Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 31:10 - ಕನ್ನಡ ಸತ್ಯವೇದವು J.V. (BSI)

10 ಗುಣವತಿಯಾದ ಸತಿಯು ಎಲ್ಲಿ ಸಿಕ್ಕಾಳು? ಆಕೆಯು ಹವಳಕ್ಕಿಂತಲೂ ಬಹು ಅಮೂಲ್ಯಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಗುಣವತಿಯಾದ ಸತಿಯು ಎಲ್ಲಿ ಸಿಕ್ಕುವಳು? ಆಕೆಯು ಹವಳಕ್ಕಿಂತಲೂ ಬಹೂ ಅಮೂಲ್ಯಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಗುಣವತಿಯಾದ ಹೆಂಡತಿ ಎಲ್ಲಿ ಸಿಕ್ಕಾಳು? ಆಕೆ ಹವಳಕ್ಕಿಂತಲೂ ಬಹು ಮೌಲ್ಯಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಒಳ್ಳೆಯ ಹೆಂಡತಿಯನ್ನು ಪಡೆದುಕೊಳ್ಳುವುದು ತುಂಬಾ ಕಷ್ಟ. ಆಭರಣಕ್ಕಿಂತಲೂ ಹೆಚ್ಚು ಬೆಲೆಬಾಳುವಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಗುಣವತಿಯಾದ ಹೆಂಡತಿ ಎಲ್ಲಿ ಸಿಕ್ಕಾಳು? ಅವಳು ಹವಳಕ್ಕಿಂತಲೂ ಬಹು ಅಮೂಲ್ಯಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 31:10
14 ತಿಳಿವುಗಳ ಹೋಲಿಕೆ  

ಮನೆಮಾರೂ ಆಸ್ತಿಪಾಸ್ತಿಯೂ ಪಿತೃಗಳಿಂದ ದೊರಕುವವು; ವಿವೇಕಿನಿಯಾದ ಹೆಂಡತಿಯು ಯೆಹೋವನ ಅನುಗ್ರಹವೇ.


ಗುಣವಂತೆಯು ಪತಿಯ ತಲೆಗೆ ಕಿರೀಟ; ಮಾನ ಕಳೆಯುವವಳು ಪತಿಯ ಎಲುಬಿಗೆ ಕ್ಷಯ.


ಪತ್ನೀಲಾಭವು ರತ್ನಲಾಭ, ಅದು ಯೆಹೋವನ ಅನುಗ್ರಹವೇ.


ಅದರ ಬೆಲೆಯು ಹವಳಕ್ಕಿಂತಲೂ ಹೆಚ್ಚು, ನಿನ್ನ ಇಷ್ಟವಸ್ತುಗಳೆಲ್ಲವೂ ಅದಕ್ಕೆ ಸಮವಲ್ಲ,


ನನ್ನ ಮಗಳೇ, ಈಗ ಭಯಪಡಬೇಡ. ನೀನು ಗುಣವಂತೆಯೆಂಬದು ಊರಿನವರಿಗೆಲ್ಲಾ ಗೊತ್ತದೆ; ಆದದರಿಂದ ನೀನು ಹೇಳಿದ್ದನ್ನೆಲ್ಲಾ ಮಾಡುವೆನು.


ಹೊನ್ನು ಉಂಟು, ಹವಳದ ರಾಶಿ ಉಂಟು, ಆದರೆ ಜ್ಞಾನದ ತುಟಿಗಳೇ ಅಮೂಲ್ಯಾಭರಣ.


ಸಹಸ್ರ ಪುರುಷರಲ್ಲಿ ಯೋಗ್ಯನೊಬ್ಬನನ್ನು ಕಂಡಿದ್ದರೂ ಕಂಡಿರಬಹುದು; ಸಹಸ್ರ ಸ್ತ್ರೀಯರಲ್ಲಿ ಯೋಗ್ಯಳೊಬ್ಬಳನ್ನೂ ಕಂಡಿಲ್ಲ.


ಜ್ಞಾನವು ಹವಳಕ್ಕಿಂತಲೂ ಶ್ರೇಷ್ಠ, ಇಷ್ಟವಸ್ತುಗಳೆಲ್ಲವೂ ಅದಕ್ಕೆ ಸಮವಲ್ಲ.


[ಜ್ಞಾನವಿರುವಲ್ಲಿ] ಹವಳವೂ ಸ್ಪಟಿಕವೂ ನೆನಪಿಗೆ ಬರುವದಿಲ್ಲ. ಮುತ್ತುಗಳನ್ನು ಸಂಪಾದಿಸುವದಕ್ಕಿಂತಲೂ ಜ್ಞಾನವನ್ನು ಸಂಪಾದಿಸುವದು ಎಷ್ಟೋ ಕಷ್ಟ!


ಅವನ ಹೆಂಡತಿಯ ಹೆಸರು ಅಬೀಗೈಲ್. ಆಕೆಯು ಬಹುಬುದ್ಧಿವಂತೆಯೂ ಸುಂದರಿಯೂ ಆಗಿದ್ದಳು; ಕಾಲೇಬನ ವಂಶದವನಾದ ಆ ಮನುಷ್ಯನು ನಿಷ್ಠುರನೂ ದುಷ್ಕರ್ಮಿಯೂ ಆಗಿದ್ದನು. ಅವನು ಬಹು ಧನವಂತನು. ಅವನಿಗೆ ಮೂರು ಸಾವಿರ ಕುರಿಗಳೂ ಸಾವಿರ ಆಡುಗಳೂ ಇದ್ದವು. ಅವನು ಒಂದು ಸಾರಿ ಕರ್ಮೆಲಿನಲ್ಲಿ ಕುರಿಗಳ ಉಣ್ಣೆಯನ್ನು ಕತ್ತರಿಸುತ್ತಿದ್ದನು.


ಜ್ಞಾನವಂತೆಯು ತನ್ನ ಮನೆಯನ್ನು ಕಟ್ಟಿಕೊಳ್ಳುವಳು; ಜ್ಞಾನಹೀನಳು ಅದನ್ನು ಸ್ವಂತ ಕೈಯಿಂದ ಮುರಿದು ಬಿಡುವಳು.


ಪತಿಹೃದಯವು ಆಕೆಯಲ್ಲಿ ಭರವಸಪಡುವದು; ಅವನು ಕೊಳ್ಳೆಕೊಳ್ಳೆಯಾಗಿ ಸಂಪಾದಿಸುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು