Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 7:3 - ಕನ್ನಡ ಸತ್ಯವೇದವು J.V. (BSI)

3 ಅವುಗಳನ್ನು ನಿನ್ನ ಬೆರಳುಗಳಿಗೆ ಉಂಗುರವಾಗಿ ಇಟ್ಟುಕೋ, ಹೃದಯದ ಹಲಗೆಯಲ್ಲಿ ಬರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಅವುಗಳನ್ನು ನಿನ್ನ ಬೆರಳುಗಳಿಗೆ ಉಂಗುರವಾಗಿ ಧರಿಸಿಕೋ, ಹೃದಯದ ಹಲಗೆಯಲ್ಲಿ ಅವುಗಳನ್ನು ಬರೆದುಕೋ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಅವು ನಿನ್ನ ಬೆರಳಿಗೆ ಉಂಗುರವಾಗಿರಲಿ, ನಿನ್ನ ಹೃದಯದ ಹಲಗೆಯಲ್ಲಿ ಬರೆದಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಅವುಗಳನ್ನು ನಿನ್ನ ಬೆರಳುಗಳ ಸುತ್ತಲೂ ಕಟ್ಟಿಕೊ; ನಿನ್ನ ಹೃದಯದ ಮೇಲೆ ಬರೆದುಕೊ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಅವುಗಳನ್ನು ನಿನ್ನ ಬೆರಳುಗಳಿಗೆ ಉಂಗುರವಾಗಿಟ್ಟುಕೋ; ನಿನ್ನ ಹೃದಯದ ಹಲಗೆಯಲ್ಲಿ ಅವುಗಳನ್ನು ಬರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 7:3
11 ತಿಳಿವುಗಳ ಹೋಲಿಕೆ  

ಪ್ರೀತಿಸತ್ಯತೆಗಳು ನಿನ್ನನ್ನು ಬಿಡದಿರಲಿ, ಅವುಗಳನ್ನು ನಿನ್ನ ಕೊರಳಿಗೆ ಕಟ್ಟು, ನಿನ್ನ ಹೃದಯದ ಹಲಗೆಯಲ್ಲಿ ಅವುಗಳನ್ನು ಬರೆ;


ಯೆಹೋವನು ಇಂತೆನ್ನುತ್ತಾನೆ - ಆ ದಿನಗಳು ಬಂದಮೇಲೆ ನಾನು ಇಸ್ರಾಯೇಲ್ ವಂಶದವರೊಂದಿಗೆ ಮಾಡಿಕೊಳ್ಳುವ ಒಡಂಬಡಿಕೆಯು ಹೀಗಿರುವದು - ನನ್ನ ಧರ್ಮೋಪದೇಶವನ್ನು ಅವರ ಅಂತರಂಗದಲ್ಲಿ ಇಡುವೆನು, ಅವರ ಹೃದಯದೊಳಗೆ ಅದನ್ನು ಬರೆಯುವೆನು; ನಾನು ಅವರಿಗೆ ದೇವರಾಗಿರುವೆನು, ಅವರು ನನಗೆ ಪ್ರಜೆಯಾಗಿರುವರು;


[ಯೆಹೋವನು ನನಗೆ ಹೀಗೆ ಹೇಳಿದನು] - ನೀನೀಗ ಮನೆಗೆ ಹೋಗಿ ಈ ಮಾತು ಮುಂದಿನ ಕಾಲದಲ್ಲಿ ಶಾಶ್ವತ ಸಾಕ್ಷಿಯಾಗಿರುವಂತೆ ಇವರೆದುರಿಗೆ ಹಲಿಗೆಯ ಮೇಲೆ ಕೆತ್ತು, ಪುಸ್ತಕದಲ್ಲಿ ಬರೆ.


ಕ್ರಿಸ್ತನು ನಮ್ಮ ಕೈಯಿಂದ ಬರಸಿಕೊಟ್ಟ ಪತ್ರವಾಗಿದ್ದೀರೆಂಬದು ಪ್ರತ್ಯಕ್ಷವಾಗಿಯೇ ಇದೆ; ಅದು ಮಸಿಯಿಂದ ಬರೆದದ್ದಲ್ಲ, ಜೀವವುಳ್ಳ ದೇವರ ಆತ್ಮನಿಂದಲೇ ಬರೆದದ್ದು; ಕಲ್ಲಿನ ಮೇಲೆಯಲ್ಲ, ಮನುಷ್ಯ ಹೃದಯಗಳೆಂಬ ಹಲಿಗೆಗಳ ಮೇಲೆ ಬರೆದದ್ದು.


ಅವುಗಳನ್ನು ನಿನ್ನ ಹೃದಯಕ್ಕೆ ನಿರಂತರವಾಗಿ ಬಂಧಿಸು, ನಿನ್ನ ಕಂಠಕ್ಕೆ ಧರಿಸಿಕೋ.


ಯೆಹೂದದ ಪಾಪವು ಉಕ್ಕಿನ ಕಂಠದಿಂದಲೂ ವಜ್ರದ ಮೊನೆಯಿಂದಲೂ ಲಿಖಿತವಾಗಿದೆ; ಅವರ ಹೃದಯದ ಹಲಗೆಯಲ್ಲಿಯೂ ಅವರ ಯಜ್ಞವೇದಿಗಳ ಕೊಂಬುಗಳಲ್ಲಿಯೂ ಕೆತ್ತಿದೆ.


ಜ್ಞಾನವನ್ನು ಅಕ್ಕಾ ಎಂದು ಹೇಳು, ವಿವೇಕವನ್ನು ಆಪ್ತವಿುತ್ರಳೇ ಎಂದು ಕರೆ.


ನಿನ್ನ ದೃಷ್ಟಿಯು ಅವುಗಳ ಮೇಲೆ ತಪ್ಪದಿರಲಿ, ಅವುಗಳನ್ನು ನಿನ್ನ ಹೃದಯದೊಳಗೆ ಇಟ್ಟುಕೋ.


ನಾನಂತೂ ಅವರೊಂದಿಗೆ ಈ ಒಡಂಬಡಿಕೆಯನ್ನು ಮಾಡಿಕೊಳ್ಳುವೆನು, ನೋಡಿರಿ; ನಿಮ್ಮಲ್ಲಿ ಆವೇಶಿಸಿರುವ ನನ್ನ ಆತ್ಮವೂ ನಿಮ್ಮ ಬಾಯಿಗೆ ನಾನು ಕೊಟ್ಟಿರುವ ಮಾತುಗಳೂ ನಿಮ್ಮ ಬಾಯಿಂದಾಗಲಿ ನಿಮ್ಮ ಸಂತತಿಯ ಬಾಯಿಂದಾಗಲಿ ನಿಮ್ಮ ಸಂತತಿಯ ಸಂತಾನದ ಬಾಯಿಂದಾಗಲಿ ಇಂದಿನಿಂದ ಎಂದಿಗೂ ತೊಲಗುವದಿಲ್ಲ ಎಂದು ಯೆಹೋವನು ಅನ್ನುತ್ತಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು