Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 31:21 - ಕನ್ನಡ ಸತ್ಯವೇದವು J.V. (BSI)

21 ಮನೆಯವರೆಲ್ಲರಿಗೂ ಸಕಲಾತಿಯನ್ನು ಹೊದಿಸಿರುವದರಿಂದ ಅವರ ವಿಷಯವಾಗಿ ಆಕೆಗೆ ಹಿಮದ ಭಯವಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಮನೆಯವರೆಲ್ಲರಿಗೂ ಸಕಲಾತಿಯನ್ನು ಹೊದಿಸಿರುವುದರಿಂದ, ಅವರ ವಿಷಯವಾಗಿ ಆಕೆಗೆ ಹಿಮದ ಭಯವಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ಚಳಿಗಾಲದಲ್ಲಿ ಮನೆಯವರಿಗಾಗಿ ಆಕೆ ಚಿಂತಿಸಬೇಕಿಲ್ಲ; ಏಕೆಂದರೆ ಎಲ್ಲರಿಗೂ ಬೆಚ್ಚನೆಯ ಕಂಬಳಿಗಳಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಹಿಮ ಸುರಿಯುವಾಗ, ಆಕೆ ತನ್ನ ಕುಟುಂಬದ ಬಗ್ಗೆ ಚಿಂತಿಸಬೇಕಿಲ್ಲ; ಆಕೆ ಅವರೆಲ್ಲರಿಗೆ ಬೆಚ್ಚಗಿರುವ ಬಟ್ಟೆಗಳನ್ನು ಕೊಟ್ಟಿದ್ದಾಳೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಚಳಿಗಾಲದಲ್ಲಿ ತನ್ನ ಮನೆಯವರ ಬಗ್ಗೆ ಆಕೆಯು ಚಿಂತಿಸಬೇಕಾಗಿಲ್ಲ. ಏಕೆಂದರೆ ಆಕೆಯ ಮನೆಯವರೆಲ್ಲರಿಗೂ ಬೆಚ್ಚನೆಯ ಕಂಬಳಿಗಳಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 31:21
5 ತಿಳಿವುಗಳ ಹೋಲಿಕೆ  

ಇದಲ್ಲದೆ ಪ್ರತಿಯೊಬ್ಬನಿಗೂ ಶ್ರೇಷ್ಠ ವಸ್ತ್ರಗಳನ್ನೂ ಕೊಟ್ಟನು; ಬೆನ್ಯಾಮೀನನಿಗೋ ಮುನ್ನೂರು ರೂಪಾಯಿಗಳನ್ನೂ ಐದು ಶ್ರೇಷ್ಠ ವಸ್ತ್ರಗಳನ್ನೂ ಕೊಟ್ಟನು.


ಮನಗುಂದಿದವನಿಗೆ ಸಂಗೀತಹಾಡುವದು ಚಳಿದಿನದಲ್ಲಿ ಬಟ್ಟೆ ತೆಗೆದ ಹಾಗೂ ಸೋಡ ಉಪ್ಪಿಗೆ ಹುಳಿಹೊಯ್ದ ಹಾಗೂ.


ಇಸ್ರಾಯೇಲ್ ಸ್ತ್ರೀಯರೇ, ಸೌಲನಿಗಾಗಿ ಗೋಳಾಡಿರಿ; ನಿಮಗೆ ಉಲ್ಲಾಸಕರವಾದ ರಕ್ತಾಂಬರಗಳನ್ನು ಉಡಿಸಿ ಅವುಗಳ ಮೇಲೆ ಸುವರ್ಣಾಭರಣಗಳನ್ನು ತೊಡಿಸಿದವನು ಆತನೇ ಅಲ್ಲವೋ?


ತನಗಾಗಿ ರತ್ನಗಂಬಳಿಗಳನ್ನು ಮಾಡುವಳು; ಆಕೆಯ ಉಡುಪೋ ನಾರುಮಡಿ, ರಕ್ತಾಂಬರ.


ಪಟ್ಟಣದ ಹೊರಗೆ ರಥಗಳು ರಭಸದಿಂದ ತಿರುಗಾಡುತ್ತವೆ, ಮೈದಾನದಲ್ಲಿ ಧಡಧಡ ಓಡಾಡುತ್ತವೆ; ಪಂಜುಗಳಂತೆ ಬೆಳಗುತ್ತವೆ, ವಿುಂಚುಗಳ ಹಾಗೆ ಹಾರುತ್ತವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು