Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 6:25 - ಕನ್ನಡ ಸತ್ಯವೇದವು J.V. (BSI)

25 ನಿನ್ನ ಹೃದಯವು ಅವಳ ಬೆಡಗನ್ನು ಮೋಹಿಸದಿರಲಿ, ಅವಳು ತನ್ನ ಕಣ್ಣು ರೆಪ್ಪೆಗಳಿಂದ ನಿನ್ನನ್ನು ವಶಮಾಡಿಕೊಂಡಾಳು, ನೋಡಿಕೋ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ನಿನ್ನ ಹೃದಯವು ಅವಳ ಸೌಂದರ್ಯವನ್ನು ಮೋಹಿಸದಿರಲಿ, ಅವಳು ತನ್ನ ಕಣ್ಣುರೆಪ್ಪೆಗಳಿಂದ ನಿನ್ನನ್ನು ವಶಮಾಡಿಕೊಂಡಾಳು, ನೋಡಿಕೋ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

25 ನಿನ್ನ ಹೃದಯ ಅವಳ ಬೆಡಗನ್ನು ಮೋಹಿಸದಿರಲಿ; ಕಣ್ಣು ಮಿಟುಕಿಸಿ ಅವಳು ನಿನ್ನನ್ನು ವಶಮಾಡಿಕೊಳ್ಳದಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 ಆಕೆಯ ಸೌಂದರ್ಯವನ್ನು ಕಂಡು ಹೃದಯದಲ್ಲಿ ಆಸೆಪಡಬೇಡ. ಆಕೆಯ ಕಣ್ಣುಗಳು ನಿನ್ನನ್ನು ವಶಮಾಡಿಕೊಳ್ಳಲು ಬಿಡಬೇಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ನಿನ್ನ ಹೃದಯ ಅವಳ ಸೌಂದರ್ಯವನ್ನು ಮೋಹಿಸದಿರಲಿ. ಅವಳ ಕಣ್ಣುರೆಪ್ಪೆಗಳಿಂದ ಅವಳು ನಿನ್ನನ್ನು ವಶಮಾಡಿಕೊಳ್ಳದೆ ಇರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 6:25
10 ತಿಳಿವುಗಳ ಹೋಲಿಕೆ  

ಆದರೆ ನಾನು ನಿಮಗೆ ಹೇಳುವದೇನಂದರೆ - ಪರಸ್ತ್ರೀಯನ್ನು ನೋಡಿ ಮೋಹಿಸುವ ಪ್ರತಿ ಮನುಷ್ಯನು ಆಗಲೇ ತನ್ನ ಮನಸ್ಸಿನಲ್ಲಿ ಆಕೆಯ ಕೂಡ ವ್ಯಭಿಚಾರ ಮಾಡಿದವನಾದನು.


ಯೇಹುವು ಇಜ್ರೇಲಿಗೆ ಬಂದನು. ಈಜೆಬೆಲಳು ಅದನ್ನು ಕೇಳಿ ತಲೆಯನ್ನು ಆಭರಣಗಳಿಂದ ಅಲಂಕರಿಸಿಕೊಂಡು ಕಣ್ಣಿಗೆ ಕಾಡಿಗೆಹಚ್ಚಿಕೊಂಡು ಕಿಟಕಿಯಿಂದ ನೋಡುತ್ತಾ ನಿಂತಳು.


ಇದಲ್ಲದೆ ಯೆಹೋವನು ಹೀಗನ್ನುತ್ತಾನೆ - ಚೀಯೋನಿನ ಹೆಂಗಸರು ವಯ್ಯಾರವುಳ್ಳವರಾಗಿ ಕತ್ತು ತೂಗುತ್ತಾ ಕಡೆಗಣ್ಣುಹಾಕುತ್ತಾ ಕುಲುಕಿ ಹೆಜ್ಜೆಯಿಡುತ್ತಾ ಕಾಲುಗೆಜ್ಜೆ ಜಣಜಣಿಸುತ್ತಾ ನಡೆಯುವವರಾಗಿರುವದರಿಂದ


ಪ್ರಿಯಳೇ, ವಧುವೇ, ನನ್ನ ಹೃದಯವನ್ನು ಅಪಹರಿಸಿದ್ದೀ, ನಿನ್ನ ಒಂದು ಕಡೆಗಣ್ಣಿನಿಂದ, ನಿನ್ನ ಕಂಠಹಾರದ ಒಂದು ಸರದಿಂದ, ನನ್ನ ಹೃದಯವನ್ನು ವಶಮಾಡಿಕೊಂಡಿದ್ದೀ.


ಎಲೈ, [ನಗರಿಯೇ,] ನೀನು ಸೂರೆಯಾಗುವಾಗ ಏನು ಮಾಡುವಿ? ನೀನು ರಕ್ತಾಂಬರವನ್ನು ಹೊದ್ದು ಸುವರ್ಣಾಭರಣಗಳಿಂದ ನಿನ್ನನ್ನು ಅಲಂಕರಿಸಿಕೊಂಡು ನೀಲಾಂಜನದಿಂದ ವಿಶಾಲಾಕ್ಷಿಯಾದರೇನು, ನಿನ್ನನ್ನು ಸೊಗಸು ಮಾಡಿಕೊಳ್ಳುವದು ವ್ಯರ್ಥ; ನಿನ್ನ ವಿುಂಡರು ನಿನ್ನನ್ನು ಧಿಕ್ಕರಿಸಿ ನಿನ್ನ ಪ್ರಾಣವನ್ನೇ ಹುಡುಕುತ್ತಾರೆ.


ಇಷ್ಟಲ್ಲದೆ ದೂತನನ್ನು ಕಳುಹಿಸಿ ಪುರುಷರನ್ನು ದೂರದಿಂದ ಕರೆಯಿಸಿಕೊಂಡರು; ಇಗೋ, ಅವರು ಬಂದರು; [ಎಲೈ ಹೆಂಗಸೇ,] ಅವರಿಗಾಗಿ ನೀನು ಸ್ನಾನಮಾಡಿ ಕಣ್ಣಿಗೆ ಕಾಡಿಗೆಹಚ್ಚಿ


ಮತ್ತೊಬ್ಬನ ಹೆಂಡತಿಯನ್ನು ಅಪೇಕ್ಷಿಸಬಾರದು; ಮತ್ತೊಬ್ಬನ ಹೊಲ ಮನೆ ಗಂಡಾಳು ಹೆಣ್ಣಾಳು ಎತ್ತು ಕತ್ತೆ ಮುಂತಾದ ಯಾವದನ್ನೂ ಆಶಿಸಬಾರದು.


ನನ್ನ ಕಣ್ಣುಗಳೊಡನೆ ನಿಬಂಧನೆಯನ್ನು ಮಾಡಿಕೊಂಡಿದ್ದೇನೆ. ಯುವತಿಯ ಮೇಲೆ ಹೇಗೆ ಕಣ್ಣಿಟ್ಟೇನು?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು