Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 5:6 - ಕನ್ನಡ ಸತ್ಯವೇದವು J.V. (BSI)

6 ಅವಳ ನಡತೆಯು ಚಂಚಲವಾಗಿರುವದರಿಂದ ಅವಳು ಜೀವದ ಮಾರ್ಗವನ್ನು ವಿವೇಚಿಸಲಾರಳು, ಅದು ಅವಳಿಗೆ ಗೊತ್ತೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಅವಳ ನಡತೆಯು ಚಂಚಲವಾಗಿರುವುದರಿಂದ ಅವಳು ಜೀವದ ಮಾರ್ಗವನ್ನು ವಿವೇಚಿಸಲಾರಳು, ಅದು ಅವಳಿಗೆ ತಿಳಿದೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಜೀವಮಾರ್ಗದ ವಿವೇಚನೆ ಅವಳಿಗಿಲ್ಲ. ಅದರ ಅರಿವೂ ಅವಳಿಗಿರುವುದಿಲ್ಲ. ಅವಳ ನಡತೆಯು ಅಷ್ಟು ಚಂಚಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಆಕೆಯನ್ನು ಹಿಂಬಾಲಿಸಬೇಡ! ಆಕೆ ನೀತಿಮಾರ್ಗವನ್ನು ಬಿಟ್ಟುಹೋಗಿದ್ದಾಳೆ; ಅದು ಆಕೆಗೆ ಗೊತ್ತೇ ಇಲ್ಲ. ಎಚ್ಚರಿಕೆಯಿಂದಿರು! ಜೀವ ಮಾರ್ಗವನ್ನು ಹಿಂಬಾಲಿಸು!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಜೀವಮಾರ್ಗದ ವಿಚಾರ ಅವಳಿಗಿಲ್ಲ; ಆದ್ದರಿಂದ ಅವಳ ಮಾರ್ಗಗಳು ಚಂಚಲವಾಗಿವೆ, ಅದರ ಅರಿವೂ ಅವಳಿಗಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 5:6
12 ತಿಳಿವುಗಳ ಹೋಲಿಕೆ  

ನೀನು ನಡೆಯುವ ದಾರಿಯನ್ನು ಸಮಮಾಡು; ನಿನ್ನ ಮಾರ್ಗಗಳೆಲ್ಲಾ ದೃಢವಾಗಿರಲಿ.


ನೀನು ನನಗೆ ಜೀವಮಾರ್ಗವನ್ನು ತಿಳಿಯಪಡಿಸುವಿ; ನಿನ್ನ ಸಮ್ಮುಖದಲ್ಲಿ ಪರಿಪೂರ್ಣ ಸಂತೋಷವಿದೆ; ನಿನ್ನ ಬಲಗೈಯಲ್ಲಿ ಶಾಶ್ವತಭಾಗ್ಯವಿದೆ.


ಜಾರಳ ನಡತೆಯು ಹೀಗೆಯೇ ಸರಿ; ಅವಳು ತಿಂದು ಬಾಯಿ ಒರಿಸಿಕೊಂಡು ನಾನು ತಪ್ಪುಮಾಡಲಿಲ್ಲವಲ್ಲವೆ, ಅಂದುಕೊಳ್ಳುವಳು.


ಮನುಷ್ಯನ ಮಾರ್ಗಗಳು ಯೆಹೋವನಿಗೆ ಕಾಣುತ್ತಲೇ ಇವೆ. ಆತನು ಮನುಷ್ಯನ ನಡತೆಯನ್ನೆಲ್ಲಾ ಪರೀಕ್ಷಿಸುವವನಾಗಿದ್ದಾನೆ.


ನನ್ನ ನಡತೆಯನ್ನು ಶೋಧಿಸಿದೆನು. ನಿನ್ನ ಕಟ್ಟಳೆಗಳ ಕಡೆಗೆ ತಿರುಗಿಕೊಂಡಿದ್ದೇನೆ.


ಧರ್ಮನಿರತನಿಗೆ ಜೀವ, ಅಧರ್ಮಾಸಕ್ತನಿಗೆ ಮರಣ.


ಇವರು ಜಾರತ್ವದಿಂದ ತುಂಬಿದ ಮತ್ತು ಪಾಪವನ್ನು ಬಿಡಲೊಲ್ಲದ ಕಣ್ಣುಳ್ಳವರೂ ಚಪಲಚಿತ್ತರನ್ನು ಮರುಳುಗೊಳಿಸುವವರೂ ಲೋಭದಲ್ಲಿ ತೇರ್ಗಡೆಹೊಂದಿದ ಮನಸ್ಸುಳ್ಳವರೂ ಶಾಪಕ್ಕೆ ಪಾತ್ರರೂ ಆಗಿದ್ದಾರೆ.


ಅವಳ ಬಳಿಗೆ ಹೋಗುವವರು ಯಾರೂ ಹಿಂದಿರುಗುವದಿಲ್ಲ, ಅವರಿಗೆ ಜೀವದ ಮಾರ್ಗವು ದೊರೆಯುವದೇ ಇಲ್ಲ.


ಅಜ್ಞಾನವೆಂಬವಳಾದರೋ ಕೂಗಾಟದವಳು, ಮೂಢಳು, ಏನೂ ತಿಳಿಯದವಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು