Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 3:5 - ಕನ್ನಡ ಸತ್ಯವೇದವು J.V. (BSI)

5 ಸ್ವಬುದ್ಧಿಯನ್ನೇ ಆಧಾರಮಾಡಿಕೊಳ್ಳದೆ ಪೂರ್ಣಮನಸ್ಸಿನಿಂದ ಯೆಹೋವನಲ್ಲಿ ಭರವಸವಿಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಸ್ವಬುದ್ಧಿಯನ್ನೇ ಆಧಾರಮಾಡಿಕೊಳ್ಳದೆ ಪೂರ್ಣಮನಸ್ಸಿನಿಂದ ಯೆಹೋವನಲ್ಲಿ ಭರವಸವಿಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ನಿನ್ನ ಸ್ವಂತ ಬುದ್ಧಿಯನ್ನೇ ನೆಚ್ಚಿಕೊಂಡಿರದಿರು; ಪೂರ್ಣ ಮನಸ್ಸಿನಿಂದ ಸರ್ವೇಶ್ವರನಲ್ಲಿ ನಂಬಿಕೆಯಿಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಯೆಹೋವನಲ್ಲಿ ಸಂಪೂರ್ಣವಾಗಿ ಭರವಸೆ ಇಡು. ನಿನ್ನ ಸ್ವಂತ ಜ್ಞಾನವನ್ನು ಅವಲಂಬಿಸಬೇಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಪೂರ್ಣಹೃದಯದಿಂದ ಯೆಹೋವ ದೇವರಲ್ಲಿ ಭರವಸೆ ಇಡು ನಿನ್ನ ಸ್ವಂತ ಬುದ್ಧಿಯ ಮೇಲೆಯೇ ಆಧಾರಗೊಳ್ಳಬೇಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 3:5
24 ತಿಳಿವುಗಳ ಹೋಲಿಕೆ  

ನಿನ್ನ ಭೂಯಾತ್ರೆಯ ಚಿಂತೆಯನ್ನು ಯೆಹೋವನಿಗೆ ವಹಿಸಿಬಿಟ್ಟು ಭರವಸದಿಂದಿರು; ಆತನೇ ಅದನ್ನು ಸಾಗಿಸುವನು.


ತನ್ನಲ್ಲೇ ಭರವಸವಿಡುವವನು ಮೂಢನು; ಜ್ಞಾನದಿಂದ ನಡೆಯುವವನು ಉದ್ಧಾರವನ್ನು ಪಡೆಯುವನು.


ಯೆಹೋವನಲ್ಲಿ ಭರವಸವಿಟ್ಟು ಒಳ್ಳೆಯದನ್ನು ಮಾಡು; ದೇಶದಲ್ಲಿ ವಾಸವಾಗಿದ್ದು ನಂಬಿಕೆಯನ್ನು ಅನುಸರಿಸು.


ಜನರೇ, ಯಾವಾಗಲೂ ಆತನನ್ನೇ ನಂಬಿ ನಿಮ್ಮ ಹೃದಯವನ್ನು ಆತನ ಮುಂದೆ ಬಿಚ್ಚಿರಿ; ದೇವರು ನಮ್ಮ ಆಶ್ರಯವು. ಸೆಲಾ.


ಇಗೋ ದೇವರೇ ನನಗೆ ರಕ್ಷಣೆ, ನಾನು ಹೆದರದೆ ಭರವಸಪಡುವೆನು; ನನ್ನ ಬಲವೂ ಕೀರ್ತನೆಯೂ ಯಾಹುಯೆಹೋವನಷ್ಟೆ, ಆತನೇ ನನಗೆ ರಕ್ಷಕನಾದನು ಎಂಬದೇ.


ಯೆಹೋವನ ಸನ್ನಿಧಿಯಲ್ಲಿ ಶಾಂತನಾಗಿ ಆತನಿಗೋಸ್ಕರ ಕಾದಿರು; ಕುಯುಕ್ತಿಗಳನ್ನು ನೆರವೇರಿಸಿಕೊಂಡು ಅಭಿವೃದ್ಧಿ ಹೊಂದುವವನನ್ನು ನೋಡಿ ಉರಿಗೊಳ್ಳಬೇಡ.


ನೀನೇ ಬುದ್ಧಿವಂತನು ಎಂದೆಣಿಸದೆ ಯೆಹೋವನಿಗೆ ಭಯಪಟ್ಟು ಕೆಟ್ಟದ್ದನ್ನು ತೊರೆದುಬಿಡು.


ಯೆಹೋವನೇ, ಮಾನವನ ಮಾರ್ಗವು ಅವನ ಸ್ವಾಧೀನದಲ್ಲಿಲ್ಲವೆಂದು ನನಗೆ ಗೊತ್ತು; ಮನುಷ್ಯನು ನಡೆದಾಡುತ್ತಾ ಸರಿಯಾದ ಕಡೆಗೆ ತನ್ನ ಹೆಜ್ಜೆಯನ್ನಿಡಲಾರನು.


ನಿಮ್ಮ ನಿಮ್ಮೊಳಗೆ ಏಕಮನಸ್ಸುಳ್ಳವರಾಗಿರ್ರಿ, ದೊಡ್ಡಸ್ತಿಕೆಯ ಮೇಲೆ ಮನಸ್ಸಿಡದೆ ದೀನರ ಸಂಗಡ ಬಳಿಕೆಯಾಗಿರ್ರಿ. ನಿಮ್ಮನ್ನು ನೀವೇ ಬುದ್ಧಿವಂತರೆಂದು ಎಣಿಸಿಕೊಳ್ಳಬೇಡಿರಿ.


ಯೆಹೋವನಲ್ಲಿ ಭರವಸವಿಡುವವರು ಚೀಯೋನ್ ಪರ್ವತದ ಹಾಗೆ ಇದ್ದಾರೆ; ಅದು ಕದಲುವದಿಲ್ಲ, ಸದಾ ಸ್ಥಿರವಾಗಿರುತ್ತದೆ.


ಯೆಹೋವನು ಹೀಗನ್ನುತ್ತಾನೆ - ಜ್ಞಾನಿಯು ತನ್ನ ಜ್ಞಾನಕ್ಕೆ, ಪರಾಕ್ರವಿುಯು ತನ್ನ ಪರಾಕ್ರಮಕ್ಕೆ, ಐಶ್ವರ್ಯವಂತನು ತನ್ನ ಐಶ್ವರ್ಯಕ್ಕೆ ಹೆಚ್ಚಳಪಡದಿರಲಿ;


ನೀನು ಯೆಹೋವನಲ್ಲಿ ಭರವಸವಿಡಬೇಕೆಂದು ಅವುಗಳನ್ನು ಈ ದಿನ ನಿನಗೇ ತಿಳಿಯಪಡಿಸಿದ್ದೇನೆ.


ಆಹಾ, ಆತನು ನನ್ನನ್ನು ಕೊಲ್ಲುವನು, ಅದಕ್ಕಾಗಿ ಕಾದಿರುತ್ತೇನೆ, ಆದರೂ ನನ್ನ ನಡತೆಯ ಒಳ್ಳೇತನವನ್ನು ಆತನ ಮುಂದೆ ಸ್ಥಾಪಿಸುವೆನು.


ದುಡ್ಡಿನಾಸೆಯಿಂದ ದುಡಿಯಬೇಡ; ಸ್ವಬುದ್ಧಿಯನ್ನೇ ಆಶ್ರಯಿಸಬೇಡ.


ಒಂದೊಂದು ವೇಳೆಯಲ್ಲಿ ಮೇಘವು ಕೆಲವು ದಿವಸ ಮಾತ್ರ ಗುಡಾರದ ಮೇಲೆ ನಿಂತಿರುವದು. ಯೆಹೋವನ ಆಜ್ಞಾನುಸಾರವಾಗಿ ಅವರು ಇಳುಕೊಳ್ಳುತ್ತಿದ್ದರು, ಯೆಹೋವನ ಆಜ್ಞಾನುಸಾರವಾಗಿ ತಮ್ಮ ಡೇರೆಗಳನ್ನು ಕಿತ್ತುಕೊಂಡು ಹೊರಡುತ್ತಿದ್ದರು.


ಆ ಮೇಘವು ದೇವದರ್ಶನದ ಗುಡಾರದ ಮೇಲೆ ನಿಂತಿರುವದು ಎರಡು ದಿನವಾದರೂ ಒಂದು ತಿಂಗಳಾದರೂ ಒಂದು ವರುಷವಾದರೂ ಸರಿಯೇ, ಆ ಪರ್ಯಂತರವೂ ಇಸ್ರಾಯೇಲ್ಯರು ಪ್ರಯಾಣಮಾಡದೆ ಇಳುಕೊಂಡೇ ಇರುವರು; ಅದು ಎದ್ದಾಗ ಅವರು ಹೊರಡುವರು.


ನಾವು ಈ ಕಾರಣದಿಂದ ಉಪವಾಸಮಾಡಿ ದೇವರನ್ನು ಪ್ರಾರ್ಥಿಸಲು ಆತನು ನಮಗೆ ಪ್ರಸನ್ನನಾದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು