Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 3:4 - ಕನ್ನಡ ಸತ್ಯವೇದವು J.V. (BSI)

4 ಇದರಿಂದ ನೀನು ದೇವರ ಮತ್ತು ಮನುಷ್ಯರ ದಯೆಯನ್ನೂ ಸಮ್ಮತಿಯನ್ನೂ ಪಡೆದುಕೊಳ್ಳುವಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಇದರಿಂದ ನೀನು ದೇವರ ಮತ್ತು ಮನುಷ್ಯರ ದಯೆಯನ್ನೂ, ಸಮ್ಮತಿಯನ್ನೂ ಪಡೆದುಕೊಳ್ಳುವಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಆಗ ದೇವರಿಗೂ ಮಾನವರಿಗೂ ಪ್ರಿಯನಾಗುವೆ, ದಯೆ ದಾಕ್ಷಿಣ್ಯವನ್ನು ಪಡೆಯುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಆಗ ನೀನು ದೇವರಿಂದಲೂ ಮನುಷ್ಯರಿಂದಲೂ ಮೆಚ್ಚಿಕೆಯನ್ನು ಮತ್ತು ಒಳ್ಳೆಯ ಹೆಸರನ್ನು ಸಂಪಾದಿಸಿಕೊಳ್ಳುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಆಗ ದೇವರ ಮುಂದೆಯೂ ಮನುಷ್ಯರ ಮುಂದೆಯೂ ದಯೆಯನ್ನೂ, ಒಳ್ಳೆಯ ಹೆಸರನ್ನೂ ನೀನು ಪಡೆದುಕೊಳ್ಳುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 3:4
14 ತಿಳಿವುಗಳ ಹೋಲಿಕೆ  

ಯೇಸು ಜ್ಞಾನದಲ್ಲಿಯೂ ದೇಹಬಲದಲ್ಲಿಯೂ ವೃದ್ಧಿಯಾಗುತ್ತಾ ಬಂದನು; ಇದಲ್ಲದೆ ದೇವರ ಮತ್ತು ಮನುಷ್ಯರ ದಯೆಯು ಆತನ ಮೇಲೆ ಹೆಚ್ಚಾಗುತ್ತಾ ಬಂತು.


ಈ ಪ್ರಕಾರವಾಗಿ ಕ್ರಿಸ್ತನ ಸೇವೆಯನ್ನು ಮಾಡುವವನು ದೇವರಿಗೆ ಮೆಚ್ಚಿಕೆಯಾದವನಾಗಿಯೂ ಮನುಷ್ಯರಿಗೆ ಸಂಭಾವಿತನಾಗಿಯೂ ಇರುವನಷ್ಟೆ.


ಬಾಲಕನಾದ ಸಮುವೇಲನಾದರೋ ಬೆಳೆಯುತ್ತಾ ಬಂದ ಹಾಗೆಲ್ಲಾ ಯೆಹೋವನ ಮತ್ತು ಮನುಷ್ಯರ ದಯೆಗೆ ಪಾತ್ರನಾದನು.


ಯೆಹೋವನ ಭಯವೇ ಜ್ಞಾನಕ್ಕೆ ಮೂಲವು; ಆತನ ಕಟ್ಟಳೆಗಳನ್ನು ನಡಿಸುವವರು ಪೂರ್ಣ ವಿವೇಕಿಗಳು. ಆತನ ಸ್ತುತಿಯು ನಿರಂತರವಾದದ್ದು.


ಆದರೂ ಯೆಹೋವನು ಯೋಸೇಫನ ಸಂಗಡ ಇದ್ದು ಅವನ ಮೇಲೆ ಕೃಪೆಯನ್ನಿಟ್ಟು ಅವನಿಗೆ ಸೆರೆಯಜಮಾನನ ಬಳಿಯಲ್ಲಿ ದಯೆದೊರಕುವಂತೆ ಮಾಡಿದನು.


ದೇವರನ್ನು ಕೊಂಡಾಡುವವರಾಗಿಯೂ ಜನರೆಲ್ಲರ ದಯವನ್ನು ಹೊಂದುವವರಾಗಿಯೂ ಇದ್ದರು. ಕರ್ತನು ರಕ್ಷಣೆಯ ಮಾರ್ಗದಲ್ಲಿರುವವರನ್ನು ದಿನಾಲು ಅವರ ಮಂಡಲಿಗೆ ಸೇರಿಸುತ್ತಿದ್ದನು.


ದೇವರು ಕಂಚುಕಿಯರ ಅಧ್ಯಕ್ಷನ ಮನಸ್ಸಿನಲ್ಲಿ ದಾನಿಯೇಲನ ಮೇಲೆ ಕನಿಕರವನ್ನೂ ದಯೆಯನ್ನೂ ಹುಟ್ಟಿಸಿದನು.


ಯಾಕಂದರೆ ಕರ್ತನ ದೃಷ್ಟಿಯಲ್ಲಿ ಮಾತ್ರವಲ್ಲದೆ ಮನುಷ್ಯರ ದೃಷ್ಟಿಯಲ್ಲಿಯೂ ಗೌರವವಾದದ್ದನ್ನು ಯೋಚನೆಗೆ ತಂದುಕೊಳ್ಳುವವರಾಗಿದ್ದೇವೆ.


ಯಾವನು ನನ್ನನ್ನು ಹೊಂದುತ್ತಾನೋ ಅವನು ಜೀವವನ್ನು ಹೊಂದುತ್ತಾನೆ; ಯೆಹೋವನ ಕಟಾಕ್ಷಕ್ಕೆ ಗುರಿಯಾಗುವನು.


ಯೆಹೋವನು ಒಳ್ಳೆಯವನಿಗೆ ದಯೆಮಾಡುವನು; ಕುಯುಕ್ತಿಯುಳ್ಳವನನ್ನು ಕೆಟ್ಟವನೆಂದು ನಿರ್ಣಯಿಸುವನು.


ಸುಬುದ್ಧಿಯು ದಯಾಸ್ಪದವು; ದ್ರೋಹಿಯ ಮಾರ್ಗವು ನಾಶಕರ.


ಯೆಹೋವನು ಕಟಾಕ್ಷಿಸಿದದರಿಂದ ಹನ್ನಳಿಗೆ ಮೂರು ಮಂದಿ ಗಂಡು ಮಕ್ಕಳೂ ಇಬ್ಬರು ಹೆಣ್ಣುಮಕ್ಕಳೂ ಆದರು. ಬಾಲಕನಾಗಿದ್ದ ಸಮುವೇಲನು ಯೆಹೋವನ ಸನ್ನಿಧಿಯಲ್ಲೇ ದೊಡ್ಡವನಾದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು