Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 3:35 - ಕನ್ನಡ ಸತ್ಯವೇದವು J.V. (BSI)

35 ಜ್ಞಾನವಂತರು ಸನ್ಮಾನಕ್ಕೆ ಬಾಧ್ಯರಾಗುವರು; ಜ್ಞಾನಹೀನರಿಗಾಗುವ ಬಹುಮಾನವೋ ಅವಮಾನವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

35 ಜ್ಞಾನವಂತರು ಸನ್ಮಾನಕ್ಕೆ ಬಾಧ್ಯರಾಗುವರು, ಜ್ಞಾನಹೀನರಿಗಾಗುವ ಬಹುಮಾನವು ಅವಮಾನವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

35 ಜ್ಞಾನಿಗಳಿಗೆ ಲಭಿಸುವುದು ಸನ್ಮಾನ; ಜ್ಞಾನಹೀನರಿಗೆ ಸಿಗುವ ಸಂಭಾವನೆ ಅವಮಾನ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

35 ಜ್ಞಾನಿಗಳು ಸನ್ಮಾನ ಹೊಂದುವರು; ಮೂಢರಿಗೆ ಅವಮಾನವಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

35 ಜ್ಞಾನಿಗಳು ಸನ್ಮಾನಕ್ಕೆ ಬಾಧ್ಯನಾಗುವರು; ಆದರೆ ಜ್ಞಾನಹೀನರ ಪ್ರತಿಫಲವು ಅವಮಾನವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 3:35
11 ತಿಳಿವುಗಳ ಹೋಲಿಕೆ  

ಅವನ ವೈರಿಗಳನ್ನು ನಾಚಿಕೆಯೆಂಬ ವಸ್ತ್ರದಿಂದ ಹೊದಿಸುವೆನು; ಆದರೆ ಅವನ ಮೇಲೆ ಕಿರೀಟವು ಶೋಭಿಸುತ್ತಿರುವದು.


ನಿನ್ನ ಚಿತ್ತವನ್ನು ತಿಳಿಯಪಡಿಸಿ ನನ್ನನ್ನು ನಡಿಸಿ ತರುವಾಯ ಮಹಿಮೆಗೆ ಸೇರಿಸಿಕೊಳ್ಳುವಿ.


ನಿನ್ನ ಗೋತ್ರದವರೂ ಸಂತಾನದವರೂ ನಿರಂತರವೂ ನನ್ನ ಸನ್ನಿಧಿಯಲ್ಲಿ ಸೇವೆಮಾಡಬಹುದು ಎಂದು ಆಜ್ಞಾಪಿಸಿದ ಇಸ್ರಾಯೇಲ್‍ದೇವರಾದ ಯೆಹೋವನೆಂಬ ನಾನು ಈಗ ತಿಳಿಸುವದೇನಂದರೆ - ಅದು ನನಗೆ ದೂರವಾಗಿರಲಿ; ನನ್ನನ್ನು ಸನ್ಮಾನಿಸುವವರನ್ನು ಸನ್ಮಾನಿಸುವೆನು; ನನ್ನನ್ನು ತಿರಸ್ಕರಿಸುವವರು ತಿರಸ್ಕಾರಹೊಂದುವರು.


ಧನವಂತನ ಪ್ರಾಣರಕ್ಷಣೆಗೆ ಅವನ ಧನವೇ ಈಡು; ಬಡವನಿಗೆ ಯಾವ ಬೆದರಿಕೆಯೂ ಇಲ್ಲ.


ಜ್ಞಾನವೆಂಬಾಕೆಯು ಶ್ರೇಷ್ಠಳು ಎಂದು ನೀನು ಭಾವಿಸಿದರೆ ಆಕೆಯು ನಿನ್ನನ್ನು ಉನ್ನತಿಗೆ ತರುವಳು; ಆಕೆಯನ್ನು ಅಪ್ಪಿಕೊಂಡರೆ ನಿನ್ನನ್ನು ಘನಪಡಿಸುವಳು.


ಮೂಢರೇ, ಜಾಣತನವನ್ನು ಕಲಿತುಕೊಳ್ಳಿರಿ, ಜ್ಞಾನಹೀನರೇ, ಬುದ್ಧಿಯನ್ನು ಗ್ರಹಿಸಿರಿ.


ಶಿಷ್ಟನು ಮೋಸಕ್ಕೆ ಅಸಹ್ಯಪಟ್ಟು ಮಾಡಲೊಲ್ಲನು; ದುಷ್ಟನ ನಡತೆಯು ಹೇಸಿಕೆಗೂ ನಾಚಿಕೆಗೂ ಆಸ್ಪದ.


ಬುದ್ಧಿವಂತನನ್ನು ಅವನ ಬುದ್ಧಿಗೆ ತಕ್ಕಂತೆ ಹೊಗಳುವರು; ವಕ್ರಬುದ್ಧಿಯುಳ್ಳವನನ್ನು ತಿರಸ್ಕರಿಸುವರು.


ಮತ್ತು ನಿನ್ನನ್ನೂ ಅವನನ್ನೂ ಕರೆದವನು ಬಂದು - ಇವನಿಗೆ ಸ್ಥಳಬಿಡು ಎಂದು ನಿನಗೆ ಹೇಳುವಾಗ ನೀನು ನಾಚಿಕೊಂಡು ಕಡೆಯ ಸ್ಥಾನದಲ್ಲಿ ಕೂತುಕೊಳ್ಳುವದಕ್ಕೆ ಹೋಗುವಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು