Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 4:8 - ಕನ್ನಡ ಸತ್ಯವೇದವು J.V. (BSI)

8 ಜ್ಞಾನವೆಂಬಾಕೆಯು ಶ್ರೇಷ್ಠಳು ಎಂದು ನೀನು ಭಾವಿಸಿದರೆ ಆಕೆಯು ನಿನ್ನನ್ನು ಉನ್ನತಿಗೆ ತರುವಳು; ಆಕೆಯನ್ನು ಅಪ್ಪಿಕೊಂಡರೆ ನಿನ್ನನ್ನು ಘನಪಡಿಸುವಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಜ್ಞಾನವೆಂಬಾಕೆಯು ಶ್ರೇಷ್ಠಳು ಎಂದು ನೀನು ಭಾವಿಸಿದರೆ ಆಕೆಯು ನಿನ್ನನ್ನು ಉನ್ನತಿಗೆ ತರುವಳು, ಆಕೆಯನ್ನು ಅಪ್ಪಿಕೊಂಡರೆ ನಿನ್ನನ್ನು ಘನಪಡಿಸುವಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಜ್ಞಾನವೆಂಬಾಕೆಯನ್ನು ಶ್ರೇಷ್ಠಳೆಂದು ಭಾವಿಸಿದೆಯಾದರೆ, ಆಕೆ ನಿನ್ನನ್ನು ಸನ್ಮಾನಿಸುವಳು. ನೀನು ಅವಳನ್ನು ಅಪ್ಪಿಕೊಂಡೆಯಾದರೆ, ಆಕೆ ನಿನ್ನನ್ನು ಘನಪಡಿಸುವಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಜ್ಞಾನವನ್ನು ಪ್ರೀತಿಸು, ಆಗ ಅದು ನಿನ್ನನ್ನು ಉನ್ನತಸ್ಥಾನಕ್ಕೆ ತರುವುದು. ಜ್ಞಾನವನ್ನು ಅಪ್ಪಿಕೊ; ಆಗ ಅದು ನಿನಗೆ ಸನ್ಮಾನವನ್ನು ತರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಜ್ಞಾನವನ್ನು ನೀನು ಅಮೂಲ್ಯವೆಂದು ಎಣಿಸು, ಆಕೆಯು ನಿನ್ನನ್ನು ಮೇಲೆತ್ತುವಳು; ಆಕೆಯನ್ನು ನೀನು ಅಪ್ಪಿಕೊ, ಆಕೆಯು ನಿನ್ನನ್ನು ಘನಪಡಿಸುವಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 4:8
7 ತಿಳಿವುಗಳ ಹೋಲಿಕೆ  

ಜ್ಞಾನಿಗಳು ತೇಜೋಮಯವಾದ ಆಕಾಶಮಂಡಲದಂತೆ ಪ್ರಕಾಶಿಸುವರು; ಬಹು ಜನರನ್ನು ಸದ್ಧರ್ಮಿಗಳನ್ನಾಗಿ ಮಾಡುವವರು ಯುಗಯುಗಾಂತರಗಳಲ್ಲಿಯೂ ನಕ್ಷತ್ರಗಳ ಹಾಗೆ ಹೊಳೆಯುವರು.


ನಿನ್ನ ಗೋತ್ರದವರೂ ಸಂತಾನದವರೂ ನಿರಂತರವೂ ನನ್ನ ಸನ್ನಿಧಿಯಲ್ಲಿ ಸೇವೆಮಾಡಬಹುದು ಎಂದು ಆಜ್ಞಾಪಿಸಿದ ಇಸ್ರಾಯೇಲ್‍ದೇವರಾದ ಯೆಹೋವನೆಂಬ ನಾನು ಈಗ ತಿಳಿಸುವದೇನಂದರೆ - ಅದು ನನಗೆ ದೂರವಾಗಿರಲಿ; ನನ್ನನ್ನು ಸನ್ಮಾನಿಸುವವರನ್ನು ಸನ್ಮಾನಿಸುವೆನು; ನನ್ನನ್ನು ತಿರಸ್ಕರಿಸುವವರು ತಿರಸ್ಕಾರಹೊಂದುವರು.


ಜ್ಞಾನವಂತರು ಸನ್ಮಾನಕ್ಕೆ ಬಾಧ್ಯರಾಗುವರು; ಜ್ಞಾನಹೀನರಿಗಾಗುವ ಬಹುಮಾನವೋ ಅವಮಾನವೇ.


ಧನ ಮಾನ ಜೀವಗಳು ದೀನಭಾವಕ್ಕೂ ಯೆಹೋವನ ಭಯಕ್ಕೂ ಫಲ.


ಅವನ ಎಡಗೈ ನನಗೆ ತಲೆಗಿಂಬಾಗಿ ಬಲಗೈ ತಬ್ಬುವದಾದರೆ ಎಷ್ಟೋ ಸಂತೋಷ!


ಜ್ಞಾನವೆಂಬಾಕೆಯ ಬಲಗೈಯಲ್ಲಿ ದೀರ್ಘಾಯುಷ್ಯವೂ, ಎಡಗೈಯಲ್ಲಿ ಧನವೂ ಘನತೆಯೂ ಉಂಟು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು