Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 4:15 - ಕನ್ನಡ ಸತ್ಯವೇದವು J.V. (BSI)

15 ಅದಕ್ಕೆ ದೂರವಾಗಿರು, ಅದರಲ್ಲಿ ನಡೆಯದೆ ಓರೆಯಾಗು; ಮುಂದೆ ಮುಂದೆ ನಡೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಅದಕ್ಕೆ ದೂರವಾಗಿರು, ಅದರಲ್ಲಿ ನಡೆಯಬೇಡ, ಅದರಿಂದ ಹಿಂತಿರುಗಿ ಮುಂದೆ ನಡೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಆ ದುರ್ಮಾರ್ಗದಿಂದ ಓರೆಯಾಗು, ದೂರವಾಗು; ಅದರಲ್ಲಿ ನಡೆಯದೆ ಮುಂದಕ್ಕೆ ಸಾಗು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ದುಷ್ಟತನಕ್ಕೆ ದೂರವಾಗಿರು. ಅದರ ಬಳಿಗೆ ಹೋಗಬೇಡ. ನೇರವಾಗಿ ನಡೆದು ಅದರಿಂದ ದೂರವಾಗು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಆ ದಾರಿಯಿಂದ ತೊಲಗು, ಅದರ ಪಕ್ಕದಲ್ಲಿ ಹಾದು ಹೋಗಬೇಡ; ಅದರಿಂದ ತಪ್ಪಿಸಿಕೊಂಡು, ನಿನ್ನ ಮಾರ್ಗದಲ್ಲಿ ಮುಂದೆ ನಡೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 4:15
12 ತಿಳಿವುಗಳ ಹೋಲಿಕೆ  

ಕತ್ತಲೆಗೆ ಸಂಬಂಧವಾದ ಕೃತ್ಯಗಳಿಂದ ಯಾವ ಪ್ರಯೋಜನವೂ ಬರಲಾರದು; ಅವುಗಳಲ್ಲಿ ಪಾಲುಗಾರರಾಗಿರದೆ ಅವುಗಳನ್ನು ಬೈಲಿಗೆ ತಂದು ಖಂಡಿಸಿರಿ.


ಸಕಲವಿಧವಾದ ಕೆಟ್ಟತನಕ್ಕೆ ದೂರವಾಗಿರಿ.


ನೀನು ಸರ್ವಶಕ್ತನ ಕಡೆಗೆ ತಿರುಗಿಕೊಂಡು ನಿನ್ನ ಗುಡಾರಗಳಿಂದ ಅನ್ಯಾಯವನ್ನು ದೂರಮಾಡಿದರೆ ಉದ್ಧಾರವಾಗುವಿ.


ಅಧರ್ಮವು ನಿನ್ನ ಕೈಯಲ್ಲಿದ್ದರೆ ಅದನ್ನು ದೂರಮಾಡಿಬಿಡು; ಅನ್ಯಾಯವು ನಿನ್ನ ಗುಡಾರಗಳಲ್ಲಿ ವಾಸಿಸದಿರಲಿ.


ನಿರಪರಾಧಿಯಾಗಿಯೂ ಸನ್ಮಾರ್ಗಸ್ಥನಾಗಿಯೂ ಇರುವ ಮನುಷ್ಯನಿಗೆ ಮರಣದಂಡನೆಯನ್ನು ವಿಧಿಸಲೇ ಬಾರದು; ಅಂಥ ದುಷ್ಟತ್ವವನ್ನು ಮಾಡಿದವನಿಗೆ ನಾನು ಶಿಕ್ಷೆಯನ್ನು ವಿಧಿಸದೆ ಬಿಡುವದಿಲ್ಲ.


[ಕೇಳಿರಿ], ಸನ್ಮಾರ್ಗದಲ್ಲಿ ನಡೆದು ಯಥಾರ್ಥವಾಗಿ ನುಡಿದು ದೋಚಿಕೊಂಡ ಲಾಭ ಬೇಡವೆಂದು ಲಂಚ ಮುಟ್ಟದಂತೆ ಕೈ ಒದರಿ ಕೊಲೆಯ ಮಾತಿಗೆ ಕಿವಿಗೊಡದೆ ಕೆಟ್ಟದ್ದನ್ನು ನೋಡದಂತೆ ಕಣ್ಣು ಮುಚ್ಚಿಕೊಳ್ಳುವವನೇ ಉನ್ನತಸನ್ನಿಧಾನದಲ್ಲಿ ವಾಸಿಸುವನು;


ಬೇಟೆಗಾರನ ಕೈಯಿಂದ ಜಿಂಕೆಯು ಓಡುವಂತೆಯೂ ಪಕ್ಷಿಯು ಹಾರಿಹೋಗುವ ಹಾಗೂ ತಪ್ಪಿಸಿಕೋ.


ನಿನ್ನ ಮಾರ್ಗವು ಅವಳಿಗೆ ದೂರವಾಗಿರಲಿ. ಅವಳ ಮನೆಬಾಗಿಲ ಹತ್ತಿರ ಹೋದೀಯೆ.


ದುಷ್ಟರ ಮಾರ್ಗದಲ್ಲಿ ಸೇರದಿರು; ಕೆಟ್ಟವರ ದಾರಿಯಲ್ಲಿ ನಡೆಯಬೇಡ.


ಕೇಡುಮಾಡದಿದ್ದರೆ ಅವರಿಗೆ ನಿದ್ರೆಹತ್ತದು; ಯಾರನ್ನಾದರೂ ಎಡವಿಬೀಳಿಸದಿದ್ದರೆ ಅವರ ನಿದ್ರೆಗೆ ಭಂಗವಾಗುವದು.


ಮಗನೇ, ಅವರೊಡನೆ ದಾರಿಯಲ್ಲಿ ನಡೆಯಬಾರದು, ಅವರ ಮಾರ್ಗದಲ್ಲಿ ನೀನು ಹೆಜ್ಜೆಯಿಡಬೇಡ.


ಕೆಟ್ಟವರನ್ನು ನೋಡಿ ಹೊಟ್ಟೆಕಿಚ್ಚುಪಡಬೇಡ, ಅವರ ಸಹವಾಸವನ್ನು ಬಯಸದಿರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು