Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 3:25 - ಕನ್ನಡ ಸತ್ಯವೇದವು J.V. (BSI)

25 ಫಕ್ಕನೆ ಬರುವ ಅಪಾಯಕ್ಕಾಗಲಿ ದುಷ್ಟರಿಗೆ ಸಂಭವಿಸುವ ನಾಶನಕ್ಕಾಗಲಿ ನೀನು ಅಂಜುವದೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಪಕ್ಕನೆ ಬರುವ ಅಪಾಯಕ್ಕಾಗಲಿ ಅಥವಾ ದುಷ್ಟರಿಗೆ ಸಂಭವಿಸುವ ನಾಶನಕ್ಕಾಗಲಿ ನೀನು ಅಂಜುವುದೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

25 ಆಕಸ್ಮಿಕ ಅಪಾಯಕ್ಕೆ ನೀನು ಅಂಜಲಾರೆ, ದುರುಳರಿಗೆ ಬಂದೊದಗುವ ನಾಶಕ್ಕೆ ಹೆದರಲಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 ದುಷ್ಟರ ಮೇಲೆ ಇದ್ದಕ್ಕಿದ್ದಂತೆ ಬರುವ ಅಪಾಯಕ್ಕಾಗಲಿ ನಾಶನಕ್ಕಾಗಲಿ ಹೆದರಿಕೊಳ್ಳಬೇಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ಆಕಸ್ಮಿಕ ವಿಪತ್ತಿಗೆ ನೀನು ಅಂಜುವುದಿಲ್ಲ; ದುಷ್ಟರ ಮೇಲೆ ಬರುವ ನಾಶನಕ್ಕೂ ನೀನು ಭಯಪಡದಿರುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 3:25
22 ತಿಳಿವುಗಳ ಹೋಲಿಕೆ  

ಅವನಿಗೆ ಕೆಟ್ಟ ಸುದ್ದಿಯ ಭಯವಿರುವದಿಲ್ಲ; ಯೆಹೋವನಲ್ಲಿ ಭರವಸವಿಟ್ಟಿರುವದರಿಂದ ಅವನ ಮನಸ್ಸು ಸ್ಥಿರವಾಗಿರುವದು.


ಒಂದು ವೇಳೆ ನೀತಿಯ ನಿವಿುತ್ತವೇ ಬಾಧೆಪಟ್ಟರೆ ನೀವು ಧನ್ಯರೇ.


ಇರುಳಲ್ಲಿ ಭಯಹುಟ್ಟಿಸುವ ಯಾವದಕ್ಕೂ ಹಗಲಲ್ಲಿ ಹಾರಿಬರುವ ಬಾಣಕ್ಕೂ


ನಿಮ್ಮ ಹೃದಯವು ಕಳವಳಗೊಳ್ಳದೆ ಇರಲಿ; ದೇವರನ್ನು ನಂಬಿರಿ, ನನ್ನನ್ನೂ ನಂಬಿರಿ.


ತರುವಾಯ ಆತನು ಅವರನ್ನು - ಯಾಕೆ ಧೈರ್ಯಗೆಡುತ್ತೀರಿ? ಇನ್ನೂ ನಿಮಗೆ ನಂಬಿಕೆಯಿಲ್ಲವೇ ಎಂದು ಕೇಳಲು ಅವರು ಬಹು ಭಯಪಟ್ಟು -


ಇದಲ್ಲದೆ ಯುದ್ಧಗಳಾಗುವದನ್ನೂ ಯುದ್ಧವಾಗುವ ಹಾಗಿದೆ ಎಂಬ ಸುದ್ದಿಗಳನ್ನೂ ನೀವು ಕೇಳಬೇಕಾಗಿರುವದು. ಕಳವಳಪಡದಂತೆ ನೋಡಿಕೊಳ್ಳಿರಿ; ಯಾಕಂದರೆ ಹಾಗಾಗುವದು ಅಗತ್ಯ. ಆದರೂ ಇದು ಇನ್ನೂ ಅಂತ್ಯಕಾಲವಲ್ಲ.


ಅವರು ನಿವಿುಷಮಾತ್ರದಲ್ಲಿಯೇ ಹಾಳಾಗಿ ಹೋಗುತ್ತಾರೆ; ಭಯಂಕರರೀತಿಯಿಂದ ಸಂಹಾರವಾಗಿ ಮುಗಿದು ಹೋಗುತ್ತಾರೆ.


ಇದಲ್ಲದೆ ಯುದ್ಧಗಳೂ ಗಲಿಬಿಲಿಗಳೂ ಆಗುವದನ್ನು ನೀವು ಕೇಳುವಾಗ ದಿಗಿಲುಪಡಬೇಡಿರಿ; ಯಾಕಂದರೆ ಇದೆಲ್ಲಾ ಮೊದಲು ಆಗುವದು ಅಗತ್ಯ; ಆದರೂ ಕೂಡಲೆ ಅಂತ್ಯ ಬರುವದಿಲ್ಲ ಅಂದನು.


ಆದದರಿಂದ ಪ್ರವಾದಿಯಾದ ದಾನಿಯೇಲನು ಹೇಳಿದಂಥ ಹಾಳುಮಾಡುವ ಅಸಹ್ಯ ವಸ್ತುವು ಪವಿತ್ರಸ್ಥಾನದಲ್ಲಿ ನಿಂತಿರುವದನ್ನು ನೀವು ಕಾಣುವಾಗ (ಇದನ್ನು ಓದುವವನು ತಿಳುಕೊಳ್ಳಲಿ)


ನಿಮ್ಮ ಅಪಾಯದಲ್ಲಿ ನಾನೂ ನಗುವೆನು; ನಿಮ್ಮ ಆಪತ್ತಿನಲ್ಲಿ ಪರಿಹಾಸ್ಯಮಾಡುವೆನು.


ಧರ್ಮವೇ ನಿನಗೆ ಆಧಾರ; ನೀನು ಹಿಂಸೆಗೆ ದೂರವಾಗಿರುವಿ, ನಿನಗೆ ಹೆದರಿಕೆ ಇರುವದಿಲ್ಲ, ನಾಶನವು ದೂರವಾಗಿರುವದು, ನಿನ್ನ ಹತ್ತಿರಕ್ಕೆಬಾರದು.


ಒಬ್ಬೊಬ್ಬನು ತನ್ನ ತನ್ನ ದ್ರಾಕ್ಷಾಲತೆ, ಅಂಜೂರಗಿಡ, ಇವುಗಳ ನೆರಳಿನಲ್ಲಿ ಕೂತುಕೊಳ್ಳುವನು; ಅವರನ್ನು ಯಾರೂ ಹೆದರಿಸರು; ಸೇನಾಧೀಶ್ವರನಾದ ಯೆಹೋವನ ಬಾಯೇ ಇದನ್ನು ನುಡಿದಿದೆ.


ಯಾರೂ ಹಾದುಹೋಗಿ ಬಾರದಂತೆ ನನ್ನ ಆಲಯದ ಸುತ್ತಲು ಪಾಳೆಯಹಾಕಿ ಕಾವಲಾಗಿರುವೆನು; ಇನ್ನು ಮುಂದೆ ಯಾವ ಬಾಧಕನೂ ನನ್ನ ಜನರ ಮೇಲೆ ಬೀಳನು; ಏಕಂದರೆ ಈಗ ನಾನು ಕಣ್ಣಿಟ್ಟು ನೋಡುತ್ತಿದ್ದೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು