Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 8:20 - ಕನ್ನಡ ಸತ್ಯವೇದವು J.V. (BSI)

20 ನಾನು ಹಿಡಿದಿರುವ ದಾರಿಯು ನೀತಿಯೇ, ನ್ಯಾಯಮಾರ್ಗಗಳಲ್ಲಿ ನಡೆಯುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ನಾನು ಹಿಡಿದಿರುವ ದಾರಿಯು ನೀತಿಯೇ, ನ್ಯಾಯಮಾರ್ಗಗಳಲ್ಲಿ ನಡೆಯುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ನಾನು ಹಿಡಿದಿರುವ ಹಾದಿ ನೀತಿಯುತ ನಾನು ನಡೆಯುವುದು ನ್ಯಾಯಪಥ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ನಾನು ನೀತಿಮಾರ್ಗದಲ್ಲಿಯೂ ನ್ಯಾಯಮಾರ್ಗದಲ್ಲಿಯೂ ನಡೆಯುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ನೀತಿಯ ಮಾರ್ಗದಲ್ಲಿಯೂ ನ್ಯಾಯದ ದಾರಿ ನಡುವೆಯೂ ನಾನು ನಡೆಯುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 8:20
18 ತಿಳಿವುಗಳ ಹೋಲಿಕೆ  

ಆದದರಿಂದ ನೀವು ಸ್ವಲ್ಪವಾದರೂ ತಪ್ಪದೆ ನಿಮ್ಮ ದೇವರಾದ ಯೆಹೋವನು ಆಜ್ಞಾಪಿಸಿದಂತೆಯೇ ನಡೆದುಕೊಳ್ಳಬೇಕು.


[ಯೆಹೋವನು] - ನಿನ್ನನ್ನು ಉಪದೇಶಿಸಿ ನಡೆಯಬೇಕಾದ ಮಾರ್ಗವನ್ನು ತಿಳಿಸುವೆನು; ನಿನ್ನನ್ನು ಕಟಾಕ್ಷಿಸಿ ಆಲೋಚನೆ ಹೇಳುವೆನು [ಅನ್ನುತ್ತಾನಲ್ಲಾ].


ಹೊರಟುಬಂದ ಬಹು ಜನಾಂಗದವರು - ಬನ್ನಿರಿ, ಯೆಹೋವನ ಪರ್ವತಕ್ಕೆ, ಯಾಕೋಬ್ಯರ ದೇವರ ಮಂದಿರಕ್ಕೆ, ಹೋಗೋಣ! ಆತನು ತನ್ನ ಮಾರ್ಗಗಳ ವಿಷಯವಾಗಿ ನಮಗೆ ಬೋಧನೆ ಮಾಡುವನು, ನಾವು ಆತನ ದಾರಿಗಳಲ್ಲಿ ನಡೆಯುವೆವು ಎಂದು ಹೇಳುವರು. ಏಕಂದರೆ ಚೀಯೋನಿನಿಂದ ಧರ್ಮೋಪದೇಶವೂ ಯೆರೂಸಲೇವಿುನಿಂದ ಯೆಹೋವನ ವಾಕ್ಯವೂ ಹೊರಡುವವು.


ನೀನು ನಡೆಯುವಾಗ ಆ ಉಪದೇಶವು ನಿನ್ನನ್ನು ನಡಿಸುವದು, ಮಲಗಿಕೊಂಡಾಗ ಕಾಯುವದು, ಎಚ್ಚರಗೊಂಡಾಗ ನಿನ್ನೊಂದಿಗೆ ಮಾತಾಡುವದು.


ನಿನ್ನ ಎಲ್ಲಾ ನಡವಳಿಯಲ್ಲಿ ಆತನ ಚಿತ್ತಕ್ಕೆ ವಿಧೇಯನಾಗಿರು; ಆತನೇ ನಿನ್ನ ಮಾರ್ಗಗಳನ್ನು ಸರಾಗಮಾಡುವನು.


ಸಿಂಹಾಸನದ ಮಧ್ಯದಲ್ಲಿರುವ ಯಜ್ಞದ ಕುರಿಯಾದಾತನು ಅವರಿಗೆ ಕುರುಬನಂತಿದ್ದು ಜೀವಜಲದ ಒರತೆಗಳ ಬಳಿಗೆ ನಡಿಸುತ್ತಾನೆ. ದೇವರು ಅವರ ಕಣ್ಣೀರನ್ನೆಲ್ಲಾ ಒರಸಿಬಿಡುವನು ಎಂದು ಹೇಳಿದನು.


ಬಾಗಲು ಕಾಯುವವನು ಅವನಿಗೆ ಬಾಗಲನ್ನು ತೆರೆಯುತ್ತಾನೆ, ಕುರಿಗಳು ಅವನ ಸ್ವರಕ್ಕೆ ಕಿವಿಗೊಡುತ್ತವೆ.


ಅವರಿಗೆ ಹಸಿವೆ ಬಾಯಾರಿಕೆಗಳು ಆಗವು. ಝಳವೂ ಬಿಸಿಲೂ ಬಡಿಯವು; ಅವರನ್ನು ಕರುಣಿಸುವಾತನು ದಾರಿತೋರಿಸುತ್ತಾ ನೀರುಕ್ಕುವ ಒರತೆಗಳ ಬಳಿಯಲ್ಲಿ ನಡಿಸುವನು.


ನನ್ನ ಪ್ರಾಣವನ್ನು ಉಜ್ಜೀವಿಸಮಾಡಿ ತನ್ನ ಹೆಸರಿಗೆ ತಕ್ಕಂತೆ ನೀತಿಮಾರ್ಗದಲ್ಲಿ ನನ್ನನ್ನು ನಡಿಸುತ್ತಾನೆ.


ಇಗೋ, ನಾನು ಅವನನ್ನು ಜನಾಂಗಗಳಿಗೆ ಸಾಕ್ಷಿಯನ್ನಾಗಿಯೂ ನಾಯಕನನ್ನಾಗಿಯೂ ಅಧಿಪತಿಯನ್ನಾಗಿಯೂ ನೇವಿುಸಿದೆನು.


ಹೀಗಿರಲು ನೀನು ನೀತಿನ್ಯಾಯಗಳನ್ನೂ ಧರ್ಮವನ್ನೂ ಅಂದರೆ ಸಕಲ ಸನ್ಮಾರ್ಗಗಳನ್ನು ತಿಳಿದುಕೊಳ್ಳುವಿ.


ನನ್ನಿಂದಾಗುವ ಫಲವು ಬಂಗಾರಕ್ಕಿಂತಲೂ ಹೌದು ಅಪರಂಜಿಗಿಂತಲೂ ಉತ್ತಮ; ನನ್ನ ಮೂಲಕವಾದ ಆದಾಯವು ಚೊಕ್ಕ ಬೆಳ್ಳಿಗಿಂತಲೂ ಅಮೂಲ್ಯವಾಗಿದೆ.


ಹೀಗಿರಲು ನನ್ನನ್ನು ಪ್ರೀತಿಸುವವರಿಗೆ ಧನದ ಬಾಧ್ಯತೆಯನ್ನು ದೊರಕಿಸಿ ಅವರ ಬೊಕ್ಕಸಗಳನ್ನು ತುಂಬಿಸುವೆನು.


ಒಳ್ಳೆಯವರ ನಡತೆಯನ್ನು ಅನುಸರಿಸುವಂತೆ [ವಿವೇಕವು] ನಿನ್ನನ್ನು ಪ್ರೇರಿಸಿ ನೀತಿವಂತರ ಹಾದಿಗಳನ್ನು ಹಿಡಿಯುವ ಹಾಗೆ [ಮಾಡುವದು].


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು