Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 30:7 - ಕನ್ನಡ ಸತ್ಯವೇದವು J.V. (BSI)

7 ನಿನ್ನಿಂದ ಎರಡು ವರಗಳನ್ನು ಬೇಡಿಕೊಂಡಿದ್ದೇನೆ; ಅನುಗ್ರಹಿಸದಿರಬೇಡ, ನಾನು ಸಾಯುವದರೊಳಗಾಗಿ ಅವುಗಳನ್ನು ಕೈಗೂಡಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ನಿನ್ನಿಂದ ಎರಡು ವರಗಳನ್ನು ಬೇಡಿಕೊಂಡಿದ್ದೇನೆ, ಅನುಗ್ರಹಿಸದಿರಬೇಡ, ನಾನು ಸಾಯುವುದರೊಳಗಾಗಿ ಅವುಗಳನ್ನು ಕೈಗೂಡಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ನಿನ್ನಿಂದ ಎರಡು ವರಗಳನ್ನು ಬೇಡಿಕೊಂಡಿದ್ದೇನೆ: ನಿರಾಕರಿಸಬೇಡ, ನಾನು ಸಾಯುವುದರೊಳಗೆ ಅವುಗಳನ್ನು ಅನುಗ್ರಹಿಸು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಯೆಹೋವನೇ, ನಾನು ಸಾಯುವ ಮೊದಲು ನೀನು ನನಗೋಸ್ಕರ ಎರಡು ಕಾರ್ಯಗಳನ್ನು ಮಾಡಬೇಕೆಂದು ನಿನ್ನನ್ನು ಕೇಳಿಕೊಳ್ಳುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 “ಯೆಹೋವ ದೇವರೇ, ನಾನು ನಿಮ್ಮನ್ನು ಎರಡು ವಿಷಯಗಳನ್ನು ಕೇಳುತ್ತೇನೆ. ನಿರಾಕರಿಸಬೇಡಿ ನಾನು ಸಾಯುವ ಮೊದಲು ಅವೆರಡನ್ನು ಅನುಗ್ರಹಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 30:7
7 ತಿಳಿವುಗಳ ಹೋಲಿಕೆ  

ಕೆಲವು ಮಾತ್ರ ಬೇಕಾದದ್ದು, ಅಥವಾ ಒಂದೇ, ಮರಿಯಳು ಆ ಉತ್ತಮ ಭಾಗವನ್ನು ಆರಿಸಿಕೊಂಡಿದ್ದಾಳೆ; ಅದು ಆಕೆಯಿಂದ ತೆಗೆಯಲ್ಪಡುವದಿಲ್ಲ ಎಂದು ಉತ್ತರಕೊಟ್ಟನು.


ನನ್ನ ಜೀವಮಾನದಲ್ಲೆಲ್ಲಾ ಯೆಹೋವನ ಮನೆಯಲ್ಲಿ ವಾಸಮಾಡುತ್ತಾ ಆತನ ಪ್ರಸನ್ನತೆಯನ್ನು ನೋಡುವದಕ್ಕೂ ಆತನ ಮಂದಿರದಲ್ಲಿ ಧ್ಯಾನಮಾಡುವದಕ್ಕೂ ನನಗೆ ಅಪ್ಪಣೆಯಾಗಬೇಕೆಂಬ ಒಂದೇ ವರವನ್ನು ಯೆಹೋವನಿಂದ ಕೇಳಿಕೊಂಡು ಅದನ್ನೇ ಎದುರುನೋಡುತ್ತಿರುವೆನು.


ಅವರು ಆಚೇದಡಕ್ಕೆ ಸೇರಿದ ಮೇಲೆ ಎಲೀಯನು ಎಲೀಷನನ್ನು - ನಿನ್ನನ್ನು ಬಿಟ್ಟುಹೋಗುವ ಮೊದಲು ನಾನು ನಿನಗೋಸ್ಕರ ಏನು ಮಾಡಬೇಕನ್ನುತ್ತೀ ಹೇಳು ಎಂದು ಕೇಳಿದನು. ಅದಕ್ಕೆ ಎಲೀಷನು - ನಿನಗಿರುವ ಆತ್ಮದಲ್ಲಿ ನನಗೆ ಎರಡು ಪಾಲನ್ನು ಅನುಗ್ರಹಿಸು ಎಂದು ಬೇಡಿಕೊಂಡನು.


ನೀನು ಅವನ ಪ್ರಾರ್ಥನೆಯನ್ನು ನಿರಾಕರಿಸದೆ ಅವನ ಇಷ್ಟಾರ್ಥವನ್ನು ನೆರವೇರಿಸಿದಿಯಲ್ಲಾ. ಸೆಲಾ.


ಆತನ ಮಾತುಗಳಿಗೆ ಯಾವದನ್ನೂ ಸೇರಿಸಬೇಡ; ಆತನು ನಿನ್ನನ್ನು ಖಂಡಿಸುವಾಗ ನೀನು ಸುಳ್ಳುಗಾರನೆಂದು ತೋರಿಬಂದೀಯೆ.


ನನ್ನಿಂದ ಕಪಟವನ್ನೂ ಸುಳ್ಳುಮಾತನ್ನೂ ತೊಲಗಿಸು, ಬಡತನವನ್ನಾಗಲಿ ಐಶ್ವರ್ಯವನ್ನಾಗಲಿ ಕೊಡದೆ ನನಗೆ ತಕ್ಕಷ್ಟು ಆಹಾರವನ್ನು ಭೋಜನಮಾಡಿಸು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು