Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 5:2 - ಕನ್ನಡ ಸತ್ಯವೇದವು J.V. (BSI)

2 ಹೀಗಾದರೆ ನೀನು ಸುಬುದ್ಧಿಯನ್ನು ಕೈಗೊಳ್ಳುವಿ, ನಿನ್ನ ತುಟಿಗಳು ತಿಳುವಳಿಕೆಯನ್ನು ಕಾಪಾಡುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಹೀಗಾದರೆ ನೀನು ವಿವೇಚನೆಯನ್ನು ಹೊಂದಿಕೊಳ್ಳುವಿ, ನಿನ್ನ ತುಟಿಗಳು ತಿಳಿವಳಿಕೆಯನ್ನು ಕಾಪಾಡುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಆಗ ನೀನು ವಿವೇಕಶೀಲನಾಗುವೆ; ನಿನ್ನ ತುಟಿಗಳು ತಿಳುವಳಿಕೆಯನ್ನು ಕಾಯ್ದುಕೊಳ್ಳುವುವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಆಗ ನೀನು ಯೋಗ್ಯವಾಗಿ ನಡೆದುಕೊಳ್ಳುವೆ; ತಿಳುವಳಿಕೆಯಿಂದ ಮಾತಾಡುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಆಗ ನಿನ್ನ ವಿವೇಚನೆಯನ್ನು ಉಳಿಸಿಕೊಳ್ಳುವೆ. ನಿನ್ನ ತುಟಿಗಳು ತಿಳುವಳಿಕೆಯನ್ನು ಕಾಪಾಡುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 5:2
11 ತಿಳಿವುಗಳ ಹೋಲಿಕೆ  

ಜ್ಞಾನಿಯ ಹೃದಯವು ಅವನ ಬಾಯಿಗೆ ಜಾಣತನವನ್ನೂ ಅವನ ತುಟಿಗಳಿಗೆ ಉಪದೇಶ ಶಕ್ತಿಯನ್ನೂ ಹೆಚ್ಚಿಸುವದು.


ಜ್ಞಾನಿಗಳ ತುಟಿಗಳು ತಿಳುವಳಿಕೆಯನ್ನು ಬಿತ್ತುವವು. ಜ್ಞಾನಹೀನರ ಹೃದಯವು ಅದನ್ನು ಬಿತ್ತುವದೇ ಇಲ್ಲ.


ವಧುವೇ, ನಿನ್ನ ತುಟಿಗಳು ಜೇನುಗರೆಯುತ್ತವೆ; ಜೇನೂ ಹಾಲೂ ನಿನ್ನ ನಾಲಿಗೆಯೊಳಗಿವೆ; ನಿನ್ನ ವಸ್ತ್ರಗಳ ಸುವಾಸನೆಯೋ ಲೆಬನೋನಿನ ಪರಿಮಳವೇ.


ಜ್ಞಾನಿಗಳ ನಾಲಿಗೆಯು ತಿಳುವಳಿಕೆಯನ್ನು ಸಾರ್ಥಕ ಮಾಡುವದು; ಜ್ಞಾನಹೀನರ ಬಾಯಿಯು ಮೂರ್ಖತನವನ್ನು ಕಕ್ಕುವದು.


ಶಿಷ್ಟರ ಭಾಷಣ ಬಹುಜನಪೋಷಣ; ಬುದ್ಧಿಯ ಕೊರತೆ ಮೂರ್ಖರ ನಾಶನ.


ನನ್ನ ತುಟಿಗಳು ನಿನ್ನ ವಿಧಿವಚನಗಳನ್ನೆಲ್ಲಾ ವರ್ಣಿಸುತ್ತವೆ.


ನನ್ನ ಬಾಯಿ ನಿನ್ನ ನೀತಿಯನ್ನೂ ರಕ್ಷಣೆಯನ್ನೂ ಹಗಲೆಲ್ಲಾ ವರ್ಣಿಸುತ್ತಿರುವದು; ಆದರೂ ಅವುಗಳ ವಿವರಣೆ ನನಗೆ ಅಸಾಧ್ಯ.


ನೀನು ಎಲ್ಲಾ ಮನುಷ್ಯರಿಗಿಂತ ಅತಿಸುಂದರನು; ನಿನ್ನ ಮಾತುಗಳು ಬಹಳ ಮಧುರ; ಇದರಿಂದಲೇ ದೈವಾನುಗ್ರಹವು ಯಾವಾಗಲೂ ನಿನ್ನ ಮೇಲಿದೆ ಎಂಬದು ನಿನ್ನ ಬಾಯ ಮಾತುಗಳಿಂದ ಸ್ಪಷ್ಟವಾಗುತ್ತದೆ.


ಹೊನ್ನು ಉಂಟು, ಹವಳದ ರಾಶಿ ಉಂಟು, ಆದರೆ ಜ್ಞಾನದ ತುಟಿಗಳೇ ಅಮೂಲ್ಯಾಭರಣ.


ಮಗನೇ, ಸುಜ್ಞಾನವನ್ನೂ ಬುದ್ಧಿಯನ್ನೂ ಭದ್ರವಾಗಿಟ್ಟುಕೋ, ನಿನ್ನ ದೃಷ್ಟಿಯು ಅವುಗಳ ಮೇಲೆ ತಪ್ಪದೇ ಇರಲಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು