Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 4:25 - ಕನ್ನಡ ಸತ್ಯವೇದವು J.V. (BSI)

25 ನೆಟ್ಟಗೆ ದೃಷ್ಟಿಸು; ನಿನ್ನ ಕಣ್ಣುಗಳು ನಿನ್ನ ಮುಂದೆಯೇ ಇರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ನೆಟ್ಟಗೆ ದೃಷ್ಟಿಸು, ನಿನ್ನ ಕಣ್ಣುಗಳು ನಿನ್ನ ಮುಂದೆಯೇ ಇರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

25 ನಿನ್ನ ಕಣ್ಣುಗಳು ನೇರವಾಗಿ ನಾಟಿರಲಿ, ಕಣ್ಣು ರೆಪ್ಪೆಗಳು ಮುಂದಾಗಿ ತೆರೆದಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 ಒಳ್ಳೆಯದನ್ನೇ ದೃಷ್ಟಿಸು; ನಿನ್ನ ನೋಟವನ್ನು ನಿನ್ನ ಗುರಿಯ ಮೇಲೆ ಕೇಂದ್ರೀಕರಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ನಿನ್ನ ದೃಷ್ಟಿ ನೇರವಾಗಿಯೇ ನೋಡಲಿ; ನಿನ್ನ ನೋಟವು ನೇರವಾಗಿ ನಿನ್ನ ಮುಂದೆಯೇ ನಾಟಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 4:25
9 ತಿಳಿವುಗಳ ಹೋಲಿಕೆ  

ವ್ಯರ್ಥಕಾರ್ಯಗಳಲ್ಲಿ ದೃಷ್ಟಿಯಿಡದಂತೆ ನನ್ನನ್ನು ಕಾಪಾಡು; ನಿನ್ನ ಮಾರ್ಗದಲ್ಲಿ ನಡೆಯುವಂತೆ ನನ್ನನ್ನು ಚೈತನ್ಯಗೊಳಿಸು.


ಕಣ್ಣು ದೇಹಕ್ಕೆ ದೀಪವಾಗಿದೆ; ಹೀಗಿರುವಲ್ಲಿ ನಿನ್ನ ಕಣ್ಣು ನೆಟ್ಟಗಿದ್ದರೆ ನಿನ್ನ ದೇಹವೆಲ್ಲಾ ಬೆಳಕಾಗಿರುವದು.


ನನ್ನ ಕಣ್ಣುಗಳೊಡನೆ ನಿಬಂಧನೆಯನ್ನು ಮಾಡಿಕೊಂಡಿದ್ದೇನೆ. ಯುವತಿಯ ಮೇಲೆ ಹೇಗೆ ಕಣ್ಣಿಟ್ಟೇನು?


ನಿನ್ನ ಕಣ್ಣು ಇಲ್ಲದ್ದನ್ನೇ ಕಾಣುವದು, ಮನಸ್ಸು ವಿಪರೀತಗಳನ್ನು ಹೊರಪಡಿಸುವದು.


ನಿನ್ನ ದೃಷ್ಟಿಯು ಧನದ ಮೇಲೆ ಎರಗುತ್ತದೋ? ಧನವು ಅಷ್ಟರೊಳಗೆ ಮಾಯವಾಗುವದು; ಆಕಾಶದ ಕಡೆಗೆ ಹಾರುವ ಹದ್ದಿನಂತೆ ಅದು ರೆಕ್ಕೆಗಳನ್ನು ಕಟ್ಟಿಕೊಂಡಿದೆ.


ಸೊಟ್ಟ ಮಾತುಗಳನ್ನು ನಿನ್ನಿಂದ ತೊಲಗಿಸಿಬಿಡು, ತುಟಿಗಳ ವಕ್ರತೆಯನ್ನು ದೂರಮಾಡು.


ನೀನು ನಡೆಯುವ ದಾರಿಯನ್ನು ಸಮಮಾಡು; ನಿನ್ನ ಮಾರ್ಗಗಳೆಲ್ಲಾ ದೃಢವಾಗಿರಲಿ.


ಬುದ್ಧಿಹೀನನು ಮೂರ್ಖತನದಲ್ಲಿ ಆನಂದಿಸುವನು; ಬುದ್ಧಿವಂತನು ತನ್ನ ಮಾರ್ಗವನ್ನು ಸರಳಮಾಡಿಕೊಳ್ಳುವನು.


ದುಷ್ಟನ ಮುಖದಲ್ಲಿ ಲಜ್ಜೆಯಿಲ್ಲ; ಸತ್ಯವಂತನು ತನ್ನ ನಡತೆಯನ್ನು ಸರಿಪಡಿಸಿಕೊಳ್ಳುತ್ತಿರುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು