Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 31:25 - ಕನ್ನಡ ಸತ್ಯವೇದವು J.V. (BSI)

25 ಬಲವನ್ನೂ ತೇಜಸ್ಸನ್ನೂ ಹೊದ್ದುಕೊಂಡಿರುವಳು; ಭವಿಷ್ಯತ್ತಿನ ಭಯವಿಲ್ಲದೆ ನಗುತ್ತಿರುವಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಬಲವನ್ನು, ತೇಜಸ್ಸನ್ನು ಹೊದ್ದುಕೊಂಡಿರುವಳು, ಭವಿಷ್ಯತ್ತಿನ ಭಯವಿಲ್ಲದೆ ನಗುತ್ತಿರುವಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

25 ಘನತೆ, ಗೌರವ, ಆಕೆಯ ಬಟ್ಟೆಬರೆ; ಭವಿಷ್ಯತ್ತಿನಲ್ಲಿ ಆಕೆಗೆ ನಿರ್ಭೀತ ನಗೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 ಆಕೆಯು ಶಕ್ತಿಯನ್ನೂ ಗಾಂಭೀರ್ಯವನ್ನೂ ಪ್ರದರ್ಶಿಸುವಳು; ಹರ್ಷದಿಂದ ಭವಿಷ್ಯತ್ತನ್ನು ಎದುರುನೋಡುವಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ಆಕೆಯ ಉಡುಪು ಬಲವೂ ಘನತೆಯೂ ಆಗಿವೆ. ಭವಿಷ್ಯತ್ತಿನ ಭಯವಿಲ್ಲದೆ ಆಕೆಯು ನಗುವಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 31:25
13 ತಿಳಿವುಗಳ ಹೋಲಿಕೆ  

ನಿನ್ನನ್ನು ನೀನೇ ಮಹಿಮೆಘನತೆಗಳಿಂದ ಭೂಷಿಸಿಕೊಂಡು ಪ್ರಭಾವಮಹತ್ತುಗಳನ್ನು ಧರಿಸಿಕೋ.


ದೇಹದ ಆಶೆಗಳನ್ನು ಪೂರೈಸುವದಕ್ಕಾಗಿ ಚಿಂತಿಸದೆ ಕರ್ತನಾದ ಯೇಸು ಕ್ರಿಸ್ತನನ್ನು ಧರಿಸಿಕೊಳ್ಳಿರಿ.


ಆ ಸ್ವಭಾವವು ದೇವರ ಹೋಲಿಕೆಯ ಮೇರೆಗೆ ಸತ್ಯಾನುಗುಣವಾದ ನೀತಿಯುಳ್ಳದ್ದಾಗಿಯೂ ದೇವಭಯವುಳ್ಳದ್ದಾಗಿಯೂ ನಿರ್ಮಿಸಲ್ಪಟ್ಟಿದೆ.


ನಾನು ಧರ್ಮವನ್ನು ಧರಿಸಿಕೊಂಡೆನು, ಧರ್ಮವು ನನ್ನನ್ನು ಧರಿಸಿತು, ನನ್ನ ನ್ಯಾಯವೇ ನನಗೆ ನಿಲುವಂಗಿಯೂ ಮುಂಡಾಸವೂ ಆಗಿತ್ತು.


ಅವರು ಜಡೆ ಚಿನ್ನ ಮುತ್ತು ಬೆಲೆಯುಳ್ಳ ವಸ್ತ್ರ ಮುಂತಾದವುಗಳಿಂದ ತಮ್ಮನ್ನು ಅಲಂಕರಿಸಿಕೊಳ್ಳದೆ ದೇವಭಕ್ತೆಯರೆನಿಸಿಕೊಳ್ಳುವ ಸ್ತ್ರೀಯರಿಗೆ ಯುಕ್ತವಾಗಿರುವ ಪ್ರಕಾರ ಸತ್ಕ್ರಿಯೆಗಳಿಂದಲೇ ಅಲಂಕರಿಸಿಕೊಳ್ಳಬೇಕು.


ನಾನು ಯೆಹೋವನಲ್ಲಿ ಪರಮಾನಂದಪಡುವೆನು, ನನ್ನ ಆತ್ಮವು ನನ್ನ ದೇವರಲ್ಲಿ ಹಿಗ್ಗುವದು; ವರನು ಬಾಸಿಂಗವನ್ನು ಧರಿಸಿಕೊಳ್ಳುವಂತೆಯೂ ವಧುವು ತನ್ನನ್ನು ಆಭರಣಗಳಿಂದ ಅಲಂಕರಿಸಿಕೊಳ್ಳುವ ಹಾಗೂ ಆತನು ನನಗೆ ರಕ್ಷಣೆಯೆಂಬ ವಸ್ತ್ರವನ್ನು ಹೊದಿಸಿ ಧರ್ಮವೆಂಬ ನಿಲುವಂಗಿಯನ್ನು ತೊಡಿಸಿದ್ದಾನಲ್ಲಾ.


ನಿನ್ನ ಯಾಜಕರು ನೀತಿಯೆಂಬ ವಸ್ತ್ರವನ್ನು ಹೊದ್ದುಕೊಳ್ಳಲಿ; ನಿನ್ನ ಭಕ್ತರು ಉತ್ಸಾಹಧ್ವನಿಮಾಡಲಿ.


ಯಾಜಕರಿಗೆ ರಕ್ಷಣೆಯೆಂಬ ವಸ್ತ್ರವನ್ನು ಹೊದಿಸುವೆನು; ಭಕ್ತರು ಉತ್ಸಾಹಧ್ವನಿಮಾಡುವರು.


ಹಾಗೆಯೇ ಸ್ತ್ರೀಯರು ಮಾನಸ್ಥೆಯರಾಗಿಯೂ ಡಂಭವಿಲ್ಲದವರಾಗಿಯೂ ಇದ್ದು ಮರ್ಯಾದೆಗೆ ತಕ್ಕ ಉಡುಪನ್ನುಟ್ಟುಕೊಳ್ಳಬೇಕೆಂದು ಅಪೇಕ್ಷಿಸುತ್ತೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು