Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 30:3 - ಕನ್ನಡ ಸತ್ಯವೇದವು J.V. (BSI)

3 ನಾನು ಜ್ಞಾನವನ್ನು ಪಡೆದುಕೊಂಡಿಲ್ಲ, ಪರಿಶುದ್ಧನ ವಿಷಯವಾದ ತಿಳುವಳಿಕೆಯನ್ನು ಹೊಂದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ನಾನು ಜ್ಞಾನವನ್ನು ಪಡೆದುಕೊಂಡಿಲ್ಲ, ಪರಿಶುದ್ಧನ ವಿಷಯವಾದ ತಿಳಿವಳಿಕೆಯನ್ನು ಹೊಂದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಜ್ಞಾನವನ್ನು ನಾನು ಪಡೆದುಕೊಂಡಿಲ್ಲ; ಪರಮಪಾವನರ ತಿಳುವಳಿಕೆ ನನಗಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ನಾನು ಜ್ಞಾನವನ್ನು ಕಲಿತವನಲ್ಲ; ಪರಿಶುದ್ಧನಾದ ದೇವರ ಬಗ್ಗೆಯೂ ಗೊತ್ತಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ನಾನು ಜ್ಞಾನವನ್ನು ಕಲಿತುಕೊಂಡಿಲ್ಲ; ಅಲ್ಲದೆ ಪರಿಶುದ್ಧ ದೇವರ ಅರಿವು ನನಗಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 30:3
15 ತಿಳಿವುಗಳ ಹೋಲಿಕೆ  

ಫಿಲದೆಲ್ಫಿಯದಲ್ಲಿರುವ ಸಭೆಯ ದೂತನಿಗೆ ಬರೆ - ಪರಿಶುದ್ಧನೂ ಸತ್ಯವಂತನೂ ದಾವೀದನ ಬೀಗದ ಕೈಯುಳ್ಳವನೂ ಯಾರೂ ಮುಚ್ಚಕೂಡದಂತೆ ತೆರೆಯುವವನೂ ಯಾರೂ ತೆರೆಯದಂತೆ ಮುಚ್ಚುವವನೂ ಆಗಿರುವಾತನು ಹೇಳುವದೇನಂದರೆ -


ಆಹಾ, ದೇವರ ಐಶ್ವರ್ಯವೂ ಜ್ಞಾನವೂ ವಿವೇಕವೂ ಎಷ್ಟೋ ಅಗಾಧ! ಆತನ ತೀರ್ಮಾನಗಳು ಪರಿಶೋಧನೆಗೆ ಎಷ್ಟೋ ಅಗಮ್ಯ! ಆತನ ಮಾರ್ಗಗಳು ಕಂಡುಹಿಡಿಯುವದಕ್ಕೆ ಎಷ್ಟೋ ಅಸಾಧ್ಯ!


ಯೆಹೋವನ ಭಯವೇ ಜ್ಞಾನಕ್ಕೆ ಮೂಲವು, ಪರಿಶುದ್ಧನ ತಿಳುವಳಿಕೆಯೇ ವಿವೇಕವು.


ಆ ನಾಲ್ಕು ಜೀವಿಗಳೊಳಗೆ ಒಂದೊಂದಕ್ಕೆ ಆರಾರು ರೆಕ್ಕೆಗಳಿದ್ದವು; ಆ ಜೀವಿಗಳಿಗೆ ಸುತ್ತಲೂ ಒಳಗೂ ತುಂಬಾ ಕಣ್ಣುಗಳಿದ್ದವು. ಆ ಜೀವಿಗಳು ಹಗಲಿರುಳು ವಿಶ್ರವಿುಸಿಕೊಳ್ಳದೆ - ದೇವರಾದ ಕರ್ತನು ಪರಿಶುದ್ಧನು ಪರಿಶುದ್ಧನು ಪರಿಶುದ್ಧನು; ಆತನು ಸರ್ವಶಕ್ತನು, ವರ್ತಮಾನ ಭೂತ ಭವಿಷ್ಯತ್ಕಾಲಗಳಲ್ಲಿರುವಂಥವನು ಎಂದು ಹೇಳುತ್ತವೆ.


ಒಬ್ಬನೇ ಸತ್ಯದೇವರಾಗಿರುವ ನಿನ್ನನ್ನೂ ನೀನು ಕಳುಹಿಸಿಕೊಟ್ಟ ಯೇಸು ಕ್ರಿಸ್ತನನ್ನೂ ತಿಳಿಯುವದೇ ನಿತ್ಯಜೀವವು.


ಅದಕ್ಕೆ ಯೇಸು - ಯೋನನ ಮಗನಾದ ಸೀಮೋನನೇ, ನೀನು ಧನ್ಯನು; ಈ ಗುಟ್ಟು ನಿನಗೆ ತಿಳಿಸಿದವನು ನರಮನುಷ್ಯನಲ್ಲ, ಪರಲೋಕದಲ್ಲಿರುವ ನನ್ನ ತಂದೆಯೇ ತಿಳಿಸಿದನು.


ನನ್ನ ತಂದೆಯು ಎಲ್ಲವನ್ನೂ ನನಗೆ ಒಪ್ಪಿಸಿದ್ದಾನೆ. ತಂದೆಯೇ ಹೊರತು ಇನ್ನಾವನೂ ಮಗನನ್ನು ತಿಳಿದವನಲ್ಲ; ಮಗನೇ ಹೊರತು ಇನ್ನಾವನೂ ತಂದೆಯನ್ನು ತಿಳಿದವನಲ್ಲ; ಮತ್ತು ಮಗನು ತಂದೆಯನ್ನು ಯಾರಿಗೆ ಪ್ರಕಟಿಸುವದಕ್ಕೆ ಮನಸ್ಸುಳ್ಳವನಾಗಿದ್ದಾನೋ ಅವನೂ ಆತನನ್ನು ತಿಳಿದವನಾಗಿದ್ದಾನೆ.


ಸದಮಲನೆನಿಸಿಕೊಂಡು ಶಾಶ್ವತಲೋಕದಲ್ಲಿ ನಿತ್ಯನಿವಾಸಿಯಾದ ಮಹೋನ್ನತನು ಹೀಗನ್ನುತ್ತಾನೆ - ಉನ್ನತಲೋಕವೆಂಬ ಪವಿತ್ರಾಲಯದಲ್ಲಿ ವಾಸಿಸುವ ನಾನು ಜಜ್ಜಿಹೋದ ದೀನಮನದೊಂದಿಗೆ ಇದ್ದುಕೊಂಡು ದೀನನ ಆತ್ಮವನ್ನೂ ಜಜ್ಜಿಹೋದ ಮನ ಮನಸ್ಸನ್ನೂ ಉಜ್ಜೀವಿಸುವವನಾಗಿದ್ದೇನೆ.


[ನೀವು ಹಿಡಿದಿರುವ] ಮಾರ್ಗದಿಂದ ತೊಲಗಿರಿ; ನಿಮ್ಮ ದಾರಿಗೆ ಓರೆಯಾಗಿರಿ; ಇಸ್ರಾಯೇಲ್ಯರ ಸದಮಲಸ್ವಾವಿುಯನ್ನು ನಮ್ಮ ಮುಂದೆ ನಿಲ್ಲದ ಹಾಗೆ ಮಾಡಿರಿ ಎಂದು ಹೇಳುತ್ತಾರೆ.


ಕಣ್ಣಿನಿಂದ ಕಂಡು ಕಿವಿಯಿಂದ ಕೇಳಿ ಹೃದಯದಿಂದ ಗ್ರಹಿಸಿ ನನ್ನ ಕಡೆಗೆ ತಿರುಗಿಕೊಂಡು ನನ್ನಿಂದ ಸ್ವಸ್ಥತೆಯನ್ನು ಹೇಗೂ ಹೊಂದದ ಹಾಗೆ ಈ ಜನರ ಹೃದಯಕ್ಕೆ ಕೊಬ್ಬೇರಿಸಿ ಕಿವಿಯನ್ನು ಮಂದಮಾಡಿ ಕಣ್ಣಿಗೆ ಅಂಟುಬಳಿ ಎಂದು ನನಗೆ ಹೇಳಿದನು.


ಆಗ ಒಬ್ಬನು ಮತ್ತೊಬ್ಬನಿಗೆ - ಸೇನಾಧೀಶ್ವರನಾದ ಯೆಹೋವನು ಪರಿಶುದ್ಧನು, ಪರಿಶುದ್ಧನು, ಪರಿಶುದ್ಧನು; ಭೂಮಂಡಲವೆಲ್ಲಾ ಆತನ ಪ್ರಭಾವದಿಂದ ತುಂಬಿದೆ ಎಂದು ಕೂಗಿ ಹೇಳಿದನು.


ಆಕಾಶಕ್ಕೆ ಏರಿ ಇಳಿದಿರುವವನಾರು? ಮುಷ್ಟಿಯಲ್ಲಿ ಗಾಳಿಯನ್ನು ಕೂಡಿಸಿರುವವರು ಯಾರು? ತನ್ನ ಬಟ್ಟೆಯಲ್ಲಿ ನೀರನ್ನು ಮೂಟೆಕಟ್ಟಿರುವವರು ಯಾರು? ಭೂವಿುಯ ಎಲ್ಲೆಗಳನ್ನೆಲ್ಲಾ ಸ್ಥಾಪಿಸಿರುವವರು ಯಾರು? ಅವನ ಹೆಸರೇನು? ಅವನ ಮಗನ ಹೆಸರೇನು? ನೀನೇ ಬಲ್ಲವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು