Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 8:14 - ಕನ್ನಡ ಸತ್ಯವೇದವು J.V. (BSI)

14 ಸದ್ಯೋಚನೆಯೂ ಸುಜ್ಞಾನವೂ ಸಾಮರ್ಥ್ಯವೂ ನನ್ನಲ್ಲಿವೆ; ವಿವೇಕವು ನಾನೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಸದ್ಯೋಚನೆಯೂ, ಸುಜ್ಞಾನವೂ, ಸಾಮರ್ಥ್ಯವೂ ನನ್ನಲ್ಲಿವೆ, ವಿವೇಕವೂ ನಾನೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಸದಾಲೋಚನೆ, ಸುಜ್ಞಾನ, ವಿವೇಕ ನನ್ನಲ್ಲಿವೆ; ಎಂತಲೇ ಶಕ್ತಿಸಾಮರ್ಥ್ಯ ಹೊಂದಿರುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಒಳ್ಳೆಯ ಆಲೋಚನೆಗಳೂ ಒಳ್ಳೆಯ ತೀರ್ಪುಗಳೂ ನನ್ನವೇ. ವಿವೇಕವೂ ಸಾಮರ್ಥ್ಯವೂ ನನ್ನಲ್ಲಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಸಮಾಲೋಚನೆಯೂ ಒಳ್ಳೆಯ ನ್ಯಾಯವೂ ನನ್ನಲ್ಲಿದೆ. ನನ್ನಲ್ಲಿ ಒಳನೋಟವೂ ಶಕ್ತಿಯೂ ಇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 8:14
19 ತಿಳಿವುಗಳ ಹೋಲಿಕೆ  

ಹತ್ತು ಮಂದಿ ಅಧಿಕಾರಿಗಳಿಂದ ಪಟ್ಟಣಕ್ಕೆ ಉಂಟಾಗುವ ಬಲಕ್ಕಿಂತಲೂ ಜ್ಞಾನದಿಂದ ಜ್ಞಾನಿಗೆ ಉಂಟಾಗುವ ಬಲವು ಹೆಚ್ಚು.


ಆತನು ಯಾವನ ಆಲೋಚನೆಯನ್ನು ಕೇಳಿದನು? ಯಾವನು ಆತನಿಗೆ ಬುದ್ಧಿಕಲಿಸಿ ಆತನನ್ನು ನ್ಯಾಯಮಾರ್ಗದಲ್ಲಿ ನಡೆಯಿಸಿದನು? ಯಾವನು ಆತನಿಗೆ ಜ್ಞಾನವನ್ನು ಬೋಧಿಸಿ ವಿವೇಕಮಾರ್ಗವನ್ನು ತೋರಿಸಿದನು?


ಒಂದು ಮಗು ನಮಗಾಗಿ ಹುಟ್ಟಿದೆಯಷ್ಟೆ, ವರದ ಮಗನು ನಮಗೆ ದೊರೆತನು; ಆಡಳಿತವು ಅವನ ಬಾಹುವಿನ ಮೇಲಿರುವದು; ಅದ್ಭುತಸ್ವರೂಪನು, ಆಲೋಚನಾಕರ್ತನು, ಪರಾಕ್ರವಿುಯಾದ ದೇವರು, ನಿತ್ಯನಾದ ತಂದೆ, ಸಮಾಧಾನದ ಪ್ರಭು ಎಂಬವು ಅವನ ಹೆಸರು.


ತಾವು ಜ್ಞಾನಿಗಳೆಂದು ಹೇಳಿಕೊಂಡು ಹುಚ್ಚರಾದರು.


ಜ್ಞಾನಿಗೆ ತ್ರಾಣ, ಬಲ್ಲವನಿಗೆ ಬಹು ಬಲ.


ನೀವು ಕ್ರಿಸ್ತ ಯೇಸುವಿನಲ್ಲಿರುವದು ಆತನಿಂದಲೇ. ಕ್ರಿಸ್ತ ಯೇಸು ನಮಗೆ ದೇವರ ಕಡೆಯಿಂದ ಜ್ಞಾನವೂ ನೀತಿ ಶುದ್ಧೀಕರಣ ವಿಮೋಚನೆಗಳಿಗೆ ಕಾರಣನೂ ಆದನು.


ಆದರೆ ದೇವರಿಂದ ಕರಿಸಿಕೊಂಡವರು ಯೆಹೂದ್ಯರಾಗಲಿ ಗ್ರೀಕರಾಗಲಿ ಅವರಿಗೆ ಇಂಥವನು ದೇವರ ಶಕ್ತಿಯೂ ದೇವರ ಜ್ಞಾನವೂ ಆಗಿರುವ ಕ್ರಿಸ್ತನೇ.


ನಿಜವಾದ ಬೆಳಕು ಲೋಕಕ್ಕೆ ಬರುವದಾಗಿತ್ತು; ಆ ಬೆಳಕೇ ಪ್ರತಿ ಮನುಷ್ಯನಿಗೂ ಬೆಳಕನ್ನು ಕೊಡುವಂಥದು.


ನನ್ನ ಬುದ್ಧಿವಾದವನ್ನು ಲಕ್ಷ್ಯಕ್ಕೆ ತಾರದೆ ನನ್ನ ತಿದ್ದುಪಾಟನ್ನು ಬೇಡವೆಂದು ತಳ್ಳಿಬಿಟ್ಟಿದ್ದೀರಿ.


ಮಗನೇ, ಸುಜ್ಞಾನವನ್ನೂ ಬುದ್ಧಿಯನ್ನೂ ಭದ್ರವಾಗಿಟ್ಟುಕೋ, ನಿನ್ನ ದೃಷ್ಟಿಯು ಅವುಗಳ ಮೇಲೆ ತಪ್ಪದೇ ಇರಲಿ.


ಜನರಲ್ಲಿ ಸೇರದವನು ಸ್ವೇಚ್ಫಾನುಸಾರ ನಡೆಯುತ್ತಾ ಸಮಸ್ತ ಸುಜ್ಞಾನಕ್ಕೂ ರೇಗುವನು.


ಬುದ್ಧಿವಾದವನ್ನು ಕೇಳು, ಉಪದೇಶವನ್ನಾಲಿಸು, ಮುಂದೆ ಜ್ಞಾನಿಯಾಗುವಿ.


ಈ ವಿವೇಕವು ಸಹ ಅತಿಶಯಾಲೋಚನಾಪರನೂ ಸುಜ್ಞಾನಶ್ರೇಷ್ಠನೂ ಆಗಿರುವ ಸೇನಾಧೀಶ್ವರನಾದ ಯೆಹೋವನಿಂದಲೇ ಉಂಟಾಗುತ್ತದೆ.


ನೀನು ಆಲೋಚನೆಯಲ್ಲಿ ಶ್ರೇಷ್ಠನು, ಕಾರ್ಯದಲ್ಲಿ ಸಮರ್ಥನು; ನೀನು ಪ್ರತಿಯೊಬ್ಬನಿಗೂ ಅವನವನ ಕರ್ಮಕ್ಕೂ ನಡತೆಗೂ ತಕ್ಕ ಫಲವನ್ನು ಕೊಡಬೇಕೆಂದು ನರಜನ್ಮದವರ ಮಾರ್ಗಗಳನ್ನೆಲ್ಲಾ ಕಣ್ಣಾರೆ ನೋಡುತ್ತೀ;


ಆತನಲ್ಲಿ ಜ್ಞಾನವೂ ಶಕ್ತಿಯೂ ಉಂಟು, ಆಲೋಚನೆಯೂ ವಿವೇಕವೂ ಆತನವೇ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು