Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 5:4 - ಕನ್ನಡ ಸತ್ಯವೇದವು J.V. (BSI)

4 ಅವಳು ಕಡೆಯಲ್ಲಿ ವಿಷದಂತೆ ಕಹಿಯೂ ಇಬ್ಬಾಯಿಕತ್ತಿಯಂತೆ ತೀಕ್ಷ್ಣವೂ ಆಗುವಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಅವಳು ಕಡೆಯಲ್ಲಿ ವಿಷದಂತೆ ಕಹಿಯೂ, ಇಬ್ಬಾಯಿಕತ್ತಿಯಂತೆ ತೀಕ್ಷ್ಣವೂ ಆಗುವಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಕಡೆಗೆ ಅವಳು ಕಹಿ ಮಾಚಿಪತ್ರೆಯಂತೆ, ಹರಿತವಾದ ಇಬ್ಬಾಯಿ ಕತ್ತಿಯಂತೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಆದರೆ ಕೊನೆಗೆ ಆಕೆಯು ವಿಷದಂತೆ ಕಹಿಯಾಗುವಳು; ಖಡ್ಗದಂತೆ ತೀಕ್ಷ್ಣವಾಗುವಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಆದರೆ ಅಂತ್ಯದಲ್ಲಿ ಅವಳು ಮಾಚಿಪತ್ರೆಯಂತೆ ಕಹಿಯೂ, ಇಬ್ಬಾಯಿ ಖಡ್ಗದಂತೆ ಹರಿತವೂ ಆಗಿರುವಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 5:4
11 ತಿಳಿವುಗಳ ಹೋಲಿಕೆ  

ಆಗ ಮರಣಕ್ಕಿಂತ ಹೆಚ್ಚು ವಿಷವೊಂದು ಕಂಡುಬಂತು, ಯಾವದಂದರೆ, ಕೆಟ್ಟ ಹೆಂಗಸೇ. ಅವಳು ಬೋನು, ಅವಳ ಹೃದಯ ಬಲೆ, ಅವಳ ಕೈ ಪಾಶ; ದೇವರು ಒಲಿದವನು ಇವಳಿಂದ ತಪ್ಪಿಸಿಕೊಳ್ಳುವನು; ಪಾಪಿಯೋ ಅವಳ ಕೈಗೆ ಸಿಕ್ಕಿಬೀಳುವನು.


ಸಿಂಹಗಳ ಮಧ್ಯದಲ್ಲಿ ಸಿಕ್ಕಿದ್ದೇನೆ; ಬೆಂಕಿಕಾರುವ ಮನುಷ್ಯರ ನಡುವೆ ಬಿದ್ದಿದ್ದೇನೆ. ಅವರ ಹಲ್ಲುಗಳು ಶಸ್ತ್ರಬಾಣಗಳು; ನಾಲಿಗೆಗಳು ಹದವಾದ ಕತ್ತಿಗಳೇ.


ಅವನ ಬಾಯಿ ಬೆಣ್ಣೆಯಂತೆ ನುಣುಪು; ಹೃದಯವೋ ಕಲಹಮಯವೇ. ಅವನ ನುಡಿಗಳು ಎಣ್ಣೆಗಿಂತ ನಯವಾಗಿದ್ದರೂ ಬಿಚ್ಚುಕತ್ತಿಗಳೇ ಸರಿ.


ಯಾಕಂದರೆ ದೇವರ ವಾಕ್ಯವು ಸಜೀವವಾದದ್ದು, ಕಾರ್ಯಸಾಧಕವಾದದ್ದು, ಯಾವ ಇಬ್ಬಾಯಿಕತ್ತಿಗಿಂತಲೂ ಹದವಾದದ್ದು, ಪ್ರಾಣಆತ್ಮಗಳನ್ನೂ ಕೀಲುಮಜ್ಜೆಗಳನ್ನೂ ವಿಭಾಗಿಸುವಷ್ಟು ಮಟ್ಟಿಗೂ ತೂರಿಹೋಗುವಂಥದು, ಹೃದಯದ ಆಲೋಚನೆಗಳನ್ನೂ ಉದ್ದೇಶಗಳನ್ನೂ ವಿವೇಚಿಸುವಂಥದು ಆಗಿದೆ.


ಆ ಮನೆಯು ಪ್ರೇತನಿವಾಸವೆಂದೂ ಅವಳ ಅತಿಥಿಗಳು ಅಗಾಧಪಾತಾಳದಲ್ಲಿ ಬಿದ್ದಿರುವರೆಂದೂ ಅವನಿಗೆ ತಿಳಿಯದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು