Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 31:24 - ಕನ್ನಡ ಸತ್ಯವೇದವು J.V. (BSI)

24 ಹಚ್ಚಡಗಳನ್ನು ನೆಯ್ದು ಮಾರಾಟಮಾಡುವಳು, ನಡುಕಟ್ಟುಗಳನ್ನು ವರ್ತಕನಿಗೆ ಒದಗಿಸುವಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಹಚ್ಚಡಗಳನ್ನು ನೆಯ್ದು ಮಾರಾಟಮಾಡುವಳು, ನಡುಕಟ್ಟುಗಳನ್ನು ವರ್ತಕನಿಗೆ ಒದಗಿಸುವಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

24 ದುಪ್ಪಟಿಗಳನ್ನು ನೇಯ್ದು ಮಾರಾಟ ಮಾಡುತ್ತಾಳೆ; ನಡುಕಟ್ಟುಗಳನ್ನು ಮಾಡಿ ವರ್ತಕರಿಗೆ ವಿಕ್ರಯಿಸುತ್ತಾಳೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 ಆಕೆ ಒಳ್ಳೆಯ ವ್ಯಾಪಾರ ಮಾಡುವಳು; ಉಡುಪುಗಳನ್ನೂ ನಡುಪಟ್ಟಿಗಳನ್ನೂ ತಯಾರಿಸಿ ಮಾರುವಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 ಆಕೆಯು ನಯವಾದ ನಾರುಮಡಿಯನ್ನು ನೇಯ್ದು ಮಾರಾಟ ಮಾಡುತ್ತಾಳೆ. ಆಕೆಯು ನಡುಕಟ್ಟುಗಳನ್ನು ತಯಾರಿಸಿ ವರ್ತಕರಿಗೆ ಒದಗಿಸುತ್ತಾಳೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 31:24
8 ತಿಳಿವುಗಳ ಹೋಲಿಕೆ  

ನಿನ್ನ ಕೈಕೆಲಸದ ವಸ್ತುಗಳು ಅಪಾರವಾಗಿದ್ದದರಿಂದ ಅರಾವಿುನವರೂ ನಿನ್ನವರಾಗಿ ವ್ಯಾಪಾರಮಾಡಿ ಕೆಂಪರಲು ರಕ್ತಾಂಬರ ಕಸೂತಿಯ ವಸ್ತ್ರ ನಾರುಬಟ್ಟೆ ಹವಳ ಮಾಣಿಕ್ಯ ಮೊದಲಾದ ಸರಕುಗಳನ್ನು ನಿನಗೆ ತಂದು ಸುರಿದರು.


ಐಶ್ವರ್ಯವಂತನಾದ ಒಬ್ಬ ಮನುಷ್ಯನಿದ್ದನು. ಅವನು ಸಕಲಾತಿ ನಯವಾದ ನಾರುಮಡಿ ಮುಂತಾದ ವಸ್ತ್ರಗಳನ್ನು ಧರಿಸಿಕೊಂಡು ಪ್ರತಿದಿನವೂ ವೈಭವದೊಡನೆ ಸುಖಸಂತೋಷಪಡುತ್ತಿದ್ದನು.


ರಾಟೆಯ ಮೇಲೆ ಕೈ ಹಾಕಿ ಕದರನ್ನು ಹಿಡಿಯುವಳು.


ಉಣ್ಣೆಯನ್ನೂ ಸೆಣಬನ್ನೂ ಹುಡುಕಿ ತಂದು ಕೈಗೆಲಸವನ್ನೆಸಗುವಳು.


ಅರಸನಾದ ಸೊಲೊಮೋನನ ಕುದುರೆಗಳು ಐಗುಪ್ತದೇಶದವುಗಳು. ಅವನ ವರ್ತಕರು ಅವುಗಳನ್ನು ಹಿಂಡುಗಟ್ಟಳೆಯಾಗಿ ಕೊಂಡುಕೊಂಡು ಬರುತ್ತಿದ್ದರು.


ಸಂಸೋನನು ಇವರಿಗೆ - ನಾನು ನಿಮಗೆ ಒಂದು ಒಗಟನ್ನು ಹೇಳುತ್ತೇನೆ; ನೀವು ಔತಣದ ಏಳು ದಿನಗಳಲ್ಲಿಯೇ ಅದನ್ನು ಬಿಚ್ಚಿ ಅರ್ಥವನ್ನು ಹೇಳಿದರೆ ನಿಮಗೆ ಮೂವತ್ತು ದುಪ್ಪಟಿಗಳನ್ನೂ ಮೂವತ್ತು ವಿಶೇಷವಸ್ತ್ರಗಳನ್ನೂ ಕೊಡುವೆನು.


ಬಲವನ್ನೂ ತೇಜಸ್ಸನ್ನೂ ಹೊದ್ದುಕೊಂಡಿರುವಳು; ಭವಿಷ್ಯತ್ತಿನ ಭಯವಿಲ್ಲದೆ ನಗುತ್ತಿರುವಳು.


ವ್ಯಾಪಾರದ ಹಡಗುಗಳಂತೆ ದೂರದಿಂದ ಬೇಕಾದ ಆಹಾರವನ್ನು ತರುವಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು