Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 6:22 - ಕನ್ನಡ ಸತ್ಯವೇದವು J.V. (BSI)

22 ನೀನು ನಡೆಯುವಾಗ ಆ ಉಪದೇಶವು ನಿನ್ನನ್ನು ನಡಿಸುವದು, ಮಲಗಿಕೊಂಡಾಗ ಕಾಯುವದು, ಎಚ್ಚರಗೊಂಡಾಗ ನಿನ್ನೊಂದಿಗೆ ಮಾತಾಡುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ನೀನು ನಡೆಯುವಾಗ ಆ ಉಪದೇಶವು ನಿನ್ನನ್ನು ಮುನ್ನಡೆಸುವುದು, ಮಲಗಿಕೊಂಡಾಗ ಅದು ನಿನ್ನನ್ನು ಕಾಯುವುದು, ಎಚ್ಚರಗೊಂಡಾಗ ನಿನ್ನೊಂದಿಗೆ ಮಾತನಾಡುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ನಡೆಯುವಾಗ ಅವು ನಿನಗೆ ಮುಂದಾಳಾಗಿರುವುವು, ಮಲಗುವಾಗ ಅವು ನಿನ್ನನ್ನು ಕಾಯುವುವು, ಎಚ್ಚರಗೊಂಡಾಗ ಅವು ನಿನ್ನೊಡನೆ ಸಂವಾದಿಸುವುವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ನೀನು ಹೋಗುವಲ್ಲೆಲ್ಲಾ ಅವರ ಉಪದೇಶಗಳು ನಿನ್ನನ್ನು ನಡೆಸುತ್ತವೆ. ನೀನು ಮಲಗಿರುವಾಗಲೂ ಅವು ನಿನ್ನನ್ನು ಕಾಯುತ್ತವೆ. ನೀನು ಎಚ್ಚರಗೊಂಡಾಗ ಅವು ನಿನ್ನೊಡನೆ ಮಾತಾಡಿ ನಿನಗೆ ಮಾರ್ಗದರ್ಶನ ನೀಡುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ನೀನು ನಡೆಯುವಾಗ ಅವು ನಿನಗೆ ಮಾರ್ಗದರ್ಶಿಯಾಗಿರುತ್ತವೆ. ನೀನು ಮಲಗುವಾಗ ಅವು ನಿನ್ನನ್ನು ಕಾಯುತ್ತವೆ. ನೀನು ಎಚ್ಚರಗೊಂಡಾಗ ಅವು ನಿನ್ನೊಂದಿಗೆ ಮಾತಾಡುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 6:22
12 ತಿಳಿವುಗಳ ಹೋಲಿಕೆ  

ಬುದ್ಧಿಯು ನಿನಗೆ ಕಾವಲಾಗಿರುವದು, ವಿವೇಕವು ನಿನ್ನನ್ನು ಕಾಪಾಡುವದು;


ನಿನಗೆ ವಿರೋಧವಾಗಿ ಪಾಪಮಾಡದಂತೆ ನಿನ್ನ ನುಡಿಗಳನ್ನು ನನ್ನ ಹೃದಯದಲ್ಲಿಟ್ಟುಕೊಂಡಿದ್ದೇನೆ.


ಇರುಳಿನ ಒಂದೊಂದು ಜಾವವನ್ನು ಮುಂಗೊಂಡು ನಿನ್ನ ನುಡಿಯನ್ನು ಧ್ಯಾನಿಸುತ್ತೇನೆ.


ಯೌವನಸ್ಥನು ತನ್ನ ನಡತೆಯನ್ನು ಶುದ್ಧಪಡಿಸಿಕೊಳ್ಳುವದು ಯಾವದರಿಂದ? ನಿನ್ನ ವಾಕ್ಯವನ್ನು ಗಮನಿಸಿ ನಡೆಯುವದರಿಂದಲೇ.


ನನ್ನ ಪ್ರವಾಸದ ಮನೆಯಲ್ಲಿ ನಿನ್ನ ನಿಬಂಧನೆಗಳು ನನಗೆ ಗಾಯನವಾದವು.


ನಿನ್ನ ಕಟ್ಟಳೆಗಳು ನನ್ನ ಆನಂದವು, ಅವೇ ನನ್ನ ಮಂತ್ರಾಲೋಚಕರು.


ನಿನ್ನ ಸತ್ಯಪ್ರಸನ್ನತೆಗಳನ್ನು [ದೂತರನ್ನೋ ಎಂಬಂತೆ] ಕಳುಹಿಸು; ಅವೇ ನಿನ್ನ ಪರಿಶುದ್ಧಪರ್ವತಕ್ಕೆ ನನ್ನನ್ನು ಕರೆದುಕೊಂಡು ಹೋಗಿ ನಿನ್ನ ನಿವಾಸಕ್ಕೆ ಸೇರಿಸಲಿ.


ನಿನ್ನ ಧರ್ಮಶಾಸ್ತ್ರವು ನನಗೆ ಎಷ್ಟೋ ಪ್ರಿಯವಾಗಿದೆ; ದಿನವೆಲ್ಲಾ ಅದೇ ನನ್ನ ಧ್ಯಾನ.


ನಾನಂತೂ ಲೋಕವ್ಯವಹಾರಗಳಲ್ಲಿ ಬಲಾತ್ಕಾರಿಗಳಂತೆ ನಡೆಯದೆ ನಿನ್ನ ಮಾತನ್ನೇ ಅನುಸರಿಸಿದ್ದೇನೆ.


ನನ್ನ ಸುತ್ತಲು ಸನ್ನದ್ಧರಾಗಿ ನಿಂತಿರುವ ಸಾವಿರಾರು ವೈರಿಗಳಿಗಾದರೂ ನಾನು ಹೆದರೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು