Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 5:20 - ಕನ್ನಡ ಸತ್ಯವೇದವು J.V. (BSI)

20 ಮಗನೇ, ಏಕೆ ಪರಸ್ತ್ರೀಯಲ್ಲಿ ಭ್ರಮೆಗೊಳ್ಳುವಿ, ಅನ್ಯಳ ಎದೆಯನ್ನು ತಬ್ಬಿಕೊಳ್ಳುವದೇಕೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಮಗನೇ, ಏಕೆ ಪರಸ್ತ್ರೀಯಲ್ಲಿ ಭ್ರಮೆಗೊಳ್ಳುವಿ, ಅನ್ಯಳ ಎದೆಯನ್ನು ತಬ್ಬಿಕೊಳ್ಳುವುದೇಕೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಮಗನೇ, ಪರಸ್ತ್ರೀಯಲ್ಲಿ ಭ್ರಮೆ ಏಕೆ? ಅನ್ಯಳ ಎದೆ ತಬ್ಬಿಕೊಳ್ಳುವುದೇಕೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ಪರಸ್ತ್ರೀಯಲ್ಲಿ ಮೋಹಗೊಂಡು ಆಕೆಯನ್ನು ಅಪ್ಪಿಕೊಳ್ಳಬೇಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಮಗನೇ, ಬೇರೆಯವನ ಹೆಂಡತಿಗೆ ವಶವಾಗುವುದೇಕೆ? ಅನ್ಯಳ ಎದೆಯನ್ನೇಕೆ ಅಪ್ಪಿಕೊಳ್ಳುವೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 5:20
10 ತಿಳಿವುಗಳ ಹೋಲಿಕೆ  

ಅವು ಜಾರಳಿಂದ, ಸವಿಮಾತನಾಡುವ ಪರಸ್ತ್ರೀಯಿಂದ, ನಿನ್ನನ್ನು ರಕ್ಷಿಸುವವು.


ಅದು ಕೆಟ್ಟ ಹೆಂಗಸಿನಿಂದಲೂ ಪರಸ್ತ್ರೀಯ ನಾಲಿಗೆಯ ಸಿಹಿನುಡಿಯಿಂದಲೂ ನಿನ್ನನ್ನು ರಕ್ಷಿಸತಕ್ಕದ್ದಾಗಿದೆ.


ನಿನ್ನ ಕಣ್ಣು ಇಲ್ಲದ್ದನ್ನೇ ಕಾಣುವದು, ಮನಸ್ಸು ವಿಪರೀತಗಳನ್ನು ಹೊರಪಡಿಸುವದು.


ಜಾರಸ್ತ್ರೀಯ ಬಾಯಿ ಆಳವಾದ ಹಳ್ಳ; ಯೆಹೋವನಿಗೆ ಸಿಟ್ಟನ್ನೆಬ್ಬಿಸಿದವನು ಅದರಲ್ಲಿ ಬೀಳುವನು.


ಅರಸನಾದ ಸೊಲೊಮೋನನು ಫರೋಹನ ಮಗಳಲ್ಲದೆ ಮೋವಾಬ್ಯರು, ಅಮ್ಮೋನಿಯರು, ಎದೋಮ್ಯರು, ಚೀದೋನ್ಯರು, ಹಿತ್ತಿಯರು ಎಂಬೀ ಜನಾಂಗಗಳ ಸ್ತ್ರೀಯರನ್ನೂ ಮೋಹಿಸಿದನು.


ಜಾರಸ್ತ್ರೀಯ ತುಟಿಗಳಲ್ಲಾದರೋ ಜೇನುಗರೆಯುವದು, ಅವಳ ಮಾತು ಎಣ್ಣೆಗಿಂತಲೂ ನಯವಾಗಿದೆ.


ಇದೇಕೆ ಅನ್ನುತ್ತೀರಾ? ನಿನಗೂ ನಿನ್ನ ಯೌವನದ ಹೆಂಡತಿಗೂ ಆದ ಒಡಂಬಡಿಕೆಗೆ ಯೆಹೋವನೇ ಸಾಕ್ಷಿಯಾಗಿದ್ದಾನಲ್ಲಾ. ನಿನ್ನ ಸಹಚಾರಿಣಿಯೂ ನಿನ್ನ ಒಡಂಬಡಿಕೆಯ ಪತ್ನಿಯೂ ಆದ ಆಕೆಗೆ ದ್ರೋಹಮಾಡಿದ್ದೀ.


ಇಸ್ರಾಯೇಲಿನ ದೇವರಾದ ಯೆಹೋವನು ಇಂತೆನ್ನುತ್ತಾನೆ - ನಾನು ಪತ್ನೀತ್ಯಾಗವನ್ನೂ ಹೆಂಡತಿಗೆ ಅನ್ಯಾಯಮಾಡುವವನನ್ನೂ ಹಗೆಮಾಡುತ್ತೇನೆ; ಇದು ಸೇನಾಧೀಶ್ವರ ಯೆಹೋವನ ನುಡಿ; ಆದಕಾರಣ ನಿಮ್ಮ ಆತ್ಮವನ್ನು ಎಚ್ಚರಿಕೆಯಿಂದ ನೋಡಿಕೊಳ್ಳಿರಿ, ದ್ರೋಹಮಾಡಬೇಡಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು