Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 6:26 - ಕನ್ನಡ ಸತ್ಯವೇದವು J.V. (BSI)

26 ವೇಶ್ಯೆಯಿಂದ ಯಾವನಿಗಾದರೂ ಒಂದು ರೊಟ್ಟಿ ಮಾತ್ರ ಗತಿಯಾಗುವದು, ಪರಸ್ತ್ರೀಯೋ ಅಮೂಲ್ಯವಾದ ಜೀವವನ್ನು ಬೇಟೆಯಾಡುವಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ವೇಶ್ಯೆಯಿಂದ ಯಾವನಿಗಾದರೂ ಒಂದು ರೊಟ್ಟಿ ಮಾತ್ರ ಗತಿಯಾಗುವುದು, ಪರಸ್ತ್ರೀಯೋ ಅಮೂಲ್ಯವಾದ ಜೀವವನ್ನು ಬೇಟೆಯಾಡುವಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

26 ವೇಶ್ಯೆಯನ್ನು ಕೊಂಡುಕೊಳ್ಳಬಹುದು ತುಂಡುರೊಟ್ಟಿಗೆ, ವ್ಯಭಿಚಾರಿಣಿಯೇ ಬೇಟೆಮಾಡುವಳು ನಿನ್ನ ಸಿರಿಪ್ರಾಣಕ್ಕೆ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26 ಸೂಳೆಯು ಒಂದು ರೊಟ್ಟಿಗೇ ಬರಬಹುದು; ಆದರೆ ಬೇರೊಬ್ಬನ ಹೆಂಡತಿಗೆ ನಿನ್ನ ಜೀವವನ್ನೇ ಕಳೆದುಕೊಳ್ಳಬೇಕಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

26 ಏಕೆಂದರೆ ವೇಶ್ಯೆಯನ್ನು ಊಟದಿಂದ ಕೊಂಡುಕೊಳ್ಳಬಹುದು, ಆದರೆ ವ್ಯಭಿಚಾರಿಣಿ ಅಮೂಲ್ಯ ಜೀವವನ್ನೇ ಬೇಟೆಯಾಡುವಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 6:26
14 ತಿಳಿವುಗಳ ಹೋಲಿಕೆ  

ಆದರೆ ಸೂಳೆಯರನ್ನು ಕಟ್ಟಿಕೊಂಡು ನಿನ್ನ ಬದುಕನ್ನು ನುಂಗಿಬಿಟ್ಟ ಈ ನಿನ್ನ ಮಗನು ಬಂದಾಗ ಕೊಬ್ಬಿಸಿದ ಕರುವನ್ನು ಅವನಿಗೆ ಕೊಯ್ಸಿದಿ ಎಂದು ಉತ್ತರಕೊಟ್ಟನು.


ಜ್ಞಾನಾಸಕ್ತನು ತಂದೆಯನ್ನು ಹರ್ಷಗೊಳಿಸುವನು; ವೇಶ್ಯಾಸಂಗಿಯು ಆಸ್ತಿಯನ್ನು ಹಾಳುಮಾಡಿಕೊಳ್ಳುವನು.


ನಿನ್ನ ಮನೆಯಲ್ಲಿ ಉಳಿದವರು ಬಂದು ಅವನ ಮುಂದೆ ಅಡ್ಡಬಿದ್ದು - ನಮಗೆ ಒಂದು ದುಡ್ಡನ್ನೂ ರೊಟ್ಟಿಯ ಚೂರನ್ನೂ ಕೊಡು; ಒಂದು ತುತ್ತು ಅನ್ನಕ್ಕೆ ಮಾರ್ಗವಾಗುವ ಹಾಗೆ ದೇವಸ್ಥಾನದ ಸೇವೆಯಲ್ಲಿ ಯಾವದಕ್ಕಾದರೂ ನಮ್ಮನ್ನು ಸೇರಿಸಿಕೋ ಎಂದು ಅವನನ್ನು ಬೇಡಿಕೊಳ್ಳುವರು ಎಂಬದೇ ಅಂದನು.


ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ಜನರ ಪ್ರಾಣಗಳನ್ನು ಬೇಟೆಯಾಡಬೇಕೆಂದು ಎಲ್ಲರ ಮೊಣಕೈಗಳಿಗೆ ತಾಯಿತಿಗಳನ್ನು ಕಟ್ಟಿ ಉದ್ದವಾದವರಿಗೂ ಗಿಡ್ಡಾದವರಿಗೂ ತಕ್ಕತಕ್ಕ ಮುಸುಕುಗಳನ್ನು ಸಿದ್ಧಮಾಡಿಕೊಂಡಿರುವ ಸ್ತ್ರೀಯರ ಗತಿಯನ್ನು ಏನೆಂದು ಹೇಳಲಿ! ಸ್ತ್ರೀಯರೇ, ನೀವು ನನ್ನ ಜನರ ಪ್ರಾಣಗಳನ್ನು ಬೇಟೆಯಾಡಿ ಸ್ವಂತ ಪ್ರಾಣಗಳನ್ನು ಉಳಿಸಿಕೊಳ್ಳುವಿರೋ?


ಹೀಗಿರಲು ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ನೀವು ವ್ಯರ್ಥವಾದದ್ದನ್ನು ನುಡಿದು ಸುಳ್ಳಾದದ್ದನ್ನು ಕಂಡದರಿಂದ ಇಗೋ, ನಿಮಗೆ ವಿರುದ್ಧವಾಗಿದ್ದೇನೆ, ಇದು ಕರ್ತನಾದ ಯೆಹೋವನೆಂಬ ನನ್ನ ನುಡಿ.


ಧರ್ಮನಿಂದಕರು ಪಟ್ಟಣಕ್ಕೆ ಬೆಂಕಿಯನ್ನು ಹತ್ತಿಸುವರು; ಜ್ಞಾನಿಗಳೋ ರೋಷಾಗ್ನಿಯನ್ನಾರಿಸುವರು.


ಅವನು ತನ್ನ ಪ್ರಾಣಾಪಾಯವನ್ನು ತಿಳಿಯದೆ ಬಾಣವು ತನ್ನ ಕಾಳಿಜವನ್ನು ತಿವಿಯುವ ಕಡೆಗೆ ತಟ್ಟನೆ ಅವಳ ಹಿಂದೆ ಹೋಗುತ್ತಾನೆ.


ನಿನ್ನ ಸಂಪತ್ತನ್ನು ಪರರು ತುಂಬಿಕೊಳ್ಳುವರು, ನೀನು ಅನ್ಯನ ಮನೆಯಲ್ಲಿ ದುಡಿಯುವಿ.


ಕರೆದು ಅವರಿಗೆ - ನೋಡಿರಿ, ನನ್ನ ಯಜಮಾನರು ಒಬ್ಬ ಇಬ್ರಿಯನನ್ನು ನಮ್ಮೊಳಗೆ ಸೇರಿಸಿ ನಮ್ಮನ್ನು ಅವಮಾನಕ್ಕೆ ಗುರಿಮಾಡಿದ್ದಾರೆ. ಅವನು ನನ್ನನ್ನು ಮಾನಭಂಗಪಡಿಸುವದಕ್ಕೆ ನನ್ನ ಹತ್ತಿರ ಬಂದನು. ನಾನು ಗಟ್ಟಿಯಾಗಿ ಕೂಗಿಕೊಂಡೆನು.


ನೋಡಿಕೋ, ನಿನ್ನ ಪುರುಷತ್ವವು ಪರಾಧೀನವಾದೀತು, ನಿನ್ನ ಆಯುಷ್ಯವು ಕ್ರೂರರ ವಶವಾದೀತು.


ಮಡಲಲ್ಲಿ ಬೆಂಕಿಯನ್ನಿಟ್ಟುಕೊಂಡರೆ ಬಟ್ಟೆ ಸುಡುವದಿಲ್ಲವೇ?


ಹೌದು, ಕಳ್ಳನಂತೆ ಹೊಂಚುಹಾಕುತ್ತಾಳೆ, ಜನರಲ್ಲಿ ದ್ರೋಹಿಗಳನ್ನು ಹೆಚ್ಚಿಸುತ್ತಾಳೆ.


ಹೀಗಿರುವಲ್ಲಿ ಅವನ ದಣಿಯ ಹೆಂಡತಿಯು ಅವನ ಮೇಲೆ ಕಣ್ಣು ಹಾಕಿ ತನ್ನೊಡನೆ ಸಂಗಮಕ್ಕೆ ಕರೆದಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು