Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 5:5 - ಕನ್ನಡ ಸತ್ಯವೇದವು J.V. (BSI)

5 ಅವಳು ಮರಣದ ಕಡೆಗೆ ನಡೆಯುತ್ತಾ ಇಳಿದು ಹೋಗುವಳು. ಅವಳ ಹೆಜ್ಜೆಗಳು ಪಾತಾಳದ ದಾರಿಯನ್ನು ಹಿಡಿಯುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಅವಳು ಮರಣದ ಕಡೆಗೆ ನಡೆಯುತ್ತಾ ಇಳಿದು ಹೋಗುವಳು, ಅವಳ ಹೆಜ್ಜೆಗಳು ಪಾತಾಳದ ದಾರಿಯನ್ನು ಹಿಡಿಯುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಅವಳ ಕಾಲುಗಳು ಮರಣದತ್ತ ಇಳಿಯುತ್ತವೆ, ಹೆಜ್ಜೆಗಳು ಪಾತಾಳದತ್ತ ಕೊಂಡೊಯ್ಯುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಆಕೆಯ ಹೆಜ್ಜೆಗಳು ಮರಣದ ಕಡೆಗೆ ಹೋಗುತ್ತವೆ. ಆಕೆ ನಿನ್ನನ್ನು ನೇರವಾಗಿ ಪಾತಾಳಕ್ಕೆ ನಡೆಸುತ್ತಾಳೆ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಅವಳ ಪಾದಗಳು ಮರಣದ ಕಡೆಗೆ ಇಳಿದುಹೋಗುತ್ತವೆ; ಅವಳ ಹೆಜ್ಜೆಗಳು ನೇರವಾಗಿ ಪಾತಾಳಕ್ಕೆ ನಡೆಸುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 5:5
6 ತಿಳಿವುಗಳ ಹೋಲಿಕೆ  

ಅವಳ ಮನೆಯು ಪಾತಾಳದ ದಾರಿ, ಅದು ಮೃತ್ಯುವಿನ ಅಂತಃಪುರಕ್ಕೆ ಇಳಿದು ಹೋಗುತ್ತದೆ.


ಅದರ ಮೇಲೆ ಕೂತಿದ್ದವನ ಹೆಸರು ಮೃತ್ಯುವು; ಅವನ ಹಿಂದೆ ಪಾತಾಳವೆಂಬವನು ಬಂದನು. ಅವರಿಗೆ ಭೂವಿುಯ ಕಾಲುಭಾಗದಲ್ಲಿ ಕತ್ತಿಯಿಂದಲೂ ಬರದಿಂದಲೂ ಅಂಟುರೋಗದಿಂದಲೂ ಕಾಡುಮೃಗಗಳಿಂದಲೂ ಕೊಲ್ಲುವದಕ್ಕೆ ಅಧಿಕಾರವು ಕೊಡಲ್ಪಟ್ಟಿತು.


ಕಂದಾ, ತಂದೆಯ ಆಜ್ಞೆಯನ್ನು ಕೈಕೊಳ್ಳು, ತಾಯಿಯ ಉಪದೇಶವನ್ನು ಬಿಡಬೇಡ,


ಕಂದಾ, ನನ್ನ ಮಾತುಗಳನ್ನು ಅನುಸರಿಸು, ನನ್ನ ಆಜ್ಞೆಗಳನ್ನು ಮನಸ್ಸಿನಲ್ಲಿಟ್ಟುಕೋ.


ಆಗ ಮರಣಕ್ಕಿಂತ ಹೆಚ್ಚು ವಿಷವೊಂದು ಕಂಡುಬಂತು, ಯಾವದಂದರೆ, ಕೆಟ್ಟ ಹೆಂಗಸೇ. ಅವಳು ಬೋನು, ಅವಳ ಹೃದಯ ಬಲೆ, ಅವಳ ಕೈ ಪಾಶ; ದೇವರು ಒಲಿದವನು ಇವಳಿಂದ ತಪ್ಪಿಸಿಕೊಳ್ಳುವನು; ಪಾಪಿಯೋ ಅವಳ ಕೈಗೆ ಸಿಕ್ಕಿಬೀಳುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು