Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 31:22 - ಕನ್ನಡ ಸತ್ಯವೇದವು J.V. (BSI)

22 ತನಗಾಗಿ ರತ್ನಗಂಬಳಿಗಳನ್ನು ಮಾಡುವಳು; ಆಕೆಯ ಉಡುಪೋ ನಾರುಮಡಿ, ರಕ್ತಾಂಬರ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ತನಗಾಗಿ ರತ್ನಗಂಬಳಿಗಳನ್ನು ಮಾಡುವಳು, ಆಕೆಯ ಉಡುಪು ನಾರುಮಡಿ, ರಕ್ತಾಂಬರ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ತನಗೆ ಬೇಕಾದ ರತ್ನಗಂಬಳಿಯನ್ನು ತಾನೆ ನೇಯ್ದಿದ್ದಾಳೆ; ಆಕೆಯ ಉಡುಪೋ ನಾರುಮಡಿ, ರಕ್ತಾಂಬರ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ಆಕೆ ಹೊದಿಕೆಗಳನ್ನು ತಯಾರಿಸುವಳು. ಆಕೆಯು ಶ್ರೇಷ್ಠವಾದ ನಾರಗಸೆಯ ದಾರದಿಂದ ಮಾಡಿದ ಬಟ್ಟೆಗಳನ್ನು ಧರಿಸಿಕೊಳ್ಳುವಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಆಕೆಯು ತಾನೇ ಕಂಬಳಿಗಳನ್ನು ನೇಯುತ್ತಾಳೆ. ಆಕೆಯ ಉಡುಪೋ ನಾರುಮಡಿ, ರಕ್ತಾಂಬರ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 31:22
11 ತಿಳಿವುಗಳ ಹೋಲಿಕೆ  

ಪ್ರಕಾಶಮಾನವೂ ನಿರ್ಮಲವೂ ಆದ ನಯವಾದ ನಾರುಮಡಿಯನ್ನು ಧರಿಸಿಕೊಳ್ಳುವದಕ್ಕೆ ಆಕೆಗೆ ಅನುಗ್ರಹಿಸೋಣವಾಗಿತ್ತು. ಆ ನಾರುಮಡಿ ಅಂದರೆ ದೇವಜನರ ಸತ್ಕಾರ್ಯಗಳೇ.


ನನ್ನ ಮಂಚದಲ್ಲಿ ಸುಪ್ಪತ್ತಿಯನ್ನೂ ಐಗುಪ್ತದೇಶದ ನೂಲಿನ ವಿಚಿತ್ರವಸ್ತ್ರಗಳನ್ನೂ ಹಾಸಿದ್ದೇನೆ.


ತನ್ನ ಕೈಯಿಂದ ಮುದ್ರಿಕೆಯನ್ನು ತೆಗೆದು ಯೋಸೇಫನ ಕೈಗೆ ಇಟ್ಟು ಅವನಿಗೆ ನಾರುಮಡಿಯನ್ನು ಹೊದಿಸಿ ಅವನ ಕೊರಳಿಗೆ ಚಿನ್ನದ ಸರಪಣಿಯನ್ನು ಹಾಕಿಸಿ


ಪರಲೋಕದಲ್ಲಿರುವ ಸೈನ್ಯದವರು ಶುಭ್ರವಾಗಿಯೂ ನಿರ್ಮಲವಾಗಿಯೂ ಇರುವ ನಯವಾದ ನಾರುಮಡಿಯನ್ನು ಧರಿಸಿಕೊಂಡು ಬಿಳೀ ಕುದುರೆಗಳ ಮೇಲೆ ಹತ್ತಿದವರಾಗಿ ಆತನ ಹಿಂದೆ ಬರುತ್ತಿದ್ದರು.


ನೀವು ನಿರ್ಮಲರಾಗಿಯೂ ಭಯಭರಿತರಾಗಿಯೂ ನಡೆದುಕೊಳ್ಳುವದನ್ನು ಅವರು ನೋಡಿ ವಾಕ್ಯೋಪದೇಶವಿಲ್ಲದೆ ತಮ್ಮ ಹೆಂಡತಿಯರಾದ ನಿಮ್ಮ ನಡತೆಯಿಂದಲೇ ಸನ್ಮಾರ್ಗಕ್ಕೆ ಬಂದಾರು.


ಮೊರ್ದೆಕೈಯಾದರೋ ನೀಲ ಶುಭ್ರವರ್ಣಗಳುಳ್ಳ ರಾಜವಸ್ತ್ರಗಳನ್ನು ಧರಿಸಿ ಬಂಗಾರದ ದೊಡ್ಡ ಪಟ್ಟಿಯನ್ನು ಹಣೆಗೆ ಕಟ್ಟಿಕೊಂಡು ರಕ್ತವರ್ಣದ ನಾರಿನ ಶಾಲನ್ನು ಹೊದ್ದು ರಾಜಸನ್ನಿಧಿಯಿಂದ ಹೊರಟನು. ಶೂಷನ್ ಪಟ್ಟಣದಲ್ಲಿ ಸಂತೋಷದ ಆರ್ಭಟವು ಕೇಳಿಸಿತು.


ಗಿದ್ಯೋನನಿಗೆ ಮೊದಲೇ ದೊರಕಿದ್ದ ಅರ್ಧಚಂದ್ರಾಕಾರದ ಆಭರಣ, ಕುಂಡಲ, ವಿುದ್ಯಾನ್ ರಾಜರು ಹೊದ್ದುಕೊಂಡಿದ್ದ ರಕ್ತಾಂಬರ, ಅವರ ಒಂಟೆಗಳ ಕಂಠಮಾಲೆ ಇವುಗಳ ಹೊರತಾಗಿ ಅವನು ಇಸ್ರಾಯೇಲ್ಯರಿಂದ ಕೇಳಿ ತೆಗೆದುಕೊಂಡ ಮುರುವುಗಳ ಬಂಗಾರವೇ ಸಾವಿರದ ಏಳುನೂರು ತೊಲೆ ತೂಕವಾಗಿತ್ತು.


ಮೂರನೆಯ ದಿನದಲ್ಲಿ ಎಸ್ತೇರಳು ರಾಜವಸ್ತ್ರ ಭೂಷಿತಳಾಗಿ ಅರಮನೆಯ ಒಳಗಣ ಪ್ರಾಕಾರವನ್ನು ಪ್ರವೇಶಿಸಿ ರಾಜ ಮಂದಿರದ ಎದುರಿನಲ್ಲಿ ನಿಂತಳು. ಅರಸನು ಆ ಮಂದಿರದಲ್ಲಿ ರಾಜಸಿಂಹಾಸನದ ಮೇಲೆ ಬಾಗಲಿಗೆದುರಾಗಿ ಕೂತುಕೊಂಡಿದ್ದನು.


ಐಶ್ವರ್ಯವಂತನಾದ ಒಬ್ಬ ಮನುಷ್ಯನಿದ್ದನು. ಅವನು ಸಕಲಾತಿ ನಯವಾದ ನಾರುಮಡಿ ಮುಂತಾದ ವಸ್ತ್ರಗಳನ್ನು ಧರಿಸಿಕೊಂಡು ಪ್ರತಿದಿನವೂ ವೈಭವದೊಡನೆ ಸುಖಸಂತೋಷಪಡುತ್ತಿದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು