Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 7:23 - ಕನ್ನಡ ಸತ್ಯವೇದವು J.V. (BSI)

23 ಅವನು ತನ್ನ ಪ್ರಾಣಾಪಾಯವನ್ನು ತಿಳಿಯದೆ ಬಾಣವು ತನ್ನ ಕಾಳಿಜವನ್ನು ತಿವಿಯುವ ಕಡೆಗೆ ತಟ್ಟನೆ ಅವಳ ಹಿಂದೆ ಹೋಗುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಪಕ್ಷಿಯು ಬಲೆಯ ಕಡೆಗೆ ಓಡುವಂತೆಯೂ, ಅವನು ತನ್ನ ಪ್ರಾಣಾಪಾಯವನ್ನು ತಿಳಿಯದೆ, ಬಾಣವು ತನ್ನ ಕಾಳಿಜವನ್ನು ತಿವಿಯುವ ಮೇರೆಗೂ, ಅವನು ತಟ್ಟನೆ ಅವಳ ಹಿಂದೆ ಹೋಗುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ಉರುಳಿನತ್ತ ಹಾರುವ ಹಕ್ಕಿಯಂತೆ, ಕರುಳನ್ನು ತಿವಿಯುವ ಬಾಣದಂತೆ, ತನ್ನ ಪ್ರಾಣಕ್ಕಿರುವ ಅಪಾಯವನ್ನು ತಿಳಿಯದೆ, ಅವಳನ್ನು ತಡಮಾಡದೆ ಹಿಂಬಾಲಿಸುತ್ತಾನೆ ಆತ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ಅವನು ತನ್ನ ಪ್ರಾಣವು ಅಪಾಯದಲ್ಲಿರುವುದನ್ನು ತಿಳಿಯದೆ, ಒಂದು ಬಾಣವು ತನ್ನ ಕಾಳಿಜವನ್ನು ತಿವಿಯುವವರೆಗೆ, ಪಕ್ಷಿಯು ಬಲೆಯ ಕಡೆಗೆ ಓಡುವ ಹಾಗೆ ಅವನು ತಟ್ಟನೆ ಅವಳ ಹಿಂದೆ ಹೋಗುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 7:23
8 ತಿಳಿವುಗಳ ಹೋಲಿಕೆ  

ಮನುಷ್ಯನೋ ತನ್ನ ಕಾಲಗತಿಯನ್ನು ತಿಳಿಯನಷ್ಟೆ; ಮೀನುಗಳು ಕೆಟ್ಟ ಬಲೆಗೂ ಪಕ್ಷಿಗಳು ಜಾಲಕ್ಕೂ ಸಿಕ್ಕಿಬೀಳುವ ಹಾಗೆ ನರಜನ್ಮದವರು ತಮ್ಮ ಮೇಲೆ ತಟ್ಟನೆ ಬೀಳುವ ಕೆಟ್ಟ ಕಾಲಪಾಶಕ್ಕೆ ಸಿಕ್ಕಿಕೊಳ್ಳುವರು.


ಆ ಮನೆಯು ಪ್ರೇತನಿವಾಸವೆಂದೂ ಅವಳ ಅತಿಥಿಗಳು ಅಗಾಧಪಾತಾಳದಲ್ಲಿ ಬಿದ್ದಿರುವರೆಂದೂ ಅವನಿಗೆ ತಿಳಿಯದು.


ಪಕ್ಷಿಗಳ ಕಣ್ಣೆದುರಿಗೆ ಬಲೆಯನ್ನೊಡ್ಡುವದು ವ್ಯರ್ಥ.


ವೇಶ್ಯೆಯಿಂದ ಯಾವನಿಗಾದರೂ ಒಂದು ರೊಟ್ಟಿ ಮಾತ್ರ ಗತಿಯಾಗುವದು, ಪರಸ್ತ್ರೀಯೋ ಅಮೂಲ್ಯವಾದ ಜೀವವನ್ನು ಬೇಟೆಯಾಡುವಳು.


ವ್ಯಭಿಚಾರಿಯೋ ಕೇವಲ ಬುದ್ಧಿಶೂನ್ಯನು, ಇಂಥಾ ಕಾರ್ಯವನ್ನು ಮಾಡುವವನು ತನ್ನನ್ನೇ ನಾಶಪಡಿಸಿಕೊಳ್ಳುವನು.


ಹೋರಿಯು ವಧ್ಯಸ್ಥಾನಕ್ಕೆ ಹೋಗುವ ಹಾಗೂ ಬೇಡಿಬಿದ್ದಿರುವ ಮೂರ್ಖನು ದಂಡನೆಗೆ ನಡೆಯುವಂತೆಯೂ ಪಕ್ಷಿಯು ಬಲೆಯ ಕಡೆಗೆ ಓಡುವ ಮೇರೆಗೂ


ಆಗ ಮರಣಕ್ಕಿಂತ ಹೆಚ್ಚು ವಿಷವೊಂದು ಕಂಡುಬಂತು, ಯಾವದಂದರೆ, ಕೆಟ್ಟ ಹೆಂಗಸೇ. ಅವಳು ಬೋನು, ಅವಳ ಹೃದಯ ಬಲೆ, ಅವಳ ಕೈ ಪಾಶ; ದೇವರು ಒಲಿದವನು ಇವಳಿಂದ ತಪ್ಪಿಸಿಕೊಳ್ಳುವನು; ಪಾಪಿಯೋ ಅವಳ ಕೈಗೆ ಸಿಕ್ಕಿಬೀಳುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು