Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 4:12 - ಕನ್ನಡ ಸತ್ಯವೇದವು J.V. (BSI)

12 ನೀನು ನಡೆಯುವಾಗ ನಿನ್ನ ಹೆಜ್ಜೆಗೆ ಇಕ್ಕಟ್ಟಾಗದು, ಓಡಿದರೆ, ಮುಗ್ಗರಿಸುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ನೀನು ನಡೆಯುವಾಗ ನಿನ್ನ ಹೆಜ್ಜೆಗೆ ಅಡ್ಡಿಯಾಗುವುದಿಲ್ಲ, ಓಡಿದರೆ ಮುಗ್ಗರಿಸುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ನಡೆಯುವಾಗ ನಿನ್ನ ಹೆಜ್ಜೆಗೆ ತಡೆಯಾಗದು, ನೀ ಓಡುವಾಗ ಮುಗ್ಗರಿಸಿ ಬೀಳಲಾಗದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಈ ದಾರಿಯಲ್ಲೇ ಹೋಗು, ಆಗ ನಿನ್ನ ಕಾಲುಗಳು ಇಕ್ಕಟ್ಟಿಗೆ ಸಿಕ್ಕಿಕೊಳ್ಳುವುದಿಲ್ಲ. ನೀನು ಓಡಿದರೂ ಮುಗ್ಗರಿಸುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ನೀನು ನಡೆಯುವಾಗ ನಿನ್ನ ಹೆಜ್ಜೆಗೆ ತಡೆಯಾಗದು; ನೀನು ಓಡುವಾಗ ಮುಗ್ಗರಿಸಿ ಬೀಳುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 4:12
15 ತಿಳಿವುಗಳ ಹೋಲಿಕೆ  

ಆಗ ನೀನು ಎಡವದೆ ನಿನ್ನ ಮಾರ್ಗದಲ್ಲಿ ನಿರ್ಭಯವಾಗಿ ನಡೆಯುವಿ.


ನೀನು ನನ್ನ ಕಾಲುಗಳಿಗೆ ವಿಶಾಲಸ್ಥಳವನ್ನು ಕೊಟ್ಟದ್ದರಿಂದ ನನ್ನ ಹರಡುಗಳು ಕದಲುವದಿಲ್ಲ.


ಅದು ಎಡವುವ ಕಲ್ಲು ಮುಗ್ಗರಿಸುವ ಬಂಡೆ ಎಂತಲೂ ಬರೆದಿರುವ ಮಾತು ಸರಿಬೀಳುತ್ತದೆ. ಅವರು ದೇವರ ವಾಕ್ಯವನ್ನು ನಂಬಲೊಲ್ಲದೆ ಇರುವದರಿಂದ ಆ ಕಲ್ಲನ್ನು ಎಡವಿ ಬೀಳುತ್ತಾರೆ; ಅದಕ್ಕಾಗಿಯೇ ಅವರು ನೇಮಕವಾದರು.


ನೀನು ನನ್ನ ಕಾಲುಗಳಿಗೆ ವಿಶಾಲಸ್ಥಳವನ್ನು ಕೊಟ್ಟದರಿಂದ ನನ್ನ ಹರಡುಗಳು ಕದಲುವದಿಲ್ಲ.


ದುಷ್ಟರ ಮಾರ್ಗವೋ ಕತ್ತಲಿನಂತಿದೆ; ತಾವು ಯಾವದಕ್ಕೆ ಎಡವಿಬಿದ್ದೆವೆಂದು ಅವರಿಗೆ ಗೊತ್ತಾಗದು.


ಅವರು ಅಳುತ್ತಾ ನಡೆದು ಬರುವರು, ಅವರ ವಿಜ್ಞಾಪನೆಗಳಿಂದಲೇ ಅವರನ್ನು ಮುಂದರಿಸುವೆನು; ಎಡವದ ಸಮಮಾರ್ಗದಲ್ಲಿ ನಡಿಸುತ್ತಾ ತುಂಬಿದ ತೊರೆಗಳ ಬಳಿಗೆ ಬರಮಾಡುವೆನು; ನಾನು ಇಸ್ರಾಯೇಲಿಗೆ ತಂದೆ, ಎಫ್ರಾಯೀಮು ನನ್ನ ಹಿರಿಯ ಮಗನಲ್ಲವೆ.


ನೀನು ನಡೆಯುವಾಗ ಆ ಉಪದೇಶವು ನಿನ್ನನ್ನು ನಡಿಸುವದು, ಮಲಗಿಕೊಂಡಾಗ ಕಾಯುವದು, ಎಚ್ಚರಗೊಂಡಾಗ ನಿನ್ನೊಂದಿಗೆ ಮಾತಾಡುವದು.


ನಿನ್ನ ಧರ್ಮಶಾಸ್ತ್ರವನ್ನು ಪ್ರೀತಿಸುವವರಿಗೆ ಸಂಪೂರ್ಣ ಸಮಾಧಾನವಿರುತ್ತದೆ; ಅಂಥವರಿಗೆ ವಿಘ್ನಕರವಾದದ್ದೇನೂ ಇರುವದಿಲ್ಲ.


ನಾನು ನಿನ್ನ ನಿಯಮಗಳನ್ನು ಅಭ್ಯಾಸಿಸುವವನಾದ್ದರಿಂದ ಆಟಂಕವಿಲ್ಲದೆ ನಡೆಯುವೆನು.


ಹೀಗಿರಲು ನೀನು ನೀತಿನ್ಯಾಯಗಳನ್ನೂ ಧರ್ಮವನ್ನೂ ಅಂದರೆ ಸಕಲ ಸನ್ಮಾರ್ಗಗಳನ್ನು ತಿಳಿದುಕೊಳ್ಳುವಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು