ಜ್ಞಾನೋಕ್ತಿಗಳು 30:9 - ಕನ್ನಡ ಸತ್ಯವೇದವು J.V. (BSI)9 ಹಾಗಾಗದೆ ಹೊಟ್ಟೆತುಂಬಿದವನಾದರೆ ಯೆಹೋವನು ಯಾರೋ ಎಂದು ನಿನ್ನನ್ನು ತಿರಸ್ಕರಿಸೇನು; ಬಡವನಾದರೆ ಕಳ್ಳತನಮಾಡಿ ನನ್ನ ದೇವರಾದ ನಿನ್ನ ಹೆಸರನ್ನು ಅಯೋಗ್ಯವಾಗಿ ಎತ್ತೇನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಹಾಗಾಗದೆ ಹೊಟ್ಟೆತುಂಬಿದವನಾದರೆ, “ಯೆಹೋವನು ಯಾರೋ?” ಎಂದು ನಿನ್ನನ್ನು ತಿರಸ್ಕರಿಸೇನು, ಬಡವನಾದರೆ ಕಳ್ಳತನಮಾಡಿ ನನ್ನ ದೇವರಾದ ನಿನ್ನ ಹೆಸರನ್ನು ಅಯೋಗ್ಯವಾಗಿ ಎತ್ತೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ಎಲ್ಲವೂ ಇದ್ದರೆ “ಸರ್ವೇಶ್ವರನು ಯಾರು?” ಎಂದು ನಿನ್ನನ್ನೆ ನಾನು ತಿರಸ್ಕರಿಸೇನು. ಬಡವನಾದರೆ ಕಳ್ಳತನಮಾಡಿ ನನ್ನ ದೇವರಾದ ನಿನ್ನ ಹೆಸರಿಗೆ ಅಪಕೀರ್ತಿ ತಂದೇನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ನನಗೆ ಹೆಚ್ಚಾಗಿದ್ದರೆ, ನಿನ್ನನ್ನೇ ತಿರಸ್ಕರಿಸಿ, “ನನಗೆ ಯೆಹೋವನ ಅಗತ್ಯವಿಲ್ಲ” ಎಂದು ಹೇಳುವೆನು. ನಾನು ಬಡವನಾಗಿದ್ದರೆ, ಕಳವುಮಾಡಿ ನಿನ್ನ ಹೆಸರಿಗೆ ಅವಮಾನ ಮಾಡುವೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ನಾನು ಐಶ್ವರ್ಯವಂತನಾದರೆ ನಿನ್ನನ್ನು ನಿರಾಕರಿಸಿ, ‘ಯೆಹೋವ ದೇವರು ಯಾರು?’ ಎಂದು ಹೇಳೇನು. ನಾನು ಬಡವನಾದರೆ ಕಳ್ಳತನಮಾಡಿ ನನ್ನ ದೇವರಾದ ನಿಮ್ಮ ಹೆಸರಿಗೆ ಅಪಕೀರ್ತಿ ತಂದೇನು. ಅಧ್ಯಾಯವನ್ನು ನೋಡಿ |
ನಾನು ಪ್ರಮಾಣಮಾಡಿಕೊಟ್ಟ ದೇಶದಲ್ಲಿ ಇವರು ಸೇರುವದಕ್ಕಿಂತ ಮುಂಚಿತವಾಗಿಯೇ ಇವರು ಈಗಲೂ ಮಾಡುವ ದುರಾಲೋಚನೆಗಳನ್ನು ನಾನು ಬಲ್ಲೆ. ನಾನು ಇವರ ಪಿತೃಗಳಿಗೆ ಪ್ರಮಾಣಮಾಡಿದಂತೆ ಹಾಲೂ ಜೇನೂ ಹರಿಯುವ ದೇಶಕ್ಕೆ ಇವರನ್ನು ಸೇರಿಸಿದ ಮೇಲೆ ಇವರು ಚೆನ್ನಾಗಿ ಉಂಡು ಕೊಬ್ಬಿದವರಾದಾಗ ಇತರ ದೇವರುಗಳನ್ನು ಅವಲಂಬಿಸಿ ಸೇವಿಸಿ ನನ್ನನ್ನು ತಾತ್ಸಾರಮಾಡಿ ನನ್ನ ನಿಬಂಧನೆಯನ್ನು ಮೀರುವರು. ಅನಂತರ ಅನೇಕ ಕಷ್ಟಗಳೂ ವಿಪತ್ತುಗಳೂ ಸಂಭವಿಸಿದಾಗ ಈ ಪದ್ಯವು ಇವರ ಸಂತತಿಯವರ ಬಾಯಲ್ಲಿ ಇದ್ದುಕೊಂಡು ಅವರ ಮುಂದೆ ಸಾಕ್ಷಿಕೊಡುವದು ಎಂದು ಹೇಳಿದನು.