Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 7:21 - ಕನ್ನಡ ಸತ್ಯವೇದವು J.V. (BSI)

21 ಅವನನ್ನು ತನ್ನ ಸವಿಮಾತುಗಳಿಂದ ಬಲಾತ್ಕರಿಸಿ ಬಹಳವಾಗಿ ಪ್ರೇರಿಸಿ ಸಮ್ಮತಿಪಡಿಸುತ್ತಾಳೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಅವಳು ಅವನನ್ನು ತನ್ನ ಸವಿಮಾತುಗಳಿಂದ ಮನವೊಲಿಸಿ, ಬಹಳವಾಗಿ ಪ್ರೇರೇಪಿಸಿ ಸಮ್ಮತಿಪಡಿಸುತ್ತಾಳೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ಹೀಗೆ ಮೋಹಕ ಮಾತುಗಳಿಂದ ಒತ್ತಾಯಪಡಿಸುತ್ತಾಳೆ, ಅತಿಯಾದ ಒಲುಮೆಯಿಂದ ಪುಸಲಾಯಿಸುತ್ತಾಳೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಅವಳು ಆ ಯೌವನಸ್ಥನನ್ನು ಪ್ರೇರೇಪಿಸಲು ಈ ಮಾತುಗಳನ್ನಾಡಿದಳು. ಆಕೆಯ ಸವಿನುಡಿಗಳು ಅವನನ್ನು ಮರುಳುಗೊಳಿಸಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಮನವೊಲಿಸುವ ಮಾತುಗಳಿಂದ ಅವಳು ಅವನನ್ನು ದಾರಿ ತಪ್ಪಿಸಿ, ಅವಳು ತನ್ನ ಮೋಹಕ ಮಾತುಗಳಿಂದ ಅವನನ್ನು ಆಕರ್ಷಿಸುತ್ತಾಳೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 7:21
14 ತಿಳಿವುಗಳ ಹೋಲಿಕೆ  

ಜಾರಸ್ತ್ರೀಯ ತುಟಿಗಳಲ್ಲಾದರೋ ಜೇನುಗರೆಯುವದು, ಅವಳ ಮಾತು ಎಣ್ಣೆಗಿಂತಲೂ ನಯವಾಗಿದೆ.


ಅವು ಜಾರಳಿಂದ, ಸವಿಮಾತನಾಡುವ ಪರಸ್ತ್ರೀಯಿಂದ, ನಿನ್ನನ್ನು ರಕ್ಷಿಸುವವು.


ಒಂದು ಸಾರಿ ಎಲೀಷನು ಶೂನೇವಿುಗೆ ಹೋದನು. ಅಲ್ಲಿನ ಒಬ್ಬ ಕುಲೀನ ಸ್ತ್ರೀಯು ಅವನನ್ನು ತನ್ನ ಮನೆಯಲ್ಲಿ ಊಟಮಾಡಬೇಕೆಂದು ಒತ್ತಾಯಪಡಿಸಿದಳು. ಅಂದಿನಿಂದ ಅವನು ಆ ಮಾರ್ಗದಿಂದ ಹೋಗುವಾಗೆಲ್ಲಾ ಆ ಮನೆಯಲ್ಲೇ ಊಟಮಾಡುತ್ತಿದ್ದನು.


ಆದರೆ ಅವರು - ನಮ್ಮ ಸಂಗಡ ಇರು, ಸಂಜೆಯಾಯಿತು, ಹೊತ್ತು ಇಳಿಯುತ್ತಾ ಬಂತು ಎಂದು ಆತನಿಗೆ ಹೇಳಿ ಬಲವಂತಮಾಡಲು ಆತನು ಅವರ ಕೂಡ ಇರುವದಕ್ಕೆ ಊರೊಳಕ್ಕೆ ಹೋದನು.


ಪ್ರತಿಯೊಬ್ಬರು ನೆರೆಯವರೊಡನೆ ಹುಸಿಯನ್ನಾಡುತ್ತಾರೆ. ಅವರು ವಂಚನೆಯ ತುಟಿಗಳಿಂದ ಹೊರಗೊಂದು ಒಳಗೊಂದು ಮಾತಾಡುತ್ತಾರೆ.


ಕ್ರಿಸ್ತನ ಪ್ರೀತಿಯು ನಮಗೆ ಒತ್ತಾಯಮಾಡುತ್ತದೆ; ಎಲ್ಲರಿಗೋಸ್ಕರ ಒಬ್ಬನು ಸತ್ತದ್ದರಿಂದ ಎಲ್ಲರೂ ಸತ್ತಂತಾಯಿತೆಂದು ನಿಶ್ಚಯಿಸಿಕೊಂಡೆವು.


ಅದು ಕೆಟ್ಟ ಹೆಂಗಸಿನಿಂದಲೂ ಪರಸ್ತ್ರೀಯ ನಾಲಿಗೆಯ ಸಿಹಿನುಡಿಯಿಂದಲೂ ನಿನ್ನನ್ನು ರಕ್ಷಿಸತಕ್ಕದ್ದಾಗಿದೆ.


ಆಕೆಯೂ ಆಕೆಯ ಮನೆಯವರೂ ದೀಕ್ಷಾಸ್ನಾನ ಮಾಡಿಸಿಕೊಂಡ ಮೇಲೆ ಆಕೆ - ನಾನು ಕರ್ತನನ್ನು ನಂಬಿದವಳೆಂದು ನಿಶ್ಚಯಿಸಿಕೊಂಡಿದ್ದರೆ ನನ್ನ ಮನೆಯಲ್ಲಿ ಬಂದು ಇರ್ರಿ ಎಂದು ಬೇಡಿಕೊಂಡು ನಮ್ಮನ್ನು ಬಲವಂತ ಮಾಡಿದಳು.


ಆಗ ಆ ಯಜಮಾನನು ತನ್ನ ಆಳಿಗೆ ಹೇಳಿದ್ದು - ನೀನು ಹಾದಿಗಳಿಗೂ ಬೇಲಿಗಳ ಬಳಿಗೂ ಹೋಗಿ ಅಲ್ಲಿ ಸಿಕ್ಕಿದವರನ್ನು ಬಲವಂತಮಾಡಿ ಒಳಕ್ಕೆ ಕರಕೊಂಡು ಬಾ, ನನ್ನ ಮನೆ ತುಂಬಲಿ.


ಅವನು - ಒಲ್ಲೆನು; ಊಟಮಾಡುವದಿಲ್ಲ ಅಂದನು. ಆದರೆ ಅವನ ಸೇವಕರೂ ಆ ಸ್ತ್ರೀಯೂ ಬಹಳವಾಗಿ ಬೇಡಿಕೊಂಡದರಿಂದ ಅವನು ಕಡೆಗೆ ಅವರ ಮಾತಿಗೆ ಒಪ್ಪಿ ನೆಲದಿಂದೆದ್ದು ಮಂಚದ ಮೇಲೆ ಕೂತುಕೊಂಡನು.


ಹೋರಿಯು ವಧ್ಯಸ್ಥಾನಕ್ಕೆ ಹೋಗುವ ಹಾಗೂ ಬೇಡಿಬಿದ್ದಿರುವ ಮೂರ್ಖನು ದಂಡನೆಗೆ ನಡೆಯುವಂತೆಯೂ ಪಕ್ಷಿಯು ಬಲೆಯ ಕಡೆಗೆ ಓಡುವ ಮೇರೆಗೂ


ಆಕೆಯು ಔತಣದ ಏಳು ದಿನಗಳಲ್ಲಿಯೂ ಅವನ ಮುಂದೆ ಅಳುತ್ತಿದ್ದಳು. ಏಳನೆಯ ದಿನದಲ್ಲಿ ಆಕೆಯು ಬಹಳವಾಗಿ ಪೀಡಿಸಿದ್ದರಿಂದ ಅವನು ಹೇಳಿಬಿಟ್ಟನು. ಆಕೆಯು ಒಗಟಿನ ಅರ್ಥವನ್ನು ತನ್ನ ಜನರಿಗೆ ತಿಳಿಸಿದಳು.


ಅವರು ನಾಲ್ಕು ಸಾರಿ ನನಗೆ ಅದೇ ಪ್ರಕಾರ ಹೇಳಿ ಕಳುಹಿಸಿದರೂ ನಾನು ಅದೇ ಉತ್ತರಕೊಟ್ಟೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು