Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 8:1 - ಕನ್ನಡ ಸತ್ಯವೇದವು J.V. (BSI)

1 ಜ್ಞಾನವೆಂಬಾಕೆಯು ಕರೆಯುತ್ತಾಳೆ, ವಿವೇಕವೆಂಬ ಆಕೆಯೇ ದನಿಗೈಯುತ್ತಾಳೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಜ್ಞಾನವೆಂಬಾಕೆಯು ಕರೆಯುತ್ತಾಳಲ್ಲವೇ? ವಿವೇಕವೆಂಬ ಆಕೆಯು ಧ್ವನಿಗೈಯುತ್ತಾಳಲ್ಲವೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಕೇಳಿ, ಜ್ಞಾನವೆಂಬಾಕೆ ಕರೆಯುತ್ತಾಳೆ ವಿವೇಕವೆಂಬಾಕೆ ಕೂಗಿ ಕರೆಯುತ್ತಿದ್ದಾಳೆ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಕೇಳಿ! ಜ್ಞಾನವೆಂಬಾಕೆಯೂ ವಿವೇಕವೆಂಬಾಕೆಯೂ “ಕಿವಿಗೊಡಿರಿ” ಎಂದು ನಿಮ್ಮನ್ನು ಕೂಗಿ ಕರೆಯುತ್ತಿದ್ದಾಳೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಜ್ಞಾನವು ಕರೆಯುತ್ತದಲ್ಲವೋ? ತಿಳುವಳಿಕೆ ಎಂಬಾಕೆಯು ತನ್ನ ಸ್ವರವನ್ನು ಎತ್ತಿ ಕೂಗಿ ಕರೆಯುವುದಿಲ್ಲವೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 8:1
17 ತಿಳಿವುಗಳ ಹೋಲಿಕೆ  

ಆ ಜಾತ್ರೆಯ ಮಹಾದಿವಸವಾದ ಕಡೇ ದಿನದಲ್ಲಿ ಯೇಸು ನಿಂತುಕೊಂಡು - ಯಾವನಿಗಾದರೂ ನೀರಡಿಕೆಯಾಗಿದ್ದರೆ ಅವನು ನನ್ನ ಬಳಿಗೆ ಬಂದು ಕುಡಿಯಲಿ.


ಪಾಪಪರಿಹಾರಕ್ಕೋಸ್ಕರ ದೇವರ ಕಡೆಗೆ ತಿರುಗಿಕೊಳ್ಳಬೇಕೆಂಬ ಮಾತು ಯೆರೂಸಲೇಮು ಮೊದಲುಗೊಂಡು ಸಮಸ್ತ ದೇಶದವರಿಗೂ ಆತನ ಹೆಸರಿನಲ್ಲಿ ಸಾರಲ್ಪಡುವದೆಂತಲೂ ಬರೆದದೆ.


ಕರ್ತನ ದಾರಿಯನ್ನು ಸಿದ್ಧಮಾಡಿರಿ; ಆತನ ಹಾದಿಗಳನ್ನು ನೆಟ್ಟಗೆ ಮಾಡಿರಿ ಎಂದು ಅಡವಿಯಲ್ಲಿ ಕೂಗುವವನ ಶಬ್ದವದೆ ಎಂಬದಾಗಿ ಪ್ರವಾದಿಯಾದ ಯೆಶಾಯನಿಂದ ಸೂಚಿತನಾದವನು ಇವನೇ.


ಆದರೆ ಪವಿತ್ರಾತ್ಮ ನಿಮ್ಮ ಮೇಲೆ ಬರಲು ನೀವು ಬಲವನ್ನು ಹೊಂದಿ ಯೆರೂಸಲೇವಿುನಲ್ಲಿಯೂ ಎಲ್ಲಾ ಯೂದಾಯ ಸಮಾರ್ಯ ಸೀಮೆಗಳಲ್ಲಿಯೂ ಭೂಲೋಕದ ಕಟ್ಟಕಡೆಯವರೆಗೂ ನನಗೆ ಸಾಕ್ಷಿಗಳಾಗಿರಬೇಕು ಅಂದನು.


ಮೊದಲು ಎಲ್ಲಾ ಜನಾಂಗಗಳಿಗೆ ಸುವಾರ್ತೆಯು ಸಾರಲ್ಪಡಬೇಕು.


ಆತನು - ನೀನು ಹೋಗು, ನಾನು ನಿನ್ನನ್ನು ದೂರಕ್ಕೆ ಅನ್ಯಜನರ ಬಳಿಗೆ ಕಳುಹಿಸುತ್ತೇನೆಂದು ಹೇಳಿದನು.


ಅಂದಿನಿಂದ ಯೇಸು - ಪರಲೋಕರಾಜ್ಯವು ಸಮೀಪಿಸಿತು; ದೇವರ ಕಡೆಗೆ ತಿರುಗಿಕೊಳ್ಳಿರಿ ಎಂದು ಸಾರಿ ಹೇಳುವದಕ್ಕೆ ಪ್ರಾರಂಭಿಸಿದನು.


ಆದರೆ ದೇವರಿಂದ ಕರಿಸಿಕೊಂಡವರು ಯೆಹೂದ್ಯರಾಗಲಿ ಗ್ರೀಕರಾಗಲಿ ಅವರಿಗೆ ಇಂಥವನು ದೇವರ ಶಕ್ತಿಯೂ ದೇವರ ಜ್ಞಾನವೂ ಆಗಿರುವ ಕ್ರಿಸ್ತನೇ.


ಕಂದಾ, ನನ್ನ ಮಾತುಗಳನ್ನು ಅಂಗೀಕರಿಸಿ ನನ್ನ ವಿಧಿಗಳನ್ನು ನಿಧಿಯಂತೆ ಕಾಪಾಡಿಕೋ,


ಕಂದಾ, ನನ್ನ ಉಪದೇಶವನ್ನು ಮರೆಯಬೇಡ, ನನ್ನ ಆಜ್ಞೆಗಳನ್ನು ಮನಃಪೂರ್ವಕವಾಗಿ ನಡಿಸು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು