Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 8:11 - ಕನ್ನಡ ಸತ್ಯವೇದವು J.V. (BSI)

11 ಜ್ಞಾನವು ಹವಳಕ್ಕಿಂತಲೂ ಶ್ರೇಷ್ಠ, ಇಷ್ಟವಸ್ತುಗಳೆಲ್ಲವೂ ಅದಕ್ಕೆ ಸಮವಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಜ್ಞಾನವು ಹವಳಕ್ಕಿಂತಲೂ ಶ್ರೇಷ್ಠ, ಇಷ್ಟವಸ್ತುಗಳೆಲ್ಲವೂ ಅದಕ್ಕೆ ಸಮವಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಜ್ಞಾನವೆಂಬುದು ಹವಳಕ್ಕಿಂತ ಶ್ರೇಷ್ಠ, ಇಷ್ಟವಸ್ತುಗಳಾವುವು ಅದಕ್ಕೆ ಸಾಟಿಯಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಜ್ಞಾನವು ಹವಳಕ್ಕಿಂತಲೂ ಶ್ರೇಷ್ಠ, ಮನುಷ್ಯನ ಇಷ್ಟ ವಸ್ತುಗಳೆಲ್ಲವೂ ಅದಕ್ಕೆ ಸಮವಲ್ಲ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಏಕೆಂದರೆ ಮಾಣಿಕ್ಯಗಳಿಗಿಂತ ಜ್ಞಾನವು ಅಮೂಲ್ಯವಾದದ್ದು. ಅಪೇಕ್ಷಿಸತಕ್ಕ ಯಾವ ವಸ್ತುಗಳನ್ನು ಅದಕ್ಕೆ ಹೋಲಿಸಲಾಗದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 8:11
14 ತಿಳಿವುಗಳ ಹೋಲಿಕೆ  

ನಿಜವಾಗಿ ನಿನ್ನ ಆಜ್ಞೆಗಳು ಬಂಗಾರಕ್ಕಿಂತಲೂ ಅಪರಂಜಿಗಿಂತಲೂ ನನಗೆ ಬಹುಪ್ರಿಯವಾಗಿವೆ.


ಅವು ಬಂಗಾರಕ್ಕಿಂತಲೂ ಅಪರಂಜಿರಾಶಿಗಿಂತಲೂ ಅಪೇಕ್ಷಿಸತಕ್ಕವುಗಳು. ಅವು ಜೇನಿಗಿಂತಲೂ ಶೋಧಿಸಿದ ಜೇನು ತುಪ್ಪಕ್ಕಿಂತಲೂ ಸಿಹಿಯಾಗಿವೆ.


ಒಬ್ಬ ಮನುಷ್ಯನು ಲೋಕವನ್ನೆಲ್ಲಾ ಸಂಪಾದಿಸಿಕೊಂಡರೂ ಪ್ರಾಣನಷ್ಟಪಟ್ಟರೆ ಅವನಿಗೆ ಪ್ರಯೋಜನವೇನು? ಅಥವಾ ಒಬ್ಬನು ತನ್ನ ಪ್ರಾಣಕ್ಕೆ ಏನು ಈಡು ಕೊಟ್ಟಾನು?


ಬಂಗಾರಕ್ಕಿಂತಲೂ ಜ್ಞಾನವನ್ನು ಪಡೆಯುವದು ಎಷ್ಟೋ ಮೇಲು; ಬೆಳ್ಳಿಗಿಂತಲೂ ವಿವೇಕವನ್ನು ಹೊಂದುವದು ಲೇಸು.


ಹೊನ್ನು ಉಂಟು, ಹವಳದ ರಾಶಿ ಉಂಟು, ಆದರೆ ಜ್ಞಾನದ ತುಟಿಗಳೇ ಅಮೂಲ್ಯಾಭರಣ.


ನೀನು ಉಸಿರಿದ ಧರ್ಮಶಾಸ್ತ್ರವು ಸಾವಿರಾರು ಚಿನ್ನಬೆಳ್ಳಿಯ ನಾಣ್ಯಗಳಿಗಿಂತಲೂ ನನಗೆ ಅತಿಪ್ರಿಯವಾಗಿದೆ.


ನಿನ್ನ ನುಡಿಗಳು ನನ್ನ ನಾಲಿಗೆಗೆ ಎಷ್ಟೋ ರುಚಿಯಾಗಿವೆ; ಅವು ನನ್ನ ಬಾಯಿಗೆ ಜೇನುತುಪ್ಪಕ್ಕಿಂತಲೂ ಸಿಹಿಯಾಗಿವೆ.


ಗುಣವತಿಯಾದ ಸತಿಯು ಎಲ್ಲಿ ಸಿಕ್ಕಾಳು? ಆಕೆಯು ಹವಳಕ್ಕಿಂತಲೂ ಬಹು ಅಮೂಲ್ಯಳು.


ಜ್ಞಾನವು ಸ್ವಾಸ್ತ್ಯದಂತೆ ಪ್ರಯೋಜನಕರ; ಹೌದು, ಸ್ವಾಸ್ತ್ಯಕ್ಕಿಂತ ಜೀವಿತರಿಗೆ ಉತ್ತಮೋತ್ತಮವಾಗಿದೆ.


ಮತ್ತು ಇದು ಸಮುದ್ರದ ಆಚೆ ಇರುವ ಮಾತಲ್ಲ. ನಮಗೋಸ್ಕರ ಸಮುದ್ರವನ್ನು ದಾಟಿ ಅದನ್ನು ತೆಗೆದುಕೊಂಡು ಬಂದು ನಮಗೆ ತಿಳಿಸುವಷ್ಟು ಶಕ್ತರು ಯಾರಿದ್ದಾರೆ? ಇದ್ದರೆ ನಾವು ಕೈಕೊಂಡೇವು ಅಂದುಕೊಳ್ಳುವದಕ್ಕೆ ಆಸ್ಪದವೇನೂ ಇಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು