Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 31:3 - ಕನ್ನಡ ಸತ್ಯವೇದವು J.V. (BSI)

3 ನಿನ್ನ ತ್ರಾಣವನ್ನು ಸ್ತ್ರೀಯರಲ್ಲಿ ಒಪ್ಪಿಸದಿರು, ರಾಜರಿಗೆ ವಿನಾಶಕರವಾದ ದಾರಿಗೆ ತಿರುಗಬೇಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ನಿನ್ನ ತ್ರಾಣವನ್ನು ಸ್ತ್ರೀಯರಿಗೆ ಒಪ್ಪಿಸಬೇಡ, ರಾಜರಿಗೆ ವಿನಾಶಕರವಾದ ದಾರಿಗೆ ತಿರುಗಬೇಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ನಿನ್ನ ಪೌರುಷತ್ವವನ್ನೆಲ್ಲಾ ಸ್ತ್ರೀಯರಿಗೆ ಒಪ್ಪಿಸದಿರು; ಅರಸನನ್ನೆ ನಾಶಮಾಡಬಲ್ಲ ಅವರಿಗಾಗಿ ಹಣವನ್ನೆಲ್ಲ ವ್ಯಯಮಾಡದಿರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ನಿನ್ನ ಶಕ್ತಿಯನ್ನು ಹೆಂಗಸರಲ್ಲಿ ವ್ಯರ್ಥಮಾಡಿಕೊಳ್ಳಬೇಡ. ರಾಜನನ್ನು ನಾಶಮಾಡುವವರು ಹೆಂಗಸರುಗಳೇ. ನಿನ್ನನ್ನು ಅವರಲ್ಲಿ ಹಾಳುಮಾಡಿಕೊಳ್ಳಬೇಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ನಿನ್ನ ತ್ರಾಣವನ್ನು ಸ್ತ್ರೀಯರಿಗೆ ಒಪ್ಪಿಸದಿರು. ರಾಜರನ್ನೇ ಹಾಳುಮಾಡಬಲ್ಲ ಸ್ತ್ರೀಯರಿಗೆ ನಿನ್ನ ಹಣ ಸಮಯವನ್ನು ವ್ಯಯಮಾಡದಿರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 31:3
6 ತಿಳಿವುಗಳ ಹೋಲಿಕೆ  

ಅಂಥ ಸ್ತ್ರೀಯರ ದೆಸೆಯಿಂದ ಇಸ್ರಾಯೇಲ್‍ರಾಜನಾದ ಸೊಲೊಮೋನನು ದೋಷಿಯಾದನಲ್ಲವೇ. ಅನೇಕಾನೇಕ ಜನಾಂಗಗಳಲ್ಲಿ ಅವನಿಗೆ ಸಮಾನನಾದ ಅರಸನು ಇರಲಿಲ್ಲ; ಅವನು ತನ್ನ ದೇವರಿಗೆ ವಿಶೇಷ ಪ್ರಿಯನು; ಆದದರಿಂದ ದೇವರು ಅವನನ್ನು ಎಲ್ಲಾ ಇಸ್ರಾಯೇಲ್ಯರ ಮೇಲೆ ಅರಸನನ್ನಾಗಿ ನೇವಿುಸಿದನು. ಆದರೂ ಅನ್ಯದೇಶಸ್ತ್ರೀಯರು ಅವನನ್ನು ಪಾಪದಲ್ಲಿ ಬೀಳಿಸಿದರು.


ಅವನು ಅನೇಕ ಸ್ತ್ರೀಯರನ್ನು ಮದುವೆಮಾಡಿಕೊಳ್ಳಬಾರದು; ಮಾಡಿಕೊಂಡರೆ ಅವನ ಮನಸ್ಸು ಯೆಹೋವನ ಕಡೆಯಿಂದ ತಿರುಗುವದಕ್ಕೆ ಅವಕಾಶವಾಗುವದು. ಅವನು ಬೆಳ್ಳಿಬಂಗಾರವನ್ನು ವಿಶೇಷವಾಗಿ ಗಳಿಸಿಕೊಳ್ಳಬಾರದು.


ಅರಸನಾದ ಸೊಲೊಮೋನನು ಫರೋಹನ ಮಗಳಲ್ಲದೆ ಮೋವಾಬ್ಯರು, ಅಮ್ಮೋನಿಯರು, ಎದೋಮ್ಯರು, ಚೀದೋನ್ಯರು, ಹಿತ್ತಿಯರು ಎಂಬೀ ಜನಾಂಗಗಳ ಸ್ತ್ರೀಯರನ್ನೂ ಮೋಹಿಸಿದನು.


ವ್ಯಭಿಚಾರದ್ರಾಕ್ಷಾರಸಮದ್ಯಗಳು ಬುದ್ಧಿಯನ್ನು ಕೆಡಿಸುತ್ತವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು