Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 3:20 - ಕನ್ನಡ ಸತ್ಯವೇದವು J.V. (BSI)

20 ಭೂವಿುಯ ಕೆಳಗಣ ಸಾಗರವು ಒಡೆದದ್ದಕ್ಕೂ ಆಕಾಶವು ಇಬ್ಬನಿಯನ್ನು ಸುರಿಸುವದಕ್ಕೂ ಆತನ ತಿಳುವಳಿಕೆಯೇ ಸಾಧನವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಭೂಮಿಯ ಕೆಳಗಿನ ಸಾಗರವು ಒಡೆದದ್ದಕ್ಕೂ, ಆಕಾಶವು ಇಬ್ಬನಿಯನ್ನು ಸುರಿಸುವುದಕ್ಕೂ ಆತನ ತಿಳಿವಳಿಕೆಯೇ ಸಾಧನ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಆತನ ಜ್ಞಾನದಿಂದಲೆ ಅಡಿಸಾಗರ ಒಡೆಯುತ್ತದೆ ಆಕಾಶಮಂಡಲ ಇಬ್ಬನಿಯನ್ನು ಸುರಿಸುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ಯೆಹೋವನು ತನ್ನ ತಿಳುವಳಿಕೆಯಿಂದ ಸಮುದ್ರಗಳನ್ನು ವಿಭಜಿಸಿದನು. ಮೋಡವು ಮಳೆಸುರಿಸುವುದಕ್ಕೆ ಆತನ ತಿಳುವಳಿಕೆಯೇ ಕಾರಣ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ದೇವರು ತಮ್ಮ ಅರಿವಿನಿಂದಲೇ ಸೆಲೆಗಳು ಒಡೆದು, ಮೇಘಗಳು ಇಬ್ಬನಿಯನ್ನು ಸುರಿಸುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 3:20
13 ತಿಳಿವುಗಳ ಹೋಲಿಕೆ  

ನೋಹನ ಜೀವಮಾನದ ಆರುನೂರನೆಯ ವರುಷದ ಎರಡನೆಯ ತಿಂಗಳಿನ ಹದಿನೇಳನೆಯ ದಿನದಲ್ಲಿ ಭೂವಿುಯ ಕೆಳಗಿರುವ ಸಾಗರದ ಸೆಲೆಗಳು ಒಡೆದವು; ಆಕಾಶದ ತೂಬುಗಳು ತೆರೆದವು.


ದೇವರು ನಿನಗೆ ಆಕಾಶದ ಮಂಜನ್ನೂ ಸಾರವುಳ್ಳ ಭೂವಿುಯನ್ನೂ ಕೊಟ್ಟು ದವಸಧಾನ್ಯಗಳನ್ನೂ ದ್ರಾಕ್ಷಾರಸವನ್ನೂ ಹೇರಳವಾಗಿ ಅನುಗ್ರಹಿಸಲಿ.


ಅನಂತರ ದೇವರು - ಆಕಾಶದ ಕೆಳಗಿರುವ ನೀರೆಲ್ಲಾ ಒಂದೇ ಸ್ಥಳದಲ್ಲಿ ಕೂಡಿಕೊಳ್ಳಲಿ, ಒಣನೆಲವು ಕಾಣಿಸಲಿ ಅಂದನು; ಹಾಗೆಯೇ ಆಯಿತು.


ಚೀಯೋನಿನ ಸಂತತಿಯವರೇ, ನಿಮ್ಮ ದೇವರಾದ ಯೆಹೋವನಲ್ಲಿ ಹರ್ಷಿಸಿರಿ, ಉಲ್ಲಾಸಿಸಿರಿ; ಆತನು ಮುಂಗಾರನ್ನು ತಕ್ಕ ಹಾಗೆ ನಿಮಗೆ ಕೊಡುವನು; ಮುಂಗಾರು ಹಿಂಗಾರು ಮಳೆಗಳನ್ನು ಮೊದಲಿನಂತೆ ನಿಮಗಾಗಿ ಸುರಿಸುವನು.


ಜನಾಂಗಗಳ ವ್ಯರ್ಥವಿಗ್ರಹಗಳೊಳಗೆ ಮಳೆಯನ್ನು ಸುರಿಸಬಲ್ಲವುಗಳುಂಟೇ? ಆಕಾಶವು ತಾನಾಗಿ ಹದಮಳೆಗಳನ್ನು ಕೊಟ್ಟೀತೇ? ನಮ್ಮ ದೇವರಾದ ಯೆಹೋವಾ, ನೀನೇ ವೃಷ್ಟಿಪ್ರದನು; ನಾವು ನಿನ್ನನ್ನೇ ನಿರೀಕ್ಷಿಸುವೆವು; ನೀನು ಇವುಗಳನ್ನೆಲ್ಲಾ ನಡಿಸುವವನಾಗಿದ್ದೀಯಷ್ಟೆ.


ಆದಕಾರಣ ಇಸ್ರಾಯೇಲ್ಯರು ಆಕಾಶದಿಂದ ಮಂಜು ಸುರಿದು ಧಾನ್ಯವೂ ದ್ರಾಕ್ಷಾರಸವೂ ಸಮೃದ್ಧಿಯಾಗಿರುವ ದೇಶದಲ್ಲೇ ಸೇರಿ ನಿರ್ಭಯವಾಗಿ ವಾಸಿಸುವವರಾದರು, ಯಾಕೋಬ್‍ಸಂಭವರು ಸುರಕ್ಷಿತರಾದರು.


ಜಲನಿಧಿಗಳಾಗಲಿ ನೀರುತುಂಬಿದ ಬುಗ್ಗೆಗಳಾಗಲಿ ಇಲ್ಲದಿರುವಾಗ ನಾನು ಹುಟ್ಟಿದೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು