Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 31:31 - ಕನ್ನಡ ಸತ್ಯವೇದವು J.V. (BSI)

31 ಆಕೆಯ ಕೈಗೆಲಸಕ್ಕೆ ಪ್ರತಿಫಲವನ್ನು ಸಲ್ಲಿಸಿರಿ; ಆಕೆಯ ಕಾರ್ಯಗಳೇ ಪುರದ್ವಾರಗಳಲ್ಲಿ ಆಕೆಯನ್ನು ಪ್ರಶಂಸಿಸಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

31 ಆಕೆಯ ಕೈಕೆಲಸಕ್ಕೆ ಪ್ರತಿಫಲವನ್ನು ಸಲ್ಲಿಸಿರಿ, ಆಕೆಯ ಕಾರ್ಯಗಳೇ ಪುರದ್ವಾರಗಳಲ್ಲಿ ಆಕೆಯನ್ನು ಪ್ರಶಂಸಿಸಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

31 ಆಕೆಯ ಕೈ ಕೆಲಸಕ್ಕೆ ತಕ್ಕ ಪ್ರತಿಫಲ ಲಭಿಸಲಿ; ಆಕೆಯ ಕಾರ್ಯಗಳೇ ಆಕೆಯನ್ನು ಪುರದ್ವಾರಗಳಲ್ಲಿ ಹೊಗಳಲಿ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

31 ಆಕೆ ತನಗೆ ಯೋಗ್ಯವಾದ ಪ್ರತಿಫಲವನ್ನು ಹೊಂದಬೇಕು. ಆಕೆಯ ಕಾರ್ಯಗಳಿಗಾಗಿ ಜನರೆಲ್ಲರೂ ಆಕೆಯನ್ನು ಬಹಿರಂಗವಾಗಿ ಸನ್ಮಾನಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

31 ಆಕೆಯ ಕೈಕೆಲಸಕ್ಕೆ ತಕ್ಕ ಪ್ರತಿಫಲವನ್ನು ಸಲ್ಲಿಸಿ ಗೌರವಿಸಿರಿ. ಪಟ್ಟಣದ ದ್ವಾರಗಳಲ್ಲಿ ಆಕೆಯ ಕಾರ್ಯಗಳು ಆಕೆಯನ್ನು ಹೊಗಳಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 31:31
17 ತಿಳಿವುಗಳ ಹೋಲಿಕೆ  

ನಿನ್ನ ಕಷ್ಟಾರ್ಜಿತವನ್ನು ನೀನೇ ಅನುಭವಿಸುವಿ; ನೀನು ಧನ್ಯನು, ನಿನಗೆ ಶುಭವಿರುವದು.


ನೀವು ದೇವಜನರಿಗೆ ಉಪಚಾರ ಮಾಡಿದಿರಿ, ಇನ್ನೂ ಮಾಡುತ್ತಾ ಇದ್ದೀರಿ. ಈ ಕೆಲಸವನ್ನೂ ಇದರಲ್ಲಿ ನೀವು ದೇವರ ನಾಮದ ವಿಷಯವಾಗಿ ತೋರಿಸಿದ ಪ್ರೀತಿಯನ್ನೂ ಆತನು ಮರೆಯುವದಕ್ಕೆ ಅನ್ಯಾಯಸ್ಥನಲ್ಲ.


ಪರಲೋಕದಿಂದ ಒಂದು ಶಬ್ದವು ನನಗೆ ಕೇಳಿಸಿತು. ಅದು - ಇಂದಿನಿಂದ ಕರ್ತನ ಭಕ್ತರಾಗಿ ಸಾಯುವವರು ಧನ್ಯರು ಎಂಬದಾಗಿ ಬರೆ ಎಂದು ನನಗೆ ಹೇಳಿತು. ಅದಕ್ಕೆ ಆತ್ಮನು - ಹೌದು, ಅವರು ಧನ್ಯರೇ; ಅವರ ಕಷ್ಟ ತೀರಿತು, ಅವರಿಗೆ ವಿಶ್ರಾಂತಿಯಾಗುವದು; ಅವರ ಸುಕೃತ್ಯಗಳು ಅವರೊಡನೆ ಬರುವವು ಎಂದು ಹೇಳುತ್ತಾನೆ.


ಅವರ ಫಲಗಳಿಂದ ಅವರನ್ನು ತಿಳುಕೊಳ್ಳುವಿರಿ. ಮುಳ್ಳುಗಿಡಗಳಲ್ಲಿ ದ್ರಾಕ್ಷೇಹಣ್ಣುಗಳನ್ನೂ ಮದ್ದುಗುಣಿಕೇಗಿಡಗಳಲ್ಲಿ ಅಂಜೂರಗಳನ್ನೂ ಕೊಯ್ಯುವದುಂಟೇ?


ನಾನು ನಿಮ್ಮಿಂದ ದಾನವನ್ನು ಅಪೇಕ್ಷಿಸುವದಿಲ್ಲ; ನಿಮ್ಮ ಆತ್ಮಕ್ಕೆ ಆದಾಯವಾಗುವಂಥ ಪ್ರೀತಿಫಲವನ್ನೇ ಅಪೇಕ್ಷಿಸುತ್ತೇನೆ. ಬೇಕಾದದ್ದೆಲ್ಲಾ ನನಗುಂಟು, ಸಮೃದ್ಧಿಯಾಯಿತು.


ಹೊಲವನ್ನು ನೋಡಿ, ಯೋಚಿಸಿ ಕೊಂಡುಕೊಳ್ಳುವಳು; ತನ್ನ ಕೈಗೆಲಸದ ಲಾಭದಿಂದ ತೋಟಮಾಡಿಸುವಳು.


ಧರ್ಮಾತ್ಮನ ಫಲ ಜೀವವೃಕ್ಷ; ಜ್ಞಾನಿಯು ಆತ್ಮಗಳನ್ನು ಆಕರ್ಷಿಸುವನು.


ಹಾಗೆಯೇ ಕೆಲವರ ಸತ್ಕ್ರಿಯೆಗಳು ಪ್ರಸಿದ್ಧವಾಗಿವೆ, ಬೇರೆ ಕೆಲವರ ಸತ್ಕ್ರಿಯೆಗಳು ಅಪ್ರಸಿದ್ಧವಾಗಿದ್ದರೂ ಮರೆಯಾಗಿರಲಾರವು.


ಪೇತ್ರನು ಎದ್ದು ಅವರ ಜೊತೆಯಲ್ಲಿ ಹೋದನು. ಅವನು ಬಂದ ಕೂಡಲೆ ಅವರು ಅವನನ್ನು ಮೇಲಂತಸ್ತಿಗೆ ಕರೆದುಕೊಂಡು ಹೋದರು. ಅಲ್ಲಿ ವಿಧವೆಯರೆಲ್ಲರು ಅಳುತ್ತಾ ಅವನ ಹತ್ತಿರ ನಿಂತುಕೊಂಡು ದೊರ್ಕಳು ತಮ್ಮ ಸಂಗಡ ಇದ್ದಾಗ ಮಾಡಿಕೊಟ್ಟಿದ್ದ ಒಳಂಗಿಗಳನ್ನೂ ಮೇಲಂಗಿಗಳನ್ನೂ ತೋರಿಸಿದರು.


ಹೀಗಿರಲಾಗಿ ಅವರ ಫಲಗಳಿಂದ ಅವರನ್ನು ತಿಳಿದುಕೊಳ್ಳುವಿರಿ.


ನಿಮಗೋಸ್ಕರ ಬಹು ಶ್ರಮೆಪಟ್ಟ ಮರಿಯಳಿಗೆ ವಂದನೆ.


ಕರ್ತನ ಸೇವೆಯಲ್ಲಿ ಪ್ರಯಾಸಪಟ್ಟವರಾದ ತ್ರುಫೈನಳಿಗೂ ತ್ರುಫೋಸಳಿಗೂ ವಂದನೆಗಳು. ಕರ್ತನ ಸೇವೆಯಲ್ಲಿ ಬಹಳವಾಗಿ ಪ್ರಯಾಸಪಟ್ಟಿರುವ ಪ್ರಿಯ ಪೆರ್ಸೀಸಳಿಗೆ ವಂದನೆ.


ಸೌಂದರ್ಯವು ನೆಚ್ಚತಕ್ಕದ್ದಲ್ಲ, ಲಾವಣ್ಯವು ನೆಲೆಯಲ್ಲ; ಯೆಹೋವನಲ್ಲಿ ಭಯಭಕ್ತಿಯುಳ್ಳವಳೇ ಸ್ತೋತ್ರಪಾತ್ರಳು.


ದಾವೀದನ ಮಗನೂ ಯೆರೂಸಲೇವಿುನಲ್ಲಿ ಆಳುವ ಅರಸನೂ ಆಗಿದ್ದ ಪ್ರಸಂಗಿಯ ಮಾತುಗಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು