Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 4:5 - ಕನ್ನಡ ಸತ್ಯವೇದವು J.V. (BSI)

5 ಜ್ಞಾನವನ್ನು ಪಡೆ, ವಿವೇಕವನ್ನು ಸಂಪಾದಿಸು, ಮರೆಯಬೇಡ, ನನ್ನ ಮಾತುಗಳಿಗೆ ಓರೆಯಾಗಬೇಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಜ್ಞಾನವನ್ನು ಪಡೆ, ವಿವೇಕವನ್ನು ಸಂಪಾದಿಸು, ಮರೆಯಬೇಡ, ನನ್ನ ಮಾತುಗಳಿಗೆ ಅಸಡ್ಡೆ ತೋರಿಸಬೇಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಮರೆಯಬೇಡ, ನನ್ನ ಮಾತಿಗೆ ಓರೆಯಾಗಬೇಡ, ಜ್ಞಾನವನ್ನು ಪಡೆ. ವಿವೇಕವನ್ನು ಗಳಿಸಿಕೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಜ್ಞಾನವನ್ನು ಮತ್ತು ವಿವೇಕವನ್ನು ಪಡೆದುಕೋ! ನನ್ನ ಮಾತುಗಳನ್ನು ಮರೆಯಬೇಡ. ಯಾವಾಗಲೂ ನನ್ನ ಉಪದೇಶಗಳನ್ನು ಅನುಸರಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಜ್ಞಾನವನ್ನು ಪಡೆ, ತಿಳುವಳಿಕೆಯನ್ನು ಸಂಪಾದಿಸು; ನನ್ನ ಮಾತುಗಳನ್ನು ಮರೆಯದಿರು, ಅವುಗಳಿಂದ ದೂರವಾಗಬೇಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 4:5
17 ತಿಳಿವುಗಳ ಹೋಲಿಕೆ  

ನಿಮ್ಮಲ್ಲಿ ಯಾವನಿಗಾದರೂ ಜ್ಞಾನ ಕಡಿಮೆಯಾಗಿದ್ದರೆ ಅವನು ದೇವರನ್ನು ಕೇಳಿಕೊಳ್ಳಲಿ, ಅದು ಅವನಿಗೆ ದೊರಕುವದು; ದೇವರು ಹಂಗಿಸದೆ ಎಲ್ಲರಿಗೂ ಉದಾರ ಮನಸ್ಸಿನಿಂದ ಕೊಡುವವನಾಗಿದ್ದಾನೆ.


ಅವನು ಎಡಕ್ಕಾಗಲಿ ಬಲಕ್ಕಾಗಲಿ ತಿರುಗಿಕೊಳ್ಳದೆ ತನ್ನ ಪೂರ್ವಿಕನಾದ ದಾವೀದನ ಮಾರ್ಗದಲ್ಲೇ ಯೆಹೋವನ ಚಿತ್ತಾನುಸಾರವಾಗಿ ನಡೆದನು.


ಬುದ್ಧಿಯನ್ನು ಸಂಪಾದಿಸುವವನು ತನಗೆ ತಾನೇ ವಿುತ್ರನು; ವಿವೇಕವನ್ನು ಕಾಪಾಡುವವನು ಮೇಲನ್ನು ಪಡೆಯುವನು.


ಜ್ಞಾನವನ್ನು ಕೊಳ್ಳಲು ಮೂಢನ ಕೈಯಲ್ಲಿ ಹಣವೇಕೆ? ಅವನಿಗೆ ಬುದ್ಧಿಯೇ ಇಲ್ಲವಲ್ಲಾ.


ಮೂಢರೇ, ಜಾಣತನವನ್ನು ಕಲಿತುಕೊಳ್ಳಿರಿ, ಜ್ಞಾನಹೀನರೇ, ಬುದ್ಧಿಯನ್ನು ಗ್ರಹಿಸಿರಿ.


ನಮ್ಮ ಹೃದಯವು ಹಿಂದಿರುಗಲಿಲ್ಲ; ನಮ್ಮ ಕಾಲು ನಿನ್ನ ದಾರಿಯಿಂದ ಅಗಲಲಿಲ್ಲ.


ಸತ್ಯವನ್ನು ಎಂದರೆ ಜ್ಞಾನ ಸುಶಿಕ್ಷೆ ವಿವೇಕಗಳನ್ನು ಕೊಂಡುಕೋ; ಮಾರಿ ಬಿಡಬೇಡ.


ಜನರಲ್ಲಿ ಸೇರದವನು ಸ್ವೇಚ್ಫಾನುಸಾರ ನಡೆಯುತ್ತಾ ಸಮಸ್ತ ಸುಜ್ಞಾನಕ್ಕೂ ರೇಗುವನು.


ಬಂಗಾರಕ್ಕಿಂತಲೂ ಜ್ಞಾನವನ್ನು ಪಡೆಯುವದು ಎಷ್ಟೋ ಮೇಲು; ಬೆಳ್ಳಿಗಿಂತಲೂ ವಿವೇಕವನ್ನು ಹೊಂದುವದು ಲೇಸು.


ನನ್ನನ್ನು ಹಿಂಸಿಸುವ ವೈರಿಗಳು ಅನೇಕರಿದ್ದರೂ ನಾನು ನಿನ್ನ ಕಟ್ಟಳೆಗಳನ್ನು ಬಿಟ್ಟುನಡೆಯಲಿಲ್ಲ.


ಗರ್ವಿಷ್ಠರು ನನ್ನನ್ನು ಬಹಳವಾಗಿ ಹಾಸ್ಯಮಾಡಿದರು; ಆದರೂ ನಾನು ನಿನ್ನ ಧರ್ಮಶಾಸ್ತ್ರವನ್ನು ಬಿಡಲಿಲ್ಲ.


ಆತನ ಹೆಜ್ಜೆಯ ಜಾಡಿನಲ್ಲೇ ಕಾಲಿಟ್ಟಿದ್ದೇನೆ, ಓರೆಯಾಗದೆ ಆತನ ದಾರಿಯನ್ನೇ ಹಿಡಿದಿದ್ದೇನೆ.


ಕಂದಾ, ನನ್ನ ಉಪದೇಶವನ್ನು ಮರೆಯಬೇಡ, ನನ್ನ ಆಜ್ಞೆಗಳನ್ನು ಮನಃಪೂರ್ವಕವಾಗಿ ನಡಿಸು.


ಜ್ಞಾನವನ್ನು ಪಡೆಯಬೇಕೆಂಬದೇ ಜ್ಞಾನಬೋಧೆಯ ಪ್ರಥಮಪಾಠ; ನಿನ್ನ ಎಲ್ಲಾ ಸಂಪತ್ತಿನಿಂದಲೂ ವಿವೇಕವನ್ನು ಪಡೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು