Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 4:3 - ಕನ್ನಡ ಸತ್ಯವೇದವು J.V. (BSI)

3 ನಾನೂ ನನ್ನ ತಂದೆಗೆ [ಅಧೀನನಾದ] ಮಗನೂ, ತಾಯಿಯ ದೃಷ್ಟಿಗೆ ಕೋಮಲನಾದ ಏಕಪುತ್ರನೂ ಆಗಿದ್ದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ನಾನೂ ನನ್ನ ತಂದೆಗೆ ಅಧೀನನಾದ ಮಗನೂ, ತಾಯಿಯ ದೃಷ್ಟಿಗೆ ಕೋಮಲನಾದ ಏಕಪುತ್ರನೂ ಆಗಿದ್ದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ನಾನೂ ಕೂಡ ತಂದೆಗೆ ಒಬ್ಬ ಚಿಕ್ಕ ಮಗುವಾಗಿದ್ದೆ, ತಾಯಿಗೆ ಏಕೈಕ ಕುಮಾರನೂ ಕೋಮಲನೂ ಆಗಿದ್ದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ನಾನು ನನ್ನ ತಂದೆಗೆ ಚಿಕ್ಕ ಮಗನಾಗಿದ್ದೆ. ನನ್ನ ತಾಯಿಗೆ ನಾನೊಬ್ಬನೇ ಮಗನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ನಾನೂ ಕೂಡ ನನ್ನ ತಂದೆಗೆ ನೆಚ್ಚಿನ ಮಗನೂ ನನ್ನ ತಾಯಿಗೆ ಮುದ್ದು ಮಗನೂ ಆಗಿದ್ದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 4:3
8 ತಿಳಿವುಗಳ ಹೋಲಿಕೆ  

ದಾವೀದನು [ತನ್ನ ಮನಸ್ಸಿನಲ್ಲಿ] - ನನ್ನ ಮಗನಾದ ಸೊಲೊಮೋನನು ಎಳೇ ಪ್ರಾಯದವನಾಗಿದ್ದಾನೆ; ಯೆಹೋವನಿಗೋಸ್ಕರ ಕಟ್ಟಿಸತಕ್ಕ ಆಲಯವು ಎಲ್ಲಾ ದೇಶಗಳಲ್ಲಿ ಕೀರ್ತಿ ಘನಗಳನ್ನು ಹೊಂದಬೇಕಾದರೆ ಅದು ಅಧಿಕ ಶೋಭಾಯಮಾನವಾದದ್ದಾಗಿರಬೇಕು; ಆದದರಿಂದ ಅದಕ್ಕೆ ಬೇಕಾಗುವದನ್ನೆಲ್ಲಾ ಸಿದ್ಧಪಡಿಸುವೆನು ಅಂದುಕೊಂಡು ಸಾಯುವದಕ್ಕೆ ಮೊದಲೇ ಬಹಳವಾಗಿ ಸೌರಣೆಮಾಡಿದನು.


ನಿಮ್ಮ ನಿಮ್ಮೊಳಗೆ ಏಕಮನಸ್ಸುಳ್ಳವರಾಗಿರ್ರಿ, ದೊಡ್ಡಸ್ತಿಕೆಯ ಮೇಲೆ ಮನಸ್ಸಿಡದೆ ದೀನರ ಸಂಗಡ ಬಳಿಕೆಯಾಗಿರ್ರಿ. ನಿಮ್ಮನ್ನು ನೀವೇ ಬುದ್ಧಿವಂತರೆಂದು ಎಣಿಸಿಕೊಳ್ಳಬೇಡಿರಿ.


ತರುವಾಯ ಅರಸನಾದ ದಾವೀದನು - ದೇವರು ನನ್ನ ಮಗನಾದ ಸೊಲೊಮೋನನನ್ನೇ ಆರಿಸಿಕೊಂಡಿದ್ದಾನೆ; ಆದರೆ ಅವನು ಇನ್ನೂ ಎಳೇ ಪ್ರಾಯದವನು. ಮಾಡತಕ್ಕ ಕೆಲಸವೋ ವಿಶೇಷವಾದದ್ದು. ಕಟ್ಟತಕ್ಕ ಮಂದಿರವು ದೇವರಾದ ಯೆಹೋವನಿಗಾಗಿಯೇ ಅಲ್ಲದೆ ಮನುಷ್ಯನಿಗಾಗಿಯಲ್ಲ;


ದಾವೀದ ವಂಶದವರಲ್ಲಿಯೂ ಯೆರೂಸಲೇವಿುನವರಲ್ಲಿಯೂ ದೇವರ ದಯೆಯನ್ನು ಹಂಬಲಿಸಿ ಬೇಡುವ ಭಾವವನ್ನು ಸುರಿಸುವೆನು; ತಾವು ಇರಿದವನನ್ನು ದಿಟ್ಟಿಸಿ ನೋಡುವರು; ಇದ್ದೊಬ್ಬ ಮಗನನ್ನು ಕಳೆದುಕೊಂಡಂತೆ ಅವನಿಗಾಗಿ ಗೋಳಾಡುವರು. ಚೊಚ್ಚಲಮಗನ ವಿಯೋಗಕ್ಕೋಸ್ಕರ ದುಃಖಪಟ್ಟಂತೆ ಅವನಿಗಾಗಿ ದುಃಖಿಸುವರು.


ಯೆಹೋವನೇ, ಮಾನವನ ಮಾರ್ಗವು ಅವನ ಸ್ವಾಧೀನದಲ್ಲಿಲ್ಲವೆಂದು ನನಗೆ ಗೊತ್ತು; ಮನುಷ್ಯನು ನಡೆದಾಡುತ್ತಾ ಸರಿಯಾದ ಕಡೆಗೆ ತನ್ನ ಹೆಜ್ಜೆಯನ್ನಿಡಲಾರನು.


ಯೆರೂಸಲೇವಿುನಲ್ಲಿರುವಾಗ ಅವನಿಗೆ - ಶಿಮ್ಮ, ಶೋಬಾಬ್, ನಾತಾನ್, ಸೊಲೊಮೋನ್ ಎಂಬ ನಾಲ್ವರು ಅಮ್ಮೀಯೇಲನ ಮಗಳಾದ ಬತ್ಷೂವಳಲ್ಲಿ ಹುಟ್ಟಿದರು;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು