ರಯ; ಜ್ಞಾನಕ್ಕೆ ವಿಶೇಷವೇನಂದರೆ ತನ್ನನ್ನು ಹೊಂದಿದವನಿಗೆ ಅದು ಜೀವದಾಯಕವೆಂಬದೇ.


ಮಕ್ಕಳಿರಾ, ಈಗ ನನ್ನ ಕಡೆಗೆ ಕಿವಿಗೊಡಿರಿ, ನನ್ನ ಮಾರ್ಗಗಳನ್ನು ಅನುಸರಿಸುವವರು ಧನ್ಯರೇ ಸರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು