Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 5:21 - ಕನ್ನಡ ಸತ್ಯವೇದವು J.V. (BSI)

21 ಮನುಷ್ಯನ ಮಾರ್ಗಗಳು ಯೆಹೋವನಿಗೆ ಕಾಣುತ್ತಲೇ ಇವೆ. ಆತನು ಮನುಷ್ಯನ ನಡತೆಯನ್ನೆಲ್ಲಾ ಪರೀಕ್ಷಿಸುವವನಾಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಮನುಷ್ಯನ ಮಾರ್ಗಗಳು ಯೆಹೋವನಿಗೆ ಕಾಣುತ್ತಲೇ ಇವೆ, ಆತನು ಮನುಷ್ಯನ ನಡತೆಯನ್ನೆಲ್ಲಾ ಪರೀಕ್ಷಿಸುವವನಾಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ನರನ ಮಾರ್ಗ ಸರ್ವೇಶ್ವರನ ಕಣ್ಣಿಗೆ ಮರೆಯಲ್ಲ; ಆತ ವೀಕ್ಷಿಸುತ್ತಾನೆ ಮನುಷ್ಯನ ನಡತೆಯನ್ನೆಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಮನುಷ್ಯನ ಮಾರ್ಗಗಳು ಯೆಹೋವನಿಗೆ ಕಾಣುತ್ತಲೇ ಇವೆ; ಯೆಹೋವನು ಅವುಗಳನ್ನು ಪರೀಕ್ಷಿಸುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ನಿನ್ನ ಮಾರ್ಗಗಳು ಯೆಹೋವ ದೇವರ ಮುಂದೆಯೇ ಇವೆ. ಅವರು ನಿನ್ನ ಮಾರ್ಗಗಳನ್ನೆಲ್ಲಾ ಪರೀಕ್ಷಿಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 5:21
21 ತಿಳಿವುಗಳ ಹೋಲಿಕೆ  

ನಾವು ಯಾವಾತನಿಗೆ ಲೆಕ್ಕ ಒಪ್ಪಿಸಬೇಕಾಗಿದೆಯೋ ಆತನ ದೃಷ್ಟಿಗೆ ಸಮಸ್ತವೂ ಮುಚ್ಚುಮರೆಯಿಲ್ಲದ್ದಾಗಿಯೂ ಬೈಲಾದದ್ದಾಗಿಯೂ ಅದೆ. ಆತನ ಸನ್ನಿಧಿಯಲ್ಲಿ ಅಗೋಚರವಾಗಿರುವ ಸೃಷ್ಟಿಯು ಒಂದೂ ಇಲ್ಲ.


ಯೆಹೋವನ ದೃಷ್ಟಿಯು ಎಲ್ಲೆಲ್ಲಿಯೂ ಇರುವದು; ಆತನು ಕೆಟ್ಟವರನ್ನೂ ಒಳ್ಳೆಯವರನ್ನೂ ನೋಡುತ್ತಲೇ ಇರುವನು.


ನೀನು ಆಲೋಚನೆಯಲ್ಲಿ ಶ್ರೇಷ್ಠನು, ಕಾರ್ಯದಲ್ಲಿ ಸಮರ್ಥನು; ನೀನು ಪ್ರತಿಯೊಬ್ಬನಿಗೂ ಅವನವನ ಕರ್ಮಕ್ಕೂ ನಡತೆಗೂ ತಕ್ಕ ಫಲವನ್ನು ಕೊಡಬೇಕೆಂದು ನರಜನ್ಮದವರ ಮಾರ್ಗಗಳನ್ನೆಲ್ಲಾ ಕಣ್ಣಾರೆ ನೋಡುತ್ತೀ;


ಆತನು ಮನುಷ್ಯನ ಮಾರ್ಗಗಳ ಮೇಲೆ ಕಣ್ಣಿಟ್ಟು ಅವನ ಹೆಜ್ಜೆಗಳನ್ನೆಲ್ಲಾ ನೋಡುವನು.


ಯೆಹೋವನು ತನ್ನ ಪರಿಶುದ್ಧ ಮಂದಿರದಲ್ಲಿದ್ದಾನೆ; ಆತನು ತನ್ನ ಸಿಂಹಾಸನವನ್ನು ಪರಲೋಕದಲ್ಲಿ ಸ್ಥಾಪಿಸಿದ್ದಾನೆ. ಆತನ ಕಣ್ಣುಗಳು ಮಾನವರನ್ನು ನೋಡುತ್ತವೆ; ಆತನು ಅವರನ್ನು ಬಹು ಸೂಕ್ಷ್ಮವಾಗಿ ಪರಿಶೋಧಿಸುತ್ತಾನೆ.


ಆತನೇ ನನ್ನ ನಡತೆಯನ್ನು ನೋಡಿ ನನ್ನ ಹೆಜ್ಜೆಗಳನ್ನೆಲ್ಲಾ ಎಣಿಸುತ್ತಿದ್ದಾನೆ ಎಂದು ಅಂದುಕೊಳ್ಳುತ್ತಿದ್ದೆನು.


ತಮ್ಮ ದುರ್ಮಾರ್ಗವೆಲ್ಲಾ ಯೆಹೋವನ ಜ್ಞಾಪಕದಲ್ಲಿರುತ್ತದೆ ಎಂದು ಅವರು ಮಂದಟ್ಟುಮಾಡಿಕೊಳ್ಳುವದಿಲ್ಲ; ಅವರ ದುಷ್ಕೃತ್ಯಗಳು ಈಗ ಅವರನ್ನು ಮುತ್ತಿಕೊಂಡಿವೆ, ನನ್ನ ಕಣ್ಣೆದುರಿಗಿವೆ.


ನನ್ನ ಕಣ್ಣಿಗೆ ಬೀಳದಂತೆ ಯಾವನಾದರೂ ಗುಪ್ತಸ್ಥಳಗಳಲ್ಲಿ ತನ್ನನ್ನು ಮರೆಮಾಡಿಕೊಂಡಾನೇ? ನಾನು ಭೂಮ್ಯಾಕಾಶಗಳಲ್ಲಿಯೂ ವ್ಯಾಪಿಸಿರುವವನಲ್ಲವೆ.


ಅವರ ನಡತೆಯನ್ನೆಲ್ಲಾ ದೃಷ್ಟಿಸುತ್ತೇನೆ, ಅದು ನನ್ನ ಮುಖಕ್ಕೆ ಮರೆಯಾಗಿಲ್ಲ; ಅವರ ಅಧರ್ಮವು ನನಗೆ ಗುಟ್ಟಲ್ಲ, ಪ್ರತ್ಯಕ್ಷದಲ್ಲೇ ಇದೆ.


ನಿನ್ನ ನೇಮಗಳನ್ನೂ ಕಟ್ಟಳೆಗಳನ್ನೂ ಅನುಸರಿಸಿದ್ದೇನೆ; ನನ್ನ ನಡತೆಯೆಲ್ಲಾ ನಿನಗೆ ಗೊತ್ತದೆ.


ನೀನು ನನ್ನ ಹೃದಯವನ್ನು ಪರೀಕ್ಷಿಸಿದರೂ ರಾತ್ರಿ ವೇಳೆ ವಿಚಾರಿಸಿದರೂ ನನ್ನನ್ನು ಪುಟಕ್ಕೆ ಹಾಕಿ ಶೋಧಿಸಿದರೂ ಯಾವ ದುರಾಲೋಚನೆಯಾದರೂ ನನ್ನಲ್ಲಿ ದೊರೆಯುವದಿಲ್ಲ; ನನ್ನ ಬಾಯಲ್ಲಿಯೂ ತಪ್ಪಿಲ್ಲ.


ಈಗ ನೀನು ನನ್ನ ಹೆಜ್ಜೆಗಳನ್ನು ಲೆಕ್ಕಿಸಿ ನನ್ನ ಪಾಪದ ಮೇಲೆ ಕಾವಲಾಗಿದ್ದೀಯಲ್ಲಾ!


ಯೆಹೋವನು ಭೂಲೋಕದ ಎಲ್ಲಾ ಕಡೆಗಳಲ್ಲಿಯೂ ದೃಷ್ಟಿಯನ್ನು ಪ್ರಸರಿಸುತ್ತಾ ತನ್ನ ಕಡೆಗೆ ಯಥಾರ್ಥಮನಸ್ಸುಳ್ಳವರ ರಕ್ಷಣೆಗಾಗಿ ತನ್ನ ಪ್ರತಾಪವನ್ನು ತೋರ್ಪಡಿಸುತ್ತಾನೆ. ನೀನು ಈ ಕಾರ್ಯದಲ್ಲಿ ಬುದ್ಧಿಹೀನನಾಗಿ ನಡೆದುಕೊಂಡಿದ್ದೀ; ಇಂದಿನಿಂದ ನಿನಗೆ ಯುದ್ಧಗಳು ಇದ್ದೇ ಇರುವವು ಎಂದು ಹೇಳಿದನು.


ಯೆಹೋವನಾದ ನಾನು ಪ್ರತಿಯೊಬ್ಬನಿಗೂ ಕರ್ಮಫಲವನ್ನು ಅವನವನ ನಡತೆಗೆ ತಕ್ಕ ಹಾಗೆ ಕೊಡಬೇಕೆಂದು ಹೃದಯವನ್ನು ಪರೀಕ್ಷಿಸುವವನೂ ಅಂತರಿಂದ್ರಿಯವನ್ನು ಶೋಧಿಸುವವನೂ ಆಗಿದ್ದೇನೆ.


ಅವಳ ಮಕ್ಕಳನ್ನು ಕೊಂದೇ ಕೊಲ್ಲುವೆನು; ಆಗ ನಾನು ಮನುಷ್ಯರ ಅಂತರಿಂದ್ರಿಯವನ್ನೂ ಹೃದಯವನ್ನೂ ಪರೀಕ್ಷಿಸುವವನಾಗಿದ್ದೇನೆಂಬದು ಎಲ್ಲಾ ಸಭೆಗಳಿಗೆ ಗೊತ್ತಾಗುವದು. ನಿಮ್ಮಲ್ಲಿ ಪ್ರತಿಯೊಬ್ಬನಿಗೆ ಅವನವನ ಕೃತ್ಯಗಳಿಗೆ ತಕ್ಕ ಹಾಗೆ ಪ್ರತಿಫಲ ಕೊಡುವೆನು.


ಥುವತೈರದಲ್ಲಿರುವ ಸಭೆಯ ದೂತನಿಗೆ ಬರೆ -


ನೀನು ನಡೆಯುವ ದಾರಿಯನ್ನು ಸಮಮಾಡು; ನಿನ್ನ ಮಾರ್ಗಗಳೆಲ್ಲಾ ದೃಢವಾಗಿರಲಿ.


ಅವಳ ನಡತೆಯು ಚಂಚಲವಾಗಿರುವದರಿಂದ ಅವಳು ಜೀವದ ಮಾರ್ಗವನ್ನು ವಿವೇಚಿಸಲಾರಳು, ಅದು ಅವಳಿಗೆ ಗೊತ್ತೇ ಇಲ್ಲ.


ಇವರು ಇಸ್ರಾಯೇಲಿನಲ್ಲಿ ದುರಾಚಾರವನ್ನು ನಡಿಸಿ ನೆರೆಯವರ ಹೆಂಡಿರಲ್ಲಿ ವ್ಯಭಿಚಾರಮಾಡಿ ನಾನು ಆಜ್ಞಾಪಿಸಿದ ಮಾತುಗಳನ್ನು ನನ್ನ ಹೆಸರಿನ ಮೇಲೆ ಸುಳ್ಳಾಗಿ ಸಾರಿದರಲ್ಲಾ; ನಾನೇ ಬಲ್ಲೆ, ನಾನೇ ಸಾಕ್ಷಿ ಎಂದು ಯೆಹೋವನು ಅನ್ನುತ್ತಾನೆ ಎಂಬದೇ.


ದೇವರು ಅವರಿಗೆ ಅಭಯವನ್ನು ಕೊಟ್ಟದರಿಂದ ಅವರು ಅದನ್ನು ಆಧಾರಮಾಡಿಕೊಳ್ಳುವರು; ಆತನ ಕಟಾಕ್ಷವು ಅವರ ಮಾರ್ಗಗಳ ಮೇಲಿರುವದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು