Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 4:9 - ಕನ್ನಡ ಸತ್ಯವೇದವು J.V. (BSI)

9 ಆಕೆಯು ನಿನ್ನ ತಲೆಗೆ ಅಂದದ ಪುಷ್ಪ ಮಾಲೆಯನ್ನಿಟ್ಟು ಸುಂದರ ಕಿರೀಟವನ್ನು ನಿನಗೆ ಒಪ್ಪಿಸುವಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಆಕೆಯು ನಿನ್ನ ತಲೆಗೆ ಅಂದದ ಪುಷ್ಪಮಾಲೆಯನ್ನು ಇಟ್ಟು, ಸುಂದರ ಕಿರೀಟವನ್ನು ನಿನಗೆ ಒಪ್ಪಿಸುವಳು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಅಂದದ ಪುಷ್ಪಮಾಲೆಯನ್ನು ಹಾಕುವಳು ನಿನ್ನ ಕೊರಳಿಗೆ, ಸುಂದರ ಕಿರೀಟವನ್ನು ಮುಡಿಸುವಳು ನಿನ್ನ ತಲೆಗೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಅದು ನಿನಗೆ ಅಂದವಾದ ಪುಷ್ಪಮಾಲೆಯಂತೆಯೂ ಸುಂದರವಾದ ಕಿರೀಟದಂತೆಯೂ ಇರುವುದು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಆಕೆಯನ್ನು ನಿನ್ನ ತಲೆಗೆ ಮಹಿಮೆಯ ಕಿರೀಟವಾಗಿರುವಳು; ಆಕೆಯನ್ನು ನಿನಗೆ ಘನತೆಯ ಕಿರೀಟವನ್ನು ಸಮರ್ಪಿಸುವಳು.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 4:9
12 ತಿಳಿವುಗಳ ಹೋಲಿಕೆ  

ಅವು ನಿನ್ನ ತಲೆಗೆ ಅಂದದ ಪುಷ್ಪ ಕಿರೀಟ; ಕೊರಳಿಗೆ ಹಾರ.


ಹಿರೀ ಕುರುಬನು ಪ್ರತ್ಯಕ್ಷನಾಗುವಾಗ ನೀವು ದೇವಪ್ರಭಾವವೆಂಬ ಎಂದಿಗೂ ಬಾಡದ ಜಯಮಾಲೆಯನ್ನು ಹೊಂದುವಿರಿ.


ಆ ದಿನದಲ್ಲಿ ಸೇನಾಧೀಶ್ವರನಾದ ಯೆಹೋವನೇ ತನ್ನ ಜನರಲ್ಲಿ ಉಳಿದವರಿಗೆ ಅಂದದ ಕಿರೀಟವೂ ಸುಂದರ ಮುಕುಟವೂ ಆಗಿರುವನು;


ನರೆಗೂದಲೇ ಸುಂದರ ಕಿರೀಟವು; ಅದು ಧರ್ಮಮಾರ್ಗದಲ್ಲಿ ದೊರಕುವದು.


ನಾನು ಜಯಹೊಂದಿ ನನ್ನ ತಂದೆಯೊಡನೆ ಸಿಂಹಾಸನದಲ್ಲಿ ಕೂತುಕೊಂಡೆನು; ಹಾಗೆಯೇ ಜಯಹೊಂದುವವನನ್ನು ನನ್ನೊಡನೆ ಸಿಂಹಾಸನದಲ್ಲಿ ಕೂತುಕೊಳ್ಳುವಂತೆ ಮಾಡುವೆನು.


ಜಡೆಹೆಣೆದುಕೊಳ್ಳುವದು ಚಿನ್ನದ ಒಡವೆಗಳನ್ನು ಇಟ್ಟುಕೊಳ್ಳುವದು ವಸ್ತ್ರಗಳನ್ನು ಧರಿಸಿಕೊಳ್ಳುವದು ಈ ಮೊದಲಾದ ಹೊರಗಣ ಶೃಂಗಾರವೇ ನಿಮ್ಮ ಅಲಂಕಾರವಾಗಿರಬಾರದು.


ಅವು ನಿನಗೆ ಜೀವವೂ ನಿನ್ನ ಕೊರಳಿಗೆ ಭೂಷಣವೂ ಆಗಿರುವವು.


ಕಂದಾ, ಆಲಿಸಿ ನನ್ನ ಮಾತುಗಳನ್ನು ಕೇಳು; ಕೇಳಿದರೆ, ನಿನ್ನ ಜೀವಮಾನದ ವರುಷಗಳು ಹೆಚ್ಚುವವು.


ಇದಲ್ಲದೆ ನೀನು ಕೇಳದಂಥದನ್ನೂ ನಿನಗೆ ಅನುಗ್ರಹಿಸಿದ್ದೇನೆ. ನಿನ್ನ ಜೀವಮಾನದಲ್ಲೆಲ್ಲಾ ಐಶ್ವರ್ಯದಲ್ಲಿಯೂ ಘನದಲ್ಲಿಯೂ ನಿನಗೆ ಸಮಾನನಾದ ಅರಸನು ಇನ್ನೊಬ್ಬನಿರುವದಿಲ್ಲ.


ಮೂರ್ಖರಿಗೆ ಮೂರ್ಖತನವೇ ಸ್ವಾಸ್ತ್ಯ; ಜಾಣರಿಗೆ ಜ್ಞಾನವೇ ಮುಕುಟ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು