Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 31:8 - ಕನ್ನಡ ಸತ್ಯವೇದವು J.V. (BSI)

8 ಬಾಯಿಲ್ಲದವರಿಗೂ ಹಾಳಾಗಿಹೋಗುತ್ತಿರುವವರೆಲ್ಲರಿಗೂ ನ್ಯಾಯವಾಗುವಂತೆ ಬಾಯಿ ತೆರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಬಾಯಿಲ್ಲದವರಿಗೂ, ಹಾಳಾಗಿ ಹೋಗುತ್ತಿರುವವರೆಲ್ಲರಿಗೂ, ನ್ಯಾಯವಾಗುವಂತೆ ಬಾಯಿ ತೆರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಬಾಯಿಲ್ಲದವರ ಹಾಗೂ ದೀನದಲಿತರ ಪರವಾಗಿ ನ್ಯಾಯ ದೊರಕುವಂತೆ ಬಾಯಿಬಿಚ್ಚಿ ಮಾತಾಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ತಮಗೋಸ್ಕರ ಮಾತಾಡಲಾರದ ಜನರಿಗೋಸ್ಕರ ಮಾತಾಡು. ಕಷ್ಟದಲ್ಲಿರುವ ಜನರೆಲ್ಲರ ಹಕ್ಕುಗಳಿಗಾಗಿ ಮಾತಾಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ತಮಗಾಗಿ ಮಾತನಾಡಲು ಸಾಧ್ಯವಾಗದವರಿಗಾಗಿ ಮಾತನಾಡು, ಅನಾಥರ ಪರವಾಗಿ ನ್ಯಾಯ ದೊರಕುವಂತೆ ಬಾಯಿಬಿಟ್ಟು ಮಾತನಾಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 31:8
18 ತಿಳಿವುಗಳ ಹೋಲಿಕೆ  

ಇತ್ತ ಯಾಜಕರೂ ಪ್ರವಾದಿಗಳೂ ಯೆರೆಮೀಯನನ್ನು ಜನರ ಕೈಗೆ ಸಿಕ್ಕಿಸಿ ಕೊಲ್ಲಿಸದ ಹಾಗೆ ಶಾಫಾನನ ಮಗನಾದ ಅಹೀಕಾಮನ ಸಹಾಯವು ಅವನಿಗೆ ಒದಗಿತು.


ಅವನು ಅವರಿಗೆ - ನಮ್ಮ ಧರ್ಮಶಾಸ್ತ್ರವು ಮೊದಲು ಒಬ್ಬನನ್ನು ವಿಚಾರಿಸಿ ಅವನು ಮಾಡುವದೇನೆಂದು ತಿಳುಕೊಳ್ಳದೆ ಅವನ ವಿಷಯವಾಗಿ ತೀರ್ಪುಮಾಡುವದುಂಟೇ? ಎಂದು ಹೇಳಿದ್ದಕ್ಕೆ


ಸೆರೆಹೋದವರ ನರಳುವಿಕೆಯು ನಿನ್ನ ಲಕ್ಷ್ಯಕ್ಕೆ ಬರಲಿ; ಸಾಯಲಿರುವವರನ್ನು ನಿನ್ನ ಭುಜಮಹತ್ತಿನಿಂದ ಉಳಿಸು.


ಅದಕ್ಕೆ ಯೋನಾತಾನನು - ಅವನು ಯಾಕೆ ಸಾಯಬೇಕು, ಅವನು ಏನು ಮಾಡಿದನು ಎಂದು ತನ್ನ ತಂದೆಯನ್ನು ಕೇಳಿದನು.


ಜ್ಞಾನವು ಮೂರ್ಖನಿಗೆ ದುರ್ಲಭ; ಅವನು ನ್ಯಾಯಸ್ಥಾನದಲ್ಲಿ ಬಾಯಿಬಿಡಲಾರನು.


ಪ್ರಭುಗಳು ಮೌನವಾಗಿ ಬಾಯ ಮೇಲೆ ಕೈಯಿಟ್ಟುಕೊಂಡರು.


ದೇವರು ತನ್ನ ಸಭೆಯಲ್ಲಿ ನಿಂತುಕೊಂಡವನಾಗಿ ದೇವರುಗಳೊಳಗೆ ನ್ಯಾಯವಿಧಿಸುತ್ತಾನೆ -


ಶಿಷ್ಟನು ಬಡವರ ನ್ಯಾಯವನ್ನು ತಿಳಿದಿರುವನು; ದುಷ್ಟನಿಗೆ ಅದನ್ನು ಗ್ರಹಿಸುವಷ್ಟು ವಿವೇಕವಿಲ್ಲ.


ಕುಡಿದು ಬಡತನವನ್ನು ಮರೆತುಬಿಡಲಿ, ಶ್ರಮೆಯನ್ನು ಇನ್ನೂ ಜ್ಞಾಪಕಕ್ಕೆ ತಾರದಿರಲಿ.


ದಾವೀದನ ಮನೆತನದವರೇ, ಯೆಹೋವನು ಇಂತೆನ್ನುತ್ತಾನೆ - ನಿಮ್ಮ ದುಷ್ಕೃತ್ಯಗಳ ನಿವಿುತ್ತ ನನ್ನ ರೋಷವು ಜ್ವಾಲೆಯಂತೆ ಹೊರಟು ಯಾರೂ ಆರಿಸಲಾಗದಷ್ಟು ರಭಸವಾಗಿ ದಹಿಸಬಾರದಾಗಿದ್ದರೆ ಮುಂಜಾನೆ ನ್ಯಾಯತೀರಿಸಿರಿ, ಸುಲಿಗೆಯಾದವನನ್ನು ದೋಚಿಕೊಂಡವನ ಕೈಯಿಂದ ಬಿಡಿಸಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು