Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 6:31 - ಕನ್ನಡ ಸತ್ಯವೇದವು J.V. (BSI)

31 ಅವನ ತಪ್ಪು ಬೈಲಾದರೆ ಅವನು ಏಳರಷ್ಟು ಕೊಡಬೇಕಾಗುವದು, ಅಥವಾ ತನ್ನ ಮನೆಯ ಆಸ್ತಿಯನ್ನೆಲ್ಲಾ ತೆತ್ತೇ ತೀರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

31 ಅವನ ತಪ್ಪು ಬಯಲಾದರೆ ಅವನು ಏಳರಷ್ಟು ಕೊಡಬೇಕಾಗುವುದು, ಅಥವಾ ತನ್ನ ಮನೆಯ ಆಸ್ತಿಯನ್ನೆಲ್ಲಾ ಕೊಟ್ಟು ತೀರಿಸಲೇಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

31 ಆದರೂ ಕಳವು ಬಯಲಾದರೆ ತೆರಬೇಕಾಗುವುದು ಏಳರಷ್ಟು; ತೆತ್ತೇ ತೀರಿಸಬೇಕಾಗುವುದು ಮನೆಯ ಆಸ್ತಿಪಾಸ್ತಿಯಷ್ಟು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

31 ಅವನು ಸಿಕ್ಕಿಕೊಂಡರೆ ಏಳರಷ್ಟು ಹಿಂದಕ್ಕೆ ಕೊಡಬೇಕಾಗುವುದು. ತನ್ನ ಮನೆಯ ಆಸ್ತಿಯನ್ನೆಲ್ಲಾ ಸಹ ಅವನು ಕೊಡಬೇಕಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 6:31
8 ತಿಳಿವುಗಳ ಹೋಲಿಕೆ  

ಆದರೆ ಜಕ್ಕಾಯನು ನಿಂತುಕೊಂಡು ಸ್ವಾವಿುಗೆ - ಸ್ವಾಮೀ, ನೋಡು, ನನ್ನ ಆಸ್ತಿಯಲ್ಲಿ ಅರ್ಧವನ್ನು ಬಡವರಿಗೆ ಕೊಡುತ್ತೇನೆ; ಮತ್ತು ನಾನು ಅನ್ಯಾಯವಾಗಿ ಯಾರಿಂದ ಏನಾದರೂ ಎಳಕೊಂಡದ್ದೇಯಾದರೆ ನಾಲ್ಕರಷ್ಟು ಹಿಂದಕ್ಕೆ ಕೊಡುತ್ತೇನೆ ಎಂದು ಹೇಳಿದನು.


ಅವನು ದುಡಿದದ್ದನ್ನು ಅನುಭವಿಸದೆ ಪರರ ಪಾಲು ಮಾಡುವನು, ಅವನ ಲಾಭದಿಂದಾಗತಕ್ಕ ಆನಂದವು ಅವನಿಗೆ ಸಿಕ್ಕುವದಿಲ್ಲ.


ಅವನು ಕರುಣೆಯಿಲ್ಲದೆ ಹೀಗೆ ಮಾಡಿದ್ದರಿಂದ ಆ ಕುರಿಮರಿಗಾಗಿ ನಾಲ್ಕರಷ್ಟು ಹಿಂದಕ್ಕೆ ಕೊಡಬೇಕು ಅಂದನು.


ಆ ಸಾಲಾ ತೀರಿಸುವದಕ್ಕೆ ಅವನಲ್ಲಿ ಏನೂ ಇಲ್ಲದ್ದರಿಂದ ಅವನ ಒಡೆಯನು ಅವನನ್ನೂ ಅವನ ಹೆಂಡತಿಮಕ್ಕಳನ್ನೂ ಅವನ ಬದುಕೆಲ್ಲವನ್ನೂ ಮಾರಿ ಅದನ್ನು ತೀರಿಸಬೇಕೆಂದು ಅಪ್ಪಣೆ ಮಾಡಿದನು.


ಅದಕ್ಕೆ ಯೆಹೋವನು - ಕಾಯಿನನ ಪ್ರಾಣವನ್ನು ತೆಗೆದವನಿಗೆ ಏಳರಷ್ಟು ಪ್ರತಿದಂಡನೆಯಾಗುವದು ಎಂದು ಹೇಳಿ ಅವನನ್ನು ಕಂಡವರು ಕೊಲ್ಲಕೂಡದಂತೆ ಅವನ ಮೇಲೆ ಒಂದು ಗುರುತಿಟ್ಟನು.


ಸ್ವಾವಿುಯೇ, ನಿನ್ನನ್ನು ನಿಂದಿಸಿದ ಸುತ್ತಣ ಜನಾಂಗಗಳ ಉಡಿಲಲ್ಲಿ ಏಳರಷ್ಟು ಪ್ರತಿಫಲವು ತುಂಬಿರುವಂತೆಮಾಡು.


ಆ ಕುಣಿ ಅಗೆಸಿದವನು ಉಂಟಾದ ನಷ್ಟಕ್ಕೆ ಪ್ರತಿಯಾಗಿ ಈಡುಕೊಡಬೇಕು. ಆ ದನದ ಒಡೆಯನಿಗೆ ಅದರ ಕ್ರಯವನ್ನು ಕೊಡಬೇಕು. ಸತ್ತ ದನವನ್ನು ತಾನೇ ತೆಗೆದುಕೊಳ್ಳಬಹುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು