Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 30:22 - ಕನ್ನಡ ಸತ್ಯವೇದವು J.V. (BSI)

22 ಯಾವವಂದರೆ, ಪಟ್ಟಕ್ಕೆ ಬಂದ ದಾಸನು, ಹೊಟ್ಟೆತುಂಬಿದ ನೀಚನು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಯಾವುವೆಂದರೆ, ಪಟ್ಟಕ್ಕೆ ಬಂದ ದಾಸನು, ಹೊಟ್ಟೆತುಂಬಿದ ನೀಚನು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ಅವು ಯಾವುವೆಂದರೆ: ಅರಸನಾದ ಆಳು, ಹೊಟ್ಟೆ ತುಂಬಿಸಿಕೊಂಡು ಸುತ್ತಾಡುವ ನೀಚ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ರಾಜನಾದ ಸೇವಕ, ತನಗೆ ಅಗತ್ಯವಿರುವ ಪ್ರತಿಯೊಂದನ್ನು ಪಡೆದಿರುವ ಮೂಢ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಅರಸನಾಗುವ ದಾಸನು, ತಿನ್ನಲು ಸಾಕಷ್ಟು ಪಡೆಯುವ ಮೂರ್ಖನು,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 30:22
12 ತಿಳಿವುಗಳ ಹೋಲಿಕೆ  

ಮೂಢನಿಗೆ ಮೃದುಜೀವನವು ಅಯುಕ್ತ; ದಾಸನಿಗೆ ದೊರೆಗಳ ಮೇಲಣ ದೊರೆತನ ಇನ್ನೂ ಅಯುಕ್ತ.


ಆಳುಗಳು ಕುದುರೆಸವಾರಿ ಮಾಡುವದನ್ನೂ ಪ್ರಭುಗಳು ಆಳುಗಳಂತೆ ನೆಲದ ಮೇಲೆ ನಡೆಯುವದನ್ನೂ ನೋಡಿದ್ದೇನೆ.


ಬಡವರನ್ನು ಹಿಂಸಿಸುವ ದರಿದ್ರನು ಒಂದು ಕಾಳೂ ಉಳಿಯದಂತೆ [ಪೈರನ್ನು] ಬಡಿಯುವ ಮಳೆಯ ಹಾಗೆ.


ಅವರು ಅಲ್ಲಿಗೆ ಹೋದಾಗ ಆ ಗುಂಪಿನವರು ತಮಗೆ ಫಿಲಿಷ್ಟಿಯ ಯೆಹೂದ ಪ್ರಾಂತಗಳಲ್ಲಿ ದೊರಕಿದ ದೊಡ್ಡ ಕೊಳ್ಳೆಯ ನಿವಿುತ್ತವಾಗಿ ಸಂತೋಷಿಸಿ ಉಂಡು ಕುಡಿದು ಕುಣಿದಾಡುತ್ತಾ ಅಲ್ಲಿನ ಬೈಲಿನಲ್ಲಿ ವ್ಯಾಪಿಸಿಕೊಂಡಿದ್ದರು.


ಸ್ವಾವಿುಯು ಮೂರ್ಖನಾದ ಆ ನಾಬಾಲನನ್ನು ಲಕ್ಷಿಸದಿರಲಿ. ಅವನ ಹೆಸರು ನಾಬಾಲ್; ಅದಕ್ಕೆ ತಕ್ಕಂತೆ ಅವನು ಮೂರ್ಖನೇ ಆಗಿರುತ್ತಾನೆ. ನಿನ್ನ ದಾಸಿಯಾದ ನಾನು ಸ್ವಾವಿುಯು ಕಳುಹಿಸಿದ ಸೇವಕರನ್ನು ನೋಡಲಿಲ್ಲ.


ಅವನ ಹೆಂಡತಿಯ ಹೆಸರು ಅಬೀಗೈಲ್. ಆಕೆಯು ಬಹುಬುದ್ಧಿವಂತೆಯೂ ಸುಂದರಿಯೂ ಆಗಿದ್ದಳು; ಕಾಲೇಬನ ವಂಶದವನಾದ ಆ ಮನುಷ್ಯನು ನಿಷ್ಠುರನೂ ದುಷ್ಕರ್ಮಿಯೂ ಆಗಿದ್ದನು. ಅವನು ಬಹು ಧನವಂತನು. ಅವನಿಗೆ ಮೂರು ಸಾವಿರ ಕುರಿಗಳೂ ಸಾವಿರ ಆಡುಗಳೂ ಇದ್ದವು. ಅವನು ಒಂದು ಸಾರಿ ಕರ್ಮೆಲಿನಲ್ಲಿ ಕುರಿಗಳ ಉಣ್ಣೆಯನ್ನು ಕತ್ತರಿಸುತ್ತಿದ್ದನು.


ಮೂರರ ಭಾರದಿಂದ ಭೂವಿುಯು ಕಂಪಿಸುತ್ತದೆ, ಹೌದು, ನಾಲ್ಕರ ಹೊರೆಯನ್ನು ತಾಳಲಾರದು.


ಮದುವೆಯಾದ ಚಂಡಿಯು, ಸವತಿಯಾದ ತೊತ್ತು, ಇವೇ:


ಕರ್ಮೆಲಿನಲ್ಲಿ ಸ್ವಾಸ್ತ್ಯವಿದ್ದಂಥ ಒಬ್ಬ ಮನುಷ್ಯನು ಮಾವೋನಿನಲ್ಲಿ ವಾಸಿಸುತ್ತಿದ್ದನು; ಅವನ ಹೆಸರು ನಾಬಾಲ;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು