Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 7:7 - ಕನ್ನಡ ಸತ್ಯವೇದವು J.V. (BSI)

7 ಅಲ್ಪಬುದ್ಧಿಯುಳ್ಳ ಅನೇಕ ಯುವಕರು ಕಾಣಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಅಲ್ಪಬುದ್ಧಿಯುಳ್ಳ ಅನೇಕ ಯುವಕರು ಕಾಣಿಸಿದರು. ಅವರಲ್ಲಿ ಜ್ಞಾನಹೀನನಾದ ಒಬ್ಬ ಯೌವನಸ್ಥನನ್ನು ಕಂಡೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಜನಸಾಮಾನ್ಯರ ನಡುವೆ, ಯೌವನಸ್ಥರ ಮಧ್ಯೆ ಮತಿಗೆಟ್ಟ ಯುವಕನೊಬ್ಬ ನಡೆವುದನ್ನು ನಾನು ಕಂಡೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಅನೇಕ ಮೂಢ ಯೌವನಸ್ಥರನ್ನು ಕಂಡೆನು. ಅವರಲ್ಲಿ ತುಂಬಾ ಮೂಢನಾಗಿದ್ದ ಒಬ್ಬ ಯೌವನಸ್ಥನನ್ನು ಗಮನಿಸಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಮುಗ್ಧರ ನಡುವೆ, ಯುವಕರ ಮಧ್ಯದಲ್ಲಿ, ತಿಳುವಳಿಕೆಯಿಲ್ಲದ ಯೌವನಸ್ಥನನ್ನು ಕಂಡೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 7:7
24 ತಿಳಿವುಗಳ ಹೋಲಿಕೆ  

ವ್ಯಭಿಚಾರಿಯೋ ಕೇವಲ ಬುದ್ಧಿಶೂನ್ಯನು, ಇಂಥಾ ಕಾರ್ಯವನ್ನು ಮಾಡುವವನು ತನ್ನನ್ನೇ ನಾಶಪಡಿಸಿಕೊಳ್ಳುವನು.


ಮೂಢರೇ, ಮೂಢತನವನ್ನು ಎಂದಿನ ತನಕ ಪ್ರೀತಿಸುವಿರಿ? ಧರ್ಮನಿಂದಕರು ನಿಂದಿಸುವದಕ್ಕೆ ಎಷ್ಟು ಕಾಲ ಇಷ್ಟಪಡುವರು? ಜ್ಞಾನಹೀನರು ತಿಳುವಳಿಕೆಯನ್ನು ಎಷ್ಟರವರೆಗೆ ಹಗೆಮಾಡುವರು?


ಆತನು - ನಿಮಗೂ ಇನ್ನು ಬುದ್ಧಿ ಇಲ್ಲವೇ?


ನನ್ನ ಜನರು ಮೂರ್ಖರು, ನನ್ನನ್ನು ತಿಳಿಯರು; ಮೂಢಸಂತತಿಯವರು, ಅವಿವೇಕಿಗಳು; ದುಷ್ಕಾರ್ಯದಲ್ಲಿ ನಿಪುಣರು, ಸತ್ಕಾರ್ಯವನ್ನು ಮಾಡಲರಿಯರು.


ವಿವೇಕಿಯ ತುಟಿಗಳಿಂದ ಜ್ಞಾನ; ಬುದ್ಧಿಹೀನನ ಬೆನ್ನಿಗೆ ಬೆತ್ತ.


ಮೂಢನಾಗಿರುವವನು ಈ ಕಡೆಗೆ ತಿರುಗಲಿ ಎಂದು ಕೂಗಿ


ಮೂಢರೇ, ಜಾಣತನವನ್ನು ಕಲಿತುಕೊಳ್ಳಿರಿ, ಜ್ಞಾನಹೀನರೇ, ಬುದ್ಧಿಯನ್ನು ಗ್ರಹಿಸಿರಿ.


ಮೂಢರು ತಮ್ಮ ಉದಾಸೀನತೆಯಿಂದಲೇ ಹತರಾಗುವರು, ಜ್ಞಾನಹೀನರು ತಮ್ಮ ನಿಶ್ಚಿಂತೆಯಿಂದಲೇ ನಾಶವಾಗುವರು.


ಇವು ಮೂಢರಿಗೆ ಜಾಣತನವನ್ನೂ ಯೌವನಸ್ಥರಿಗೆ ತಿಳುವಳಿಕೆಯನ್ನೂ ಬುದ್ಧಿಯನ್ನೂ ಉಂಟುಮಾಡುವವು.


ನಿನ್ನ ವಾಕ್ಯವಿವರಣೆಯಿಂದ ಯುಕ್ತಿಹೀನರಿಗೆ ಜ್ಞಾನೋದಯವಾಗುವದು.


ಜಾಣನು ಕೇಡನ್ನು ಕಂಡು ಅಡಗಿಕೊಳ್ಳುವನು; ಬುದ್ಧಿಹೀನನು ಮುಂದೆ ಹೋಗಿ ನಷ್ಟಪಡುವನು.


ಸೋಮಾರಿಯ ಹೊಲದ ಮೇಲೆಯೂ ಬುದ್ಧಿಹೀನನ ತೋಟದ ಮೇಲೆಯೂ ಹಾದು ಹೋದೆನು.


ಜಾಣನು ಕೇಡನ್ನು ಕಂಡು ಅಡಗಿಕೊಳ್ಳುವನು; ಬುದ್ಧಿಹೀನನು ಮುಂದೆ ಹೋಗಿ ನಷ್ಟಪಡುವನು.


ಧರ್ಮನಿಂದಕನಿಗೆ ಪೆಟ್ಟುಹೊಡೆ, [ನೋಡಿದ] ಮಂದಮತಿಯು ಜಾಣನಾಗುವನು; ವಿವೇಕಿಯನ್ನು ಗದರಿಸು, ತಾನೇ ತಿಳುವಳಿಕೆಯನ್ನು ಗ್ರಹಿಸುವನು.


ತಿಳುವಳಿಕೆಯಿಲ್ಲದೆ ಕೋರುವದು ಅಯುಕ್ತ; ದುಡುಕುವ ಕಾಲು ದಾರಿ ತಪ್ಪುವದು.


ಮೂರ್ಖರಿಗೆ ಮೂರ್ಖತನವೇ ಸ್ವಾಸ್ತ್ಯ; ಜಾಣರಿಗೆ ಜ್ಞಾನವೇ ಮುಕುಟ.


ಮೂಢನು ಯಾವ ಮಾತನ್ನಾದರೂ ನಂಬುವನು; ಜಾಣನು ತನ್ನ ನಡತೆಯನ್ನು ಚೆನ್ನಾಗಿ ಗಮನಿಸುವನು.


ದುಡಿದು ಹೊಲಗೇಯುವವನು ಹೊಟ್ಟೆತುಂಬಾ ಉಣ್ಣುವನು; ವ್ಯರ್ಥಕಾರ್ಯಾಸಕ್ತನು ಬುದ್ಧಿಹೀನನೇ.


ಯೆಹೋವನ ಧರ್ಮಶಾಸ್ತ್ರವು ಲೋಪವಿಲ್ಲದ್ದು; ಅದು ಪ್ರಾಣವನ್ನು ಉಜ್ಜೀವಿಸಮಾಡುವಂಥದ್ದು. ಯೆಹೋವನ ಕಟ್ಟಳೆ ನಂಬಿಕೆಗೆ ಯೋಗ್ಯವಾದದ್ದು; ಬುದ್ಧಿಹೀನರಿಗೆ ವಿವೇಕಪ್ರದವಾಗಿದೆ.


ಜಾರನು ತಾನು ಯಾರ ಕಣ್ಣಿಗೂ ಬೀಳಬಾರದೆಂದು ಸಂಜೆಯನ್ನೆದುರುನೋಡುತ್ತಿದ್ದು ಮುಖಕ್ಕೆ ಮುಸುಕು ಹಾಕಿಕೊಳ್ಳುವನು.


ಕಂದಾ, ನನ್ನ ಜ್ಞಾನೋಪದೇಶವನ್ನು ಆಲಿಸು, ನನ್ನ ವಿವೇಕಬೋಧೆಗೆ ಕಿವಿಗೊಡು.


ಕಂದಾ, ತಂದೆಯ ಆಜ್ಞೆಯನ್ನು ಕೈಕೊಳ್ಳು, ತಾಯಿಯ ಉಪದೇಶವನ್ನು ಬಿಡಬೇಡ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು