Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 5:3 - ಕನ್ನಡ ಸತ್ಯವೇದವು J.V. (BSI)

3 ಜಾರಸ್ತ್ರೀಯ ತುಟಿಗಳಲ್ಲಾದರೋ ಜೇನುಗರೆಯುವದು, ಅವಳ ಮಾತು ಎಣ್ಣೆಗಿಂತಲೂ ನಯವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ವೇಶ್ಯಸ್ತ್ರೀಯ ತುಟಿಗಳಲ್ಲಾದರೋ ಜೇನುಗರೆಯುವುದು, ಅವಳ ಮಾತು ಎಣ್ಣೆಗಿಂತಲೂ ನಯವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ವ್ಯಭಿಚಾರಿಣಿಯ ತುಟಿಗಳು ಜೇನುಗರೆಯುತ್ತವೆ; ಎಣ್ಣೆಗಿಂತ ಮೃದು ಅವಳ ವಾಣಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಮತ್ತೊಬ್ಬನ ಹೆಂಡತಿಯ ಮಾತುಗಳು ಜೇನಿನಂತೆ ಸಿಹಿಯಾಗಿವೆ; ಎಣ್ಣೆಗಿಂತ ನಯವಾಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಏಕೆಂದರೆ ಜಾರಿಣಿಯ ತುಟಿಗಳು ಜೇನುಗರೆಯುವುದು; ಅವಳ ಮಾತು ಎಣ್ಣೆಗಿಂತಲೂ ಮೃದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 5:3
10 ತಿಳಿವುಗಳ ಹೋಲಿಕೆ  

ವಿವೇಕವು ನಿನ್ನನ್ನು ಜಾರಳಿಂದ ಎಂದರೆ ಸವಿಮಾತನಾಡುವ ಪರಸ್ತ್ರೀಯಿಂದ, ತಪ್ಪಿಸುವದು.


ಅವನನ್ನು ತನ್ನ ಸವಿಮಾತುಗಳಿಂದ ಬಲಾತ್ಕರಿಸಿ ಬಹಳವಾಗಿ ಪ್ರೇರಿಸಿ ಸಮ್ಮತಿಪಡಿಸುತ್ತಾಳೆ.


ಅವು ಜಾರಳಿಂದ, ಸವಿಮಾತನಾಡುವ ಪರಸ್ತ್ರೀಯಿಂದ, ನಿನ್ನನ್ನು ರಕ್ಷಿಸುವವು.


ಅದು ಕೆಟ್ಟ ಹೆಂಗಸಿನಿಂದಲೂ ಪರಸ್ತ್ರೀಯ ನಾಲಿಗೆಯ ಸಿಹಿನುಡಿಯಿಂದಲೂ ನಿನ್ನನ್ನು ರಕ್ಷಿಸತಕ್ಕದ್ದಾಗಿದೆ.


ಅವನ ಬಾಯಿ ಬೆಣ್ಣೆಯಂತೆ ನುಣುಪು; ಹೃದಯವೋ ಕಲಹಮಯವೇ. ಅವನ ನುಡಿಗಳು ಎಣ್ಣೆಗಿಂತ ನಯವಾಗಿದ್ದರೂ ಬಿಚ್ಚುಕತ್ತಿಗಳೇ ಸರಿ.


ಮಗನೇ, ಏಕೆ ಪರಸ್ತ್ರೀಯಲ್ಲಿ ಭ್ರಮೆಗೊಳ್ಳುವಿ, ಅನ್ಯಳ ಎದೆಯನ್ನು ತಬ್ಬಿಕೊಳ್ಳುವದೇಕೆ?


ಜಾರಸ್ತ್ರೀಯ ಬಾಯಿ ಆಳವಾದ ಹಳ್ಳ; ಯೆಹೋವನಿಗೆ ಸಿಟ್ಟನ್ನೆಬ್ಬಿಸಿದವನು ಅದರಲ್ಲಿ ಬೀಳುವನು.


ವಧುವೇ, ನಿನ್ನ ತುಟಿಗಳು ಜೇನುಗರೆಯುತ್ತವೆ; ಜೇನೂ ಹಾಲೂ ನಿನ್ನ ನಾಲಿಗೆಯೊಳಗಿವೆ; ನಿನ್ನ ವಸ್ತ್ರಗಳ ಸುವಾಸನೆಯೋ ಲೆಬನೋನಿನ ಪರಿಮಳವೇ.


ಆಗ ಮರಣಕ್ಕಿಂತ ಹೆಚ್ಚು ವಿಷವೊಂದು ಕಂಡುಬಂತು, ಯಾವದಂದರೆ, ಕೆಟ್ಟ ಹೆಂಗಸೇ. ಅವಳು ಬೋನು, ಅವಳ ಹೃದಯ ಬಲೆ, ಅವಳ ಕೈ ಪಾಶ; ದೇವರು ಒಲಿದವನು ಇವಳಿಂದ ತಪ್ಪಿಸಿಕೊಳ್ಳುವನು; ಪಾಪಿಯೋ ಅವಳ ಕೈಗೆ ಸಿಕ್ಕಿಬೀಳುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು