Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 3:2 - ಕನ್ನಡ ಸತ್ಯವೇದವು J.V. (BSI)

2 ಅವು ನಿನ್ನ ದಿನಗಳನ್ನು ಹೆಚ್ಚಿಸಿ ನಿನ್ನ ಆಯುಷ್ಯವನ್ನು ವೃದ್ಧಿಗೊಳಿಸಿ ನಿನಗೆ ಸುಕ್ಷೇಮವನ್ನುಂಟುಮಾಡುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಅವು ನಿನ್ನ ದಿನಗಳನ್ನು ಹೆಚ್ಚಿಸಿ, ನಿನ್ನ ಆಯುಷ್ಯವನ್ನು ವೃದ್ಧಿಗೊಳಿಸಿ, ನಿನಗೆ ಸುಕ್ಷೇಮವನ್ನು ಉಂಟುಮಾಡುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಅವು ನಿನ್ನ ದಿನಗಳನ್ನು ಹೆಚ್ಚಿಸುತ್ತವೆ; ನಿನಗೆ ದೀರ್ಘಾಯುಸ್ಸನ್ನು ತರುತ್ತವೆ, ನಿನಗೆ ಸುಕ್ಷೇಮವನ್ನು ಉಂಟುಮಾಡುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಅವು ನಿನಗೆ ದೀರ್ಘಾಯುಷ್ಯವನ್ನು ನೀಡಿ ಸಂತೋಷ ಸಮಾಧಾನಗಳಿಂದ ಕೂಡಿದ ಜೀವಿತವನ್ನು ಕೊಡುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಏಕೆಂದರೆ ಅವು ನಿನ್ನ ದಿನಗಳನ್ನು ಹೆಚ್ಚಿಸಿ ದೀರ್ಘಾಯುಷ್ಯವನ್ನು ನೀಡುವುದು, ಸಮಾಧಾನವನ್ನೂ ಸಮೃದ್ಧಿಯನ್ನೂ ನಿನಗೆ ಕೊಡುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 3:2
22 ತಿಳಿವುಗಳ ಹೋಲಿಕೆ  

ಕಂದಾ, ಆಲಿಸಿ ನನ್ನ ಮಾತುಗಳನ್ನು ಕೇಳು; ಕೇಳಿದರೆ, ನಿನ್ನ ಜೀವಮಾನದ ವರುಷಗಳು ಹೆಚ್ಚುವವು.


ನನ್ನಿಂದ ನಿನ್ನ ದಿನಗಳು ಹೆಚ್ಚುವವು, ನಿನ್ನ ಆಯುಸ್ಸಿನ ವರುಷಗಳು ವೃದ್ಧಿಯಾಗುವವು.


ದೀರ್ಘಾಯುಷ್ಯವನ್ನು ಅನುಗ್ರಹಿಸಿ ಅವನನ್ನು ತೃಪ್ತಿಪಡಿಸುವೆನು; ನನ್ನ ವಿಶೇಷವಾದ ರಕ್ಷಣೆಯನ್ನು ತೋರಿಸುವೆನು.


ನಿರೀಕ್ಷೆಯ ಮೂಲನಾದ ದೇವರು ನಂಬಿಕೆಯಿಂದುಂಟಾಗುವ ಸಂತೋಷವನ್ನೂ ಮನಶ್ಶಾಂತಿಯನ್ನೂ ನಿಮಗೆ ಪರಿಪೂರ್ಣವಾಗಿ ದಯಪಾಲಿಸಿ ನೀವು ಪವಿತ್ರಾತ್ಮನ ಬಲಗೂಡಿದವರಾಗಿ ನಿರೀಕ್ಷೆಯಲ್ಲಿ ಅಭಿವೃದ್ಧಿಯನ್ನು ಹೊಂದುವಂತೆ ಅನುಗ್ರಹಿಸಲಿ.


ಮಕ್ಕಳ ಮಕ್ಕಳನ್ನು ಕಾಣುವವನಾಗು. ಇಸ್ರಾಯೇಲ್ಯರಿಗೆ ಶುಭವಾಗಲಿ.


ನಿನ್ನ ಧರ್ಮಶಾಸ್ತ್ರವನ್ನು ಪ್ರೀತಿಸುವವರಿಗೆ ಸಂಪೂರ್ಣ ಸಮಾಧಾನವಿರುತ್ತದೆ; ಅಂಥವರಿಗೆ ವಿಘ್ನಕರವಾದದ್ದೇನೂ ಇರುವದಿಲ್ಲ.


ಯೆಹೋವನಿಗೆ ಭಯಪಡುವವರ ದಿನಗಳಿಗೆ ವೃದ್ಧಿ; ದುಷ್ಟರ ವರುಷಗಳಿಗೆ ಕ್ಷಯ.


ದೇಹಸಾಧನೆಯು ಸ್ವಲ್ಪಮಟ್ಟಿಗೆ ಪ್ರಯೋಜನವಾಗಿದೆ, ಭಕ್ತಿಯಾದರೋ ಎಲ್ಲಾ ವಿಧದಲ್ಲಿ ಪ್ರಯೋಜನವಾದದ್ದು; ಅದಕ್ಕೆ ಇಹಪರಗಳಲ್ಲಿಯೂ ಜೀವವಾಗ್ದಾನ ಉಂಟು.


ಹೀಗಿರಲಾಗಿ ನಾವು ನಂಬಿಕೆಯಿಂದ ನೀತಿವಂತರಾದ ಕಾರಣ ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೂಲಕ ದೇವರೊಂದಿಗೆ ಉಂಟಾದ ಸಮಾಧಾನದಲ್ಲಿ ಇರೋಣ.


ಅವನು ದೀರ್ಘಾಯುಷ್ಯವನ್ನು ಬೇಡಿಕೊಳ್ಳಲು ನೀನು ಯುಗಯುಗಾಂತರಗಳ ಆಯುಷ್ಯವನ್ನು ಅನುಗ್ರಹಿಸಿದ್ದೀ.


ಯಾಕಂದರೆ ತಿನ್ನುವದೂ ಕುಡಿಯುವದೂ ದೇವರ ರಾಜ್ಯವಲ್ಲ; ನೀತಿಯೂ ಸಮಾಧಾನವೂ ಪವಿತ್ರಾತ್ಮನಿಂದಾಗುವ ಆನಂದವೂ ಆಗಿದೆ.


ಧರ್ಮದಿಂದ ಸಮಾಧಾನವು ಫಲಿಸುವದು, ಶಾಂತಿ ನಿರ್ಭಯಗಳು ಧರ್ಮದ ನಿತ್ಯಪರಿಣಾಮವಾಗಿರುವವು.


ಸುಗ್ಗೀಕಾಲದಲ್ಲಿ ತೆನೆಸಿವುಡು [ಮನೆಗೆ] ಸೇರುವಂತೆ ನೀನು ವೃದ್ಧಾಪ್ಯದಲ್ಲಿ ಸಮಾಧಿಗೆ ಸೇರುವಿ.


ಹೀಗಾದರೆ ಭೂವಿುಯ ಮೇಲೆ ಆಕಾಶವು ಎಷ್ಟು ಕಾಲ ನಿಂತಿರುವದೋ ಅಷ್ಟು ಕಾಲ ನೀವೂ ನಿಮ್ಮ ಸಂತತಿಯವರೂ ನಿಮ್ಮ ಪಿತೃಗಳಿಗೆ ಯೆಹೋವನು ಪ್ರಮಾಣಪೂರ್ವಕವಾಗಿ ವಾಗ್ದಾನ ಮಾಡಿದ ಆ ದೇಶದಲ್ಲಿ ಬಾಳುವಿರಿ.


ನೀನು ನಿನ್ನ ತಂದೆಯಾದ ದಾವೀದನಂತೆ ನನ್ನ ಮಾರ್ಗದಲ್ಲಿ ನಡೆದು ನನ್ನ ಆಜ್ಞಾವಿಧಿಗಳನ್ನು ಕೈಕೊಳ್ಳುವದಾದರೆ ನಿನ್ನ ಆಯುಷ್ಯವನ್ನು ಹೆಚ್ಚಿಸುವೆನು ಅಂದನು.


ನರೆಗೂದಲೇ ಸುಂದರ ಕಿರೀಟವು; ಅದು ಧರ್ಮಮಾರ್ಗದಲ್ಲಿ ದೊರಕುವದು.


ಆದದರಿಂದ ನೀವು ಸ್ವಲ್ಪವಾದರೂ ತಪ್ಪದೆ ನಿಮ್ಮ ದೇವರಾದ ಯೆಹೋವನು ಆಜ್ಞಾಪಿಸಿದಂತೆಯೇ ನಡೆದುಕೊಳ್ಳಬೇಕು.


ತಂದೆಯು ನನಗೆ ಬೋಧಕನಾಗಿ ಹೀಗೆಂದನು - ನಿನ್ನ ಮನಸ್ಸು ನನ್ನ ಮಾತುಗಳನ್ನು ಹಿಡಿದುಕೊಳ್ಳಲಿ, ನನ್ನ ಆಜ್ಞೆಯನ್ನು ಕೈಕೊಂಡು ಸುಖವಾಗಿ ಬಾಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು